ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಬೆಂಗಾಲ್ – ಅಸ್ಸಾಂ-ಪುದುಚೇರಿ ವಿಜಯೋತ್ಸವ ಆಚರಣೆ: “ಚರುಂಬುರಿ ತಿಂದ ಮೋದಿ ಬೀದಿಗೆ ಬಿದ್ದ ದೀದಿ” ಘೋಷಣೆ ಕೂಗಿದ ಕಾರ್ಯಕರ್ತರು

Prakhara News
1 Min Read

ಮಂಗಳೂರು: ಈಗಾಗಲೇ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವು ಬಹುತೇಕ ನಿಶ್ಚಿತವಾಗುತ್ತಿದ್ದಂತೆ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ಕೂಡ ಬಿಜೆಪಿ ನಾಯಕರು ಕಾರ್ಯಕರ್ತರು ಸೇರಿ ಸಿಹಿ ಹಾಗೂ ಚರುಂಬುರಿ ಹಂಚುವ ಮೂಲಕ ಗೆಲುವಿನ ಸಂಭ್ರಮಾಚರಣೆ ನಡೆಸಿದರು.
ವಿಶೇಷವಾಗಿ “ಚರುಂಬುರಿ ತಿಂದ ಮೋದಿ ಬೀದಿಗೆ ಬಿದ್ದ ದೀದಿ” ಎಂಬ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಮಮತಾ ಬ್ಯಾನರ್ಜಿಯವರಿಗೆ ಗೇಲಿ ಮಾಡಿದ್ದಾರೆ.

ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ಕವಿತಾ ಸನಿಲ್ ಹಾಗೂ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Share This Article
Leave a Comment