ನಾಳೆ ಜನವರಿ 18 ರಂದು ಅರ್ಕುಳದಲ್ಲಿ ಹಿಂದು ಸಂಗಮ

Prakhara News
1 Min Read

ಅರ್ಕುಳ : ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಗರ ಹಾಗೂ ಅರ್ಕುಳ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 18-01-2026ರ ಆದಿತ್ಯವಾರ ಅರ್ಕುಳ ವಸತಿಯಲ್ಲಿ ಹಿಂದು ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಸಂಜೆ 3:30 ಗಂಟೆಗೆ ಅರ್ಕುಳ ನಾರಾಯಣಗುರು ಮಂದಿರದಿಂದ ಶ್ರೀ ಉಳ್ಳಾಕ್ಲು ಮಗ್ರಂತಾಯಿ ದೈವಸ್ಥಾನದ ಚೆಂಡಿನ ಗದ್ದೆಯವರೆಗೆ ವೈಭವದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಕುಣಿತ ಭಜನೆ, ಚೆಂಡೆ ವಾದನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿರುವ ಗಣ್ಯರು:
ಶ್ರೀ ವಜ್ರನಾಭ ಶೆಟ್ಟಿ (ಧರ್ಮಾಧಿಕಾರಿ, ಅರ್ಕುಳಬೀಡು), ಪಿ. ಎಸ್. ಪ್ರಕಾಶ್ ( ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹಕ), ವಿವೇಕ್ ಕೋಟ್ಯಾನ್ ಕೊಡಕ್ಕಲ್ (ಅಧ್ಯಕ್ಷರು, ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು), ಸದಾನಂದ ಆಳ್ವ ಹಾಗೂ ಇತರ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಸಂಜೆ 6:00 ಗಂಟೆಗೆ ಸಾಯಿಶಕ್ತಿ ಕಲಾಬಳಗ, ಉರ್ವಚಿಲಿಂಬಿ ಮಂಗಳೂರು ಇವರಿಂದ “ಜೋಡುಜೀಟಿಗೆ” ಎಂಬ ಅದ್ದೂರಿ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜನಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment