ಬೆಳ್ತಂಗಡಿ:ಧರ್ಮಸ್ಥಳ ಚಲೋ ಬಳಿಕ ಬಿಜೆಪಿ ಮುಖಂಡರು ಬೆಳ್ತಂಗಡಿಯಲ್ಲಿರುವ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಅವರು ಮಾತುಕತೆ ನಡೆಸಿದ್ದಾರೆ.


ಬಿಜೆಪಿ ಸಮಾವೇಶ ಮುಗಿಯುತ್ತಿದ್ದಂತೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೆರಳಿದರು. ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಅವರು ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯ ಹೋರಾಟದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ ಬಿವೈ ವಿಜಯೇಂದ್ರ ಮುಂದೆ ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಕಣ್ಣೀರು ಹಾಕಿರುವ ಘಟನೆ ಕೂಡ ನಡೆದಿದೆ.
ವಿಜಯೇಂದ್ರ ಅವರು ಸೌಜನ್ಯ ತಾಯಿ ಕುಸುಮಾವತಿ ಮತ್ತು ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು. ಈ ಸಂದರ್ಭ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಪ್ರೀತಮ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು. ಬೃಹತ್ ಸಮಾವೇಶ ನಡೆದ ಬೆನ್ನಲ್ಲೇ ನೀಡಿದ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿದ್ದು, ಬಿಜೆಪಿ ಮಾನವೀಯತೆ ಹಾಗೂ ಸಾಂತ್ವನದ ನಿಟ್ಟಿನಲ್ಲಿ ನಡೆಸಲಾಗಿದೆ ಎಂದು ಹೇಳಿದೆ.
