ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ- ಸಿಎಂ ಸಿದ್ಧರಾಮಯ್ಯ ಘೋಷಣೆ

Prakhara News
1 Min Read

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು.

ನಾಳೆಯಿಂದ ಅಕ್ಟೋಬರ್ 8, 9, 10 ಮೂರು ದಿನ ವರ್ಕಿಂಗ್ ಡೇಸ್ ಇದೆ. 13, 14, 15, 16, 17, 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಮೀಕ್ಷೆ ಹಿನ್ನಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು.

ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ.

Share This Article
Leave a Comment