ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!

Prakhara News
0 Min Read

ಬಂಟ್ವಾಳ: ತಾಲೂಕಿನ ಶಾಂತಿ ಅಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನಡೆದಿದೆ.

ಅಪಘಾತದಲ್ಲಿ ಪಾದಚಾರಿಗಳಾದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್ ಅಲಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment