ಬೆಂಗಳೂರು : ಧರ್ಮಸ್ಥಳ ಅವಹೇಳನ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್.

Prakhara News
1 Min Read

ಬೆಂಗಳೂರು : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾವೇರಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, 2023 ಡಿಸೆಂಬರ್ 4ರಂದು ಉಜಿರೆಯಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಗಿರೀಶ್ ಮಾಡಿದ ಭಾಷಣದ ವಿಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರವಾಗಿತ್ತು. ಈ ಭಾಷಣದಲ್ಲಿ ಧರ್ಮಸ್ಥಳ ಹಾಗೂ ಅಲ್ಲಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹೇಳಿಕೆಗಳಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಮತ್ತು ಮಹಿಳೆಯರ ಗೌರವಕ್ಕೆ ಅವಮಾನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share This Article
Leave a Comment