ಬೆಳ್ತಂಗಡಿ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್- ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್

Prakhara News
1 Min Read

ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು  ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

Share This Article
Leave a Comment