ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ

Prakhara News
1 Min Read

ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.​

ಜುಲೈ 30ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಎಂಬುವವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕೃಷ್ಣ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.​

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಧರ್ಮಸ್ಥಳ ಠಾಣೆ ಪೊಲೀಸರು, ಕಾರು ಚಾಲಕ ಶರತ್‌ನನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸಿದ್ದರು. ಆ ಬಳಿಕ ಆಗಸ್ಟ್ 22ರಂದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ಸೆ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Share This Article
Leave a Comment