ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿ

Prakhara News
0 Min Read

ಬೆಳ್ತಂಗಡಿ :ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ನಡೆದಿದೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ SIT ರಚಿಸಲಾಗಿತ್ತು. ಎಸ್ಪಿ ಸಿ.ಎ.ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರು ಕಾರಿನಲ್ಲಿದ್ದರು. ಚಿಕ್ಕಮಗಳೂರು ಎಸ್ಪಿ ದಯಾಮ ಭೇಟಿಯಾಗಲು ತೆರಳುವಾಗ ಘಟನೆ ನಡೆದಿದೆ.

ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಎಸ್ಐಟಿ ಪ್ರಕರಣದ ಬಗ್ಗೆ ಮಾತುಕತೆ ನಡೆಸಲು ಹೋಗುವಾಗ ಘಟನೆ ನಡೆದಿದೆ. ಚಾಲಕ, ಎಸ್ಪಿ ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್ ,ಓರ್ವ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

Share This Article
Leave a Comment