ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್- 12ನೇ ಆರೋಪಿಯ ಬಂಧನ

Prakhara News
1 Min Read

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ.

ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದರು. ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್‌ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲಾ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Share This Article
Leave a Comment