ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ ಮಾಸಿಕ ₹2,000 ಸಹಾಯಧನ ಫಲಾನುಭವಿಗಳ ಹಕ್ಕಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಲಿಖಿತ ಹೇಳಿಕೆ ಸಲ್ಲಿಸಿದೆ.


ಜನಕಲ್ಯಾಣ ಮತ್ತು ಪರೋಪಕಾರಿ ಯೋಜನೆಗಳ ಅನುಷ್ಠಾನವು ಸರ್ಕಾರದ ಆಡಳಿತಾತ್ಮಕ ನಿರ್ಧಾರ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಇಂತಹ ಯೋಜನೆಗಳನ್ನು ಫಲಾನುಭವಿಗಳು ತಮ್ಮ ಕಾನೂನುಬದ್ಧ ಹಕ್ಕು ಎಂದು ಪ್ರತಿಪಾದಿಸಲು ಅಥವಾ ಯೋಜನೆ ಜಾರಿಗೆ ನ್ಯಾಯಾಲಯದ ಮೊರೆ ಹೋಗಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.

1.26 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ! 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ತಲಾ ₹2,000 ಸಹಾಯಧನ ಬಾಕಿ! ಎರಡು ಕಂತುಗಳ ಒಟ್ಟು ₹5,000 ಕೋಟಿ ಬಿಡುಗಡೆಗೆ ವಿಳಂಬ! ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ! ಆರ್. ಗಂಗಾ ಮತ್ತು ಜಿ.ಡಿ. ಪವಿತ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ! ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಪರಿಸ್ಥಿತಿಯೇ ಮಾನದಂಡ ಎಂದು ಸರ್ಕಾರದ ವಾದ!

ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಅರ್ಜಿಯ ವಿಚಾರಣೆ ನಡೆಸಿತು.ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ವಿಚಾರವಾಗಿ ಸರ್ಕಾರ ಹೈಕೋರ್ಟ್ಗೆ ಸಲ್ಲಿಸಿರುವ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.



