ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವ ಪರಮೇಶ್ವರ್

Prakhara News
1 Min Read

ಬೆಂಗಳೂರು:  ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿಪಂಜರ ಸಿಗುತ್ತೆ. ಅದರ ಬಗ್ಗೆ ತನಿಖೆ ನಡೆಸಲು ಎಫ್ಎಸ್ಎಲ್ ಗೆ ಕಳುಹಿಸಿಕೊಡಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ ಎಂದರು.

ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಒಂದೊಂದು ಹೇಳಿಕೆ ನೀಡಲಾಗುತ್ತಿದೆ. ಈಗ ಅನಗತ್ಯ ಚರ್ಚೆ ಬೇಡ, ತನಿಖೆ ಬಳಿಕ ಸತ್ಯಾಂಶ ಹೊರಬರುತ್ತೆ. ತನಿಖೆ ನಡೆಯುತ್ತಿರುವಾಗ ಏನೂ ಹೇಳಲು ಆಗಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.

Share This Article
Leave a Comment