ಪುತ್ತೂರು: ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ..! ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಹೈಕೋರ್ಟ್‌ ಜಾಮೀನು..!!

Prakhara News
0 Min Read

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.

ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.3ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಮುಗಿಸಿ ಆರೋಪಿಯನ್ನು ಮಂಗಳೂರು ಜೈಲಿನಿಂದ ಬಿಡುಗಡೆಗೊಳಿಸಿ ಕರೆತರಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು.ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ ಪಿ ಮತ್ತು ದೀಪಕ್ ರೈ ವಾದಿಸಿದ್ದರು.

Share This Article
Leave a Comment