ಮತ್ತೆ ಬಂಗಾರದ ಬೆಲೆಯಲ್ಲಿ ಮಹಾ ಕುಸಿತ..!

Prakhara News
1 Min Read

ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದೆ. 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು ಸುಮಾರು 1260 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,078 ರುಪಾಯಿಗಳಾಗಿದೆ.

ಇನ್ನೊಂದೆಡೆ ಆಭರಣ ಚಿನ್ನವಾಗಿರುವ 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. ಇಂದು 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1150 ರುಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಇಂದು ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 12,905 ರುಪಾಯಿಗಳಾಗಿದೆ.

ಕಳೆದ 10 ದಿನಗಳಲ್ಲಿ ಇಂದು ಕನಿಷ್ಠ ಮೊತ್ತಕ್ಕೆ ಚಿನ್ನದ ಬೆಲೆಯಲ್ಲಿ ಕುಸಿತವಾಗಿದೆ. ಈ ಮೊದಲು ಜೂನ್ 30ರಂದು 24 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆ 14,193 ರುಪಾಯಿಗಳಾಗಿದ್ದೇ ಕಳೆದ 10 ದಿನದಲ್ಲಿನ ಕನಿಷ್ಠ ಕುಸಿತ ಎನಿಸಿಕೊಂಡಿತ್ತು.

ಇನ್ನು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದರೂ ಸಹಾ, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ನಿನ್ನೆಯ ದಿನಕ್ಕೆ ಹೋಲಿಸಿದರೆ, ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಏರಿಕೆ ಕಂಡಿದ್ದು, ಒಂದು ಕೆಜಿ ರೇಟ್ 2,40,000 ರುಪಾಯಿ ಆಗಿದೆ.

Share This Article
Leave a Comment