ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ಐ ನೇಣು ಬಿಗಿದು ಆತ್ಮಹತ್ಯೆ..!!

Prakhara News
1 Min Read

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಖೀರಪ್ಪ ಕಳೆದ ನಾಲ್ಕು ತಿಂಗಳಿನಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ದಿನಾಂಕ 19.07.2025 ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ್ದರು, ರವಿವಾರ ಬೆಳಿಗ್ಗೆ ಠಾಣೆಯಿಂದ ಕರೆ ಮಾಡಿದಾಗ ಸ್ವೀಕರಿಸದ ಹಿನ್ನಲೆ ಠಾಣಾ ಸಿಬ್ಬಂದಿ ಮನೆಗೆ ತೆರಳಿ ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯುಕ್ತಿಕ ಹಾಗೂ ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Share This Article
Leave a Comment