ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್​, ಪವಿತ್ರಾಗೌಡ ಸೇರಿ 7 ಜನರ ಜಾಮೀನು ರದ್ದು

Prakhara News
1 Min Read

ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್‌ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್​ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಹೆಚ್ಚು ಸಮಯ ಅವರು ಜೈಲಿನಲ್ಲಿ ಇರಬೇಕಾಯಿತು.

ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ಈಗ ಸುಪ್ರೀಂ ತೀರ್ಪು ನೀಡಿದೆ.

Share This Article
Leave a Comment