ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ!

Prakhara News
1 Min Read

ಬೆಳ್ತಂಗಡಿ: ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ತೀವ್ರತೆಗೆ ಕಾಂಕ್ರೀಟ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದು, ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿರುವುದಾಗಿ ತಿಳಿದು ಬಂದಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment