ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಎಚ್.ಡಿ ದೇವೇಗೌಡರವರು ಇಂದು ತಮ್ಮ 94 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿರುವ ಡಾ| ಆರ್. ಧನರಾಜ್ ರವರು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು.


ವಿಶೇಷವಾಗಿ ನಮ್ಮ ತುಳುನಾಡಿನ ಧ್ವಜದ ಸಂಕೇತ ಹೊಂದಿರುವ ಶಾಲನ್ನು ಹೊದಿಸಿ ಹೂಗುಚ್ಛವನ್ನು ನೀಡುವ ಮೂಲಕ ಶುಭಾಶಯ ತಿಳಿಸಿದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಆರ್ . ಧನರಾಜ್ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಪರಿಶೀಲನ ಸಮಿತಿಗೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



