ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ, ಜಾಮೀನು ಕೋರಿ ಮೂರನೇ ಆರೋಪಿ ಮಂಜುನಾಥ್/ಹರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.


ಆತ ಅನಾರೋಗ್ಯದ ಕಾರಣ ನೀಡಿ ಜಾಮೀನಿನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದ. ದೂರುದಾರರ ಪರ ಸರ್ಕಾರಿ ಅಭಿಯೋಜಕರು ವಾದಿಸಿ, ಆರೋಪಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದರು. ನ್ಯಾಯಾಧೀಶರು ಅವರ ವಾದವನ್ನು ಪುರಸ್ಕರಿಸಿದ್ದಾರೆ.
