ಶಿವಮೊಗ್ಗ ಮೂಲದ ಕರ್ನಾಟಕ ರಣಜಿ ತಂಡದ ಆಟಗಾರ ಅಕ್ಷಯ್ ಎಸ್.ಎಲ್ ಹೃದಯಾಘಾತದಿಂದ ಸಾವು

Prakhara News
1 Min Read

ಬೆಂಗಳೂರು: ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್‌.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಆಟಗಾರರಾಗಿದ್ದ ಅಕ್ಷಯ್ ಮಧ್ಯಮ ವೇಗದ ಬೌಲರ್ ಹಾಗೂ ಉತ್ತಮ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಸದ್ಯ ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

KSCA ಲೀಗ್ ಪಂದ್ಯಾವಳಿ ವೇಳೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ KSCA nassur memorial shield ಏಕದಿನ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ.

KSCA 3rd ಡಿವಿಸನ್ ಲೀಗ್ ಪಂದ್ಯವಾಡುತ್ತಿದ್ದಾಗ ಅಕ್ಷಯ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ನಾಲ್ಕು ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಅಕ್ಷಯ್ ಹೊರಬಂದಿದ್ದರು. ಬಳಿಕ ನೀರು ಕುಡಿಯುತ್ತಿದ್ದಂತೆಯೇ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದರು.

ನಡೆಯುತ್ತಿದ್ದ ಪಂದ್ಯದಲ್ಲಿ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿ ಕೇವಲ 19 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು.
ಇನ್ನು ಅಕ್ಷಯ್ ಕರ್ನಾಟಕ ಪರ 6 ರಣಜಿ, 3 ಏಕದಿನ ಪಂದ್ಯಗಳನ್ನಾಡಿದ್ದರು.
ತಕ್ಷಣವೇ ಅಕ್ಷಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದೀಗ ಅವಲಹಳ್ಳಿಯ ಈಸ್ಟ್ ಪಾಯಿಂಟ್‌ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಅಕ್ಷಯ್ ನಿಧನಕ್ಕೆ ಕರ್ನಾಟಕ ಕ್ರಿಕೆಟ್ ವಲಯ ಕಂಬನಿ ಮಿಡಿದಿದೆ.

Share This Article
Leave a Comment