ಉಡುಪಿ: ವಾಹನ ದಟ್ಟಣೆಯಿಂದ ಆಂಬ್ಯುಲೆನ್ಸ್ಗಳಿಗೆ ಕಾರ್ಯ ನಿರ್ವಹಿಸಲು ಕಷ್ಟವಾಗುತ್ತಿದ್ದು, ಈ ನಿಟ್ಟಿನಲ್ಲಿ ಹಿಂದೆ ಆರಂಭಿಸಿದ್ದ ಬೈಕ್ ಆಂಬ್ಯುಲೆನ್ಸ್ಗೆ ಮತ್ತೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.


ಉಡುಪಿಯಲ್ಲಿಂದು ಪ್ರಾಕೃತಿಕ ವಿಕೋಪ ಸಂಬಂಧ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತ ನಾಡುತಿದ್ದರು. ಬೋಟ್ ಅಂಬುಲೆನ್ಸ್ ಬಗ್ಗೆಯೂ ಚಿಂತನೆ ನಡೆಸಲಾಗಿದ್ದು, ಅದರ ಬಗ್ಗೆಯೂ ತೀರ್ಮಾನ ಕೈಗೊಳ್ಳ ಲಾದುವುದು. ಮೆಟ್ರೋದಲ್ಲಿ ರೋಗಿಗಳಿಗೆ ಅನುಕೂಲವಾದ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೆಟ್ರೋ ಮುಖ್ಯಸ್ಥರ ಜೊತೆ ಚರ್ಚಿಸಿ, ಮುಂದೆ ಅನುಷ್ಠಾನ ಮಾಡ ಲಾಗುವುದು. ಈ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವರ ಗಮನಕ್ಕೂ ತರಲಾಗಿದೆ ಎಂದರು.

ಎಸ್ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕನ್ನು ಕಸಿದು ಕೊಳ್ಳದಂತೆ ಜನಜಾಗೃತಿ ಮೂಡಿಸಲಾಗುತ್ತಿದೆ. ಎಸ್ಐಆರ್ ದುರು ಪಯೋಗ ಮಾಡಿ, ಮತದಾರರ ಪಟ್ಟಿಯಿಂದ ಅರ್ಹರನ್ನು ಕೈಬಿಡಬಾರದು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡು ವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಎಸ್ಐಆರ್ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಪ್ರಾತ್ರ ಇಲ್ಲ. ಮತದಾನದಿಂದ ಯಾರು ಕೂಡ ವಂಚಿತರಾಗಬಾರದು ಎಂಬುದು ರಾಜ್ಯ ಸರಕಾರದ ಉದ್ದೇಶವಾಗಿದ್ದು, ಆ ನಿಟ್ಟಿ ನಲ್ಲಿ ಜನಸಾಮಾನ್ಯರಿಗೆ ಸಹಾಯ ಮಾಡಲಾಗುತ್ತಿದೆ. ಎಸ್ಐಆರ್ ಸಮಸ್ಯೆ ಬಗ್ಗೆ ಆರೋಪಗಳಿದ್ದರೆ ಚುನಾವಣಾ ಆಯೋಗಕ್ಕೆ ತಿಳಿಸಬೇಕು. ಮುಂದೆ ಅವರು ಸೂಕ್ತ ಆದೇಶ ಮಾಡಬಹುದು. ಜನರು ಚುನಾವಣಾ ಆಯೋಗದ ಆದೇಶವನ್ನು ಪಾಲಿಸಬೇಕಾಗಿದೆ ಎಂದರು.
ಸಂತ್ರಸ್ತರಿಗೆ ಯಾವುದೇ ವಿಳಂಬ ಮಾಡದೆ ತಕ್ಷಣ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಹಶೀಲ್ದಾರ್ ಖಾತೆಗಳಲ್ಲಿ ತಲಾ 20ಲಕ್ಷ ರೂ. ಅನುದಾನವನ್ನು ಇಡಲಾಗಿದೆ. ಅದೇ ರೀತಿ ಮೆಸ್ಕಾಂ, ನಗರಾಭಿವೃದ್ಧಿ, ಅರಣ್ಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಅರಣ್ಯ ಇಲಾಖೆಯಲ್ಲಿ ಕಂಟ್ರೋಲ್ ರೂಂ(1926) ಪ್ರಾರಂಭಿಸಲಾಗಿದೆ. ಅದೇ ರೀತಿ ಜಿಲ್ಲಾಡಳಿತ ಮತ್ತು ಪೊಲೀಸ್ ಕಂಟ್ರೋಲ್ ರೂಂಗೂ ಯಾವುದೇ ತೊಂದರೆ ಆದಾಗ ಸಂಪರ್ಕಿಸ ಬಹುದು. ಅದಕ್ಕೆ ತಕ್ಷಣವೇ ಸ್ಪಂದಿಸಲಾಗುತ್ತದೆ. ವಿಪತ್ತು ಕಾಲದಲ್ಲಿ ಎಲ್ಲರೂ ಕೈಜೋಡಿಸಿಕೊಂಡು ಕೆಲಸ ಮಾಡಬೇಕಾಗಿದೆ. ಗ್ರಾಮೀಣ ಮಟ್ಟದಲ್ಲಿ ಗ್ರಾಪಂ ಆಡಳಿತಾಧಿಕಾರಿಗಳು, ಪಿಡಿಓಗಳು, ಸಂಘಸಂಸ್ಥೆ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳನ್ನು ಸೇರಿಕೊಂಡು ಟಾಸ್ಕ್ ಫೋರ್ಸ್ ರಚಿಸಿ ವಿಪತ್ತನ್ನು ಎದುರಿಸುವಂತೆ ಸೂಚಿಸಲಾಗಿದೆ.
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮ ರ್ಪಕ ನಿರ್ವಹಣೆ ಕುರಿತು ಮುಂದಿನ ವಾರದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.


