ಉಪ್ಪಿನಂಗಡಿ: ಪೆರ್ನೆಯಲ್ಲಿ ದನ ಕದ್ದು ಮಾಂಸ ಮಾಡಿದ ಘಟನೆ ವಿರೋಧಿಸಿ ಸೆಪ್ಟೆಂಬರ್ 6 ರಂದು ನಡೆದಿದ್ದ ಪ್ರತಿಭಚನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಗಣರಾಜ್ ಭಟ್ ಕೆದಿಲ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮಧ್ವಾರದ ಬಳಿ ಗೋ ಮಾತಾ ಸಂರಕ್ಷಣಾ ಚಳುವಳಿ ಪೆರ್ನೆ ಇದರ ವತಿಯಿಂದ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆ ವೇಳೆ ಗಣರಾಜ್ ಭಟ್ ಕೆದಿಲ ಅವರು ಗುಂಪು ಗುಂಪುಗಳ, ಸಮುದಾಯಗಳ ಮಧ್ಯೆ ವೈಮನಸ್ಸು ಬೆಳೆಸುವಂತೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ಆರೋಪದಲ್ಲಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 78/2025 ಕಲಂ: 353 (2)BNS 2023 ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
