ಹಾಸನ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ,ಚಾಲಕನ ಸಮಯ ಪ್ರಜ್ಞೆಯಿಂದ 36 ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರು.

Prakhara News
1 Min Read

ಹಾಸನ : ಹಾಸನ ಜಿಲ್ಲೆಯ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಭಾರತ್‌ ಕಂಪನಿಗೆ ಸೇರಿದ ಖಾಸಗಿ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಮೊದಲು ಬಸ್‌ನ ಟೈರ್‌ಗೆ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿ, ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರನ್ನು ಎಚ್ಚರಿಸಿ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆ ಮತ್ತು ಬುದ್ಧಿವಂತಿಕೆಯಿಂದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಕ್ಷಣಾರ್ಧದಲ್ಲೇ ಬಸ್‌ನನ್ನೆಲ್ಲ ಆವರಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಆದರೆ ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article
Leave a Comment