BREAKING NEWS..!ಬಂಟ್ವಾಳ : ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಭೀಕರ ದಾಳಿ.

Prakhara News
1 Min Read

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿದ್ದಾನೆ.

ಪ್ರಾಥಮಿಕ ಮಾಹಿತಿಯಂತೆ, ಸ್ಥಳೀಯ ವ್ಯಾಪಾರಿ ಜವ್ವರ್ ಎಂಬಾತ ಈ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ದಾಳಿಯಿಂದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಸ್ ನಿಲ್ದಾಣದ ಸುತ್ತಮುತ್ತ ರಕ್ತದ ಗುರುತುಗಳು ಕಂಡುಬಂದಿದ್ದು, ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನ ಹಾಗೂ ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

Share This Article
Leave a Comment