ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದ್ದು , ನಟ ಹಾಗೂ ನಿರ್ಮಾಪಕರಾಗಿದ್ದ ದಿಲೀಪ್ ರಾಜ್ ರವರು ನಿಧನ ಹೊಂದಿದ್ದಾರೆ.


ಇಂದು ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು , ಆದರೆ ಚಿಕಿತ್ಸೆ ಫಲಿಸದೆ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಹಲವಾರು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದ ದಿಲೀಪ್ ರಾಜ್ ಕಿರುತೆರೆಯಲ್ಲಿ ರಿಯಾಲಿಟಿ ಶೋ ಗಳನ್ನು ನಿರ್ಮಾಣ ಮಾಡಿ ಅದೆಷ್ಟೋ ಪ್ರತಿಭೆಗಳನ್ನು ಹೊರತಂದಿದ್ದರು. ಚಿತ್ರರಂಗ ಒಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ಮಾಪಕರನ್ನು ಕಳೆದುಕೊಂಡಿರುವುದು ಬೇಸರದ ಸಂಗತಿ.



