2019 ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡರನಿಗೆ ಹಲ್ಲೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು ಸದರಿ ಪ್ರಕರಣದಲ್ಲಿ 23 ಮಂದಿ ಆರೋಪಿಗಳ ವಿರುದ್ಧ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ಪೊಲೀಸರು ಅಂತಿಮ ವರದಿಯನ್ನು ಸಲ್ಲಿಸಿದ್ದರು. ಸದ್ರಿ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡ ಒಂದನೇ ಹೆಚ್ಚುವರಿ ನ್ಯಾಯಾಲಯ ಶಿರಸಿ ಸಾಕ್ಷಿಗಳ ವಿಚಾರಣೆ ಮಾಡಿದ ನಂತರ 23 ಆರೋಪಿಗಳ ಪೈಕಿ 16 ಆರೋಪಿಗಳನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಆರೋಪಿಗಳ ಪರವಾಗಿ ಮಂಗಳೂರಿನ ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ನ ವಕೀಲರಾದ ಆಸಿಫ್ ಬೈಕಾಡಿ, ಒಮರ್ ಫಾರೂಕ್ ಮುಲ್ಕಿ, ಇಜಾಜ್ ಅಹಮದ್ ಉಳ್ಳಾಲ ವಾದಿಸಿದ್ದಾರೆ



