ಗದಗ : ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.


ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಖಾಸಗಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡಾ ಆಗಿದ್ದಾರೆ. ಈಗ ಕಮಿಷನ್ ಹಣಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

