ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ,ಮರದ ಗೆಲ್ಲಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದ್ದಿದೆ. ಬರ್ಮುಡದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕೇರಳ ಗಡಿಭಾಗದ ಮಂಜೇಶ್ವರ ಠಾಣಾ ವ್ತಾಪ್ತಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿಹಾರ ಮೂಲದ ಅಪ್ರಾಪ್ತ ವಲಸೆ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದೇ ವ್ಯಕ್ತಿಯ ಶವ ಇದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
