ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಡಿಐಜಿ ಸೋಮಶೇಖರ್ ಅರೆಸ್ಟ್..!

Prakhara News
1 Min Read

ಬೆಂಗಳೂರು: 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಈ ನಕಲಿ ದಾಖಲೆಯನ್ನು ಜೈಲಿನ SDA ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಇಬ್ಬರನ್ನೂ ಈಗಾಗಲೇ ಬಂಧಿಸಲಾಗಿತ್ತು. ಇದೀಗ DIG ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.

2018 ರಲ್ಲಿ ನಕಲಿ ಆದೇಶ ಸೃಷ್ಟಿಸಿ ಕೈದಿ ಬಿಡುಗಡೆ
2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಕಲಿ ದಾಖಲೆಯನ್ನ ಜೈಲಿನ ಎಸ್‌ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪವಿದೆ.

ನಕಲಿ ಆದೇಶದ ಆಧಾರದ ಮೇಲೆ 2018ರ ನವೆಂಬರ್ 13ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್‌ನನ್ನ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಎಸ್. ಇಬ್ಬರನ್ನೂ ಈಗಾಗಲೇ ಬಂಧನ ಮಾಡಲಾಗಿದೆ. ಇದೀಗ ಪ್ರಕರಣದಲ್ಲಿ ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಪರಪ್ಪನ ಅಗ್ರಹಾರ ಪೊಲೀಸರು ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment