ಅಬುಧಾಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ: ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವು..!

Prakhara News
1 Min Read

ನವದೆಹಲಿ: ಅಬುಧಾಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಹೋದರರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮನೆಕೆಲಸದ ಮಹಿಳೆಯೂ ಸಾವನ್ನಪ್ಪಿದ್ದು, ಮಕ್ಕಳ ಪೋಷಕರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಲಪ್ಪುರಂ ಜಿಲ್ಲೆಯ ಕಿಝಿಸ್ಸೇರಿ ಪುಲಿಯಕ್ಕೋಡ್ ನಿವಾಸಿಗಳಾದ ಮಲಯನ್ ಅಬ್ದುಲ್ ಲತೀಫ್ ಮತ್ತು ರುಕ್ಸಾನಾ ದಂಪತಿಯ ಮಕ್ಕಳಾದ ಆಶಾಸ್ (14), ಅಮ್ಮರ್ (12), ಅಝಂ(7) ಮತ್ತು ಅಯಾಶ್ (5) ಅವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಮ್ರವಟ್ಟಂ ಮೂಲದ ಬುಶ್ರಾ ಕೂಡ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಗಾಯಗೊಂಡಿರುವ ಅಬ್ದುಲ್ ಲತೀಫ್ ಮತ್ತು ರುಕ್ಸಾನಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Share This Article
Leave a Comment