ಗಿರೀಶ್ ಮಟ್ಟಣ್ಣನವರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ..!

Prakhara News
1 Min Read

ಬೆಳ್ತಂಗಡಿ: ಗಿರೀಶ್ ಮಟ್ಟಣ್ಣನವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಗಿರೀಶ್ ಮಟ್ಟಣನವರ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ಇದೀಗ ದೂರು ಸಲ್ಲಿಸಲಾಗಿದೆ. ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದು ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಕಾವೇರಿ ಕೇದಾರನಾಥ್ ಅವರ ನೇತೃತ್ವದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಇನ್ನು ನಿನ್ನೆ ಸಹ ಮಾನವ ಹಕ್ಕುಗಳ ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಕೆಗೆ ಸೂಚನೆ ನೀಡಲಾಗಿತ್ತು. ಈ ಮೂಲಕ ಗಿರೀಶ್ ಮಟ್ಟಣ್ಣನವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ರಾಜ್ಯ ಮಹಿಳಾ ಆಯೋಗಕ್ಕೆ ಗಿರೀಶ್ ವಿರುದ್ಧ ದಾಖಲಾಗಿದ್ದು ಧರ್ಮಸ್ಥಳದ ಸಾಮೂಹಿಕ ವಿವಾಹದ ಕುರಿತು ಮಾತನಾಡಿದ್ದು ಕಾವೇರಿ ಕೇದಾರನಾಥ ಅವರು ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

Share This Article
Leave a Comment