ಬೆಳ್ತಂಗಡಿ: ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಪಲ್ಟಿಯಾದ ಓಮ್ನಿ ಕಾರು

Prakhara News
1 Min Read

ಬೆಳ್ತಂಗಡಿ : ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ.

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ.

ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಓರ್ವ ಮಹಿಳೆ ಓಮ್ನಿ ಕಾರಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಆಕೆಯನ್ನು ರಕ್ಷಿಸಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

Share This Article
Leave a Comment