ಧರ್ಮಸ್ಥಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಕುಡ್ಲ ರಾಂಪೇಜ್ ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ಸಿಬ್ಬಂದಿ ಮೇಲೆ ಕೆಲ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ಅಲ್ಲದೇ ಕ್ಯಾಮೆರಾ ಒಡೆದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.


ಗಾಯಾಳು ಯೂಟ್ಯೂಬರ್ಸ್ ಉಜಿರೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸೌಜನ್ಯ ಮನೆಗೆ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಭೇಟಿ ನೀಡಿದ್ದರು. ಈ ವೇಳೆ ಪ್ರತಿಕ್ರಿಯೆ ಪಡೆಯೋದಕ್ಕೆ ಯುಟ್ಯೂಬರ್ಸ್ ತೆರಳಿದ್ದಾರೆ. ಆಗ ಸ್ಥಳೀಯರು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಒಂದು KSRP ತುಕಡಿ ನಿಯೋಜನೆ ಮಾಡಲಾಗಿದೆ.
