ಬಂಗ್ಲೆಗುಡ್ಡದಲ್ಲಿ ಶೋಧ: ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ..!!

Prakhara News
1 Min Read

ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ.

ಹೌದು ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ.

ಈ ವೇಳೆ ಎಸ್ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದೆ. ಲೋಹದ ಪೈಪ್‌ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ ರಾಸಾಯನಿಕ ಅಥವಾ ಜೈವಿಕ ಅಂಶಗಳಿಗೆ ಪ್ರತಿಕ್ರಿಯೆ ತೋರದೆ DNA ಅಥವಾ ರಕ್ತದ ಅಂಶಗಳನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Share This Article
Leave a Comment