ಚಿಕ್ಕಮಗಳೂರು : ಗೆಲುವಿನ ಬೆನ್ನಲ್ಲೇ ಡಿ.ಎನ್. ಜೀವರಾಜ್ ವಿರುದ್ಧ ಎಫ್‌ಐಆರ್.

Prakhara News
1 Min Read

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿನ ಮೇರೆಗೆ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಪ್ರಕರಣವನ್ನು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಯಲ್ಲಿ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡಿ.ಎನ್. ಜೀವರಾಜ್ ಜೊತೆಗೆ ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಅಂಚೆ ಮತ ಎಣಿಕೆ ವೇಳೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳಿ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಮತಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸರಿಯಾಗಿ ಸೀಲ್ ಮಾಡಲಾಗಿರಲಿಲ್ಲ ಹಾಗೂ ಟ್ರಂಕ್‌ಗಳ ಲಾಕ್‌ಗಳು ಮುರಿದಿದ್ದವು ಎಂಬ ಗಂಭೀರ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮತಪತ್ರಗಳ ಟ್ಯಾಂಪರಿಂಗ್ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ವಂಚನೆ, ಕ್ರಿಮಿನಲ್‌ ಸಂಚು ಹಾಗೂ ಕಳಪೆ ದಾಖಲೆ (ಫೋರ್ಜರಿ) ಪ್ರಕರಣಗಳಡಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share This Article
Leave a Comment