ಮಂತ್ರಾಲಯಂ ಪರಿಮಳ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಗೌರವ

Prakhara News
1 Min Read

ಬೆಳ್ತಂಗಡಿ: ಮಂತ್ರಾಲಯಂ ಪರಿಮಳ ಪ್ರಶಸ್ತಿ–2026ಕ್ಕೆ ಭಾಜನರಾದ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಶಾಸಕರಾದ ಹರೀಶ್ ಪೂಂಜ ಅವರು ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ಸೇವೆ ಹಾಗೂ ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಸೇವೆಯನ್ನು ಗುರುತಿಸಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅವರನ್ನು ಅಭಿನಂದಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಹಾಗೂ ಜಯಾನಂದ ಗೌಡ, ಮಂಗಳೂರು ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ “ಮನ್ ಕಿ ಬಾತ್” ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ಉಪಸ್ಥಿತರಿದ್ದರು.

Share This Article
Leave a Comment