ಜೈನರಿಗೆ ಅಪಮಾನ: ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ FIR

Prakhara News
2 Min Read

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್‌ ಹಾಗೂ ಯೂಟ್ಯೂಬರ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್‌ ದಾಖಲಾಗಿದೆ. ಧರ್ಮಸ್ಥಳಕ್ಕೆ ಸಂಬಂಧಿಸಿ ಮಾತನಾಡುತ್ತ ಜೈನ ಧರ್ಮೀಯರ ವಿರುದ್ಧ ಅವಮಾನಕರ ಹೇಳಿಕೆ, ಜೈನರ ನಂಬಿಕೆಗಳಿಗೆ ಧಕ್ಕೆ ಎಸಗಿದ್ದಾರೆ ಎಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದ ಅಜೀತ್‌ ಬಸಾಪುರ ಎಂಬವರು ಹುಬ್ಬಳ್ಳಿ ಗ್ರಾಮೀನ ಪೊಲೀಸ್‌ ಟಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಜೀರೊ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗಿರೀಶ ಮಟ್ಟೆಣ್ಣವರ್‌, ಕುಡ್ಲಾ ರಾಂಪೇಜ್‌ ಯೂಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಜೈನರು ಕ್ರೂರಿಗಳು, ದಬ್ಬಾಳಿಕೆ ಮಾಡುವವರು, ಮತಾಂಧರು ಎಂದು ಅಪಮಾನ ಮಾಡಿದ್ದಾರೆ. ಇದನ್ನು ಯೂಟ್ಯೂಬರ್‌ ಹಾಗೇ ಪ್ರಸಾರ ಮಾಡಿ ಸಮುದಾಯದ ಭಾವನಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ನಡುವೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಧರ್ಮಸ್ಥಳ ಪರ ಭಕ್ತರು ಸೋಮವಾರ ರಾಜ್ಯದ ಹಲವೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಕುರಿತು ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಆಧಾರರಹಿತ ಹೇಳಿಕೆಗಳ ಹಿಂದೆ ಪಿತೂರಿ ಇದೆ, ದೂರು ದಾಖಲಿಸಿದ ಅನಾಮಧೇಯ ವ್ಯಕ್ತಿ ಶವಗಳನ್ನು ಪತ್ತೆಹಚ್ಚಲು ವಿಫಲವಾದರೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕೆಂದು ಹಾಸನ ಧರ್ಮಸ್ಥಳ ಹಿತರಕ್ಷಣಾ ಸಮಿತಿಯ ಪ್ರಮುಖ ಸದಸ್ಯ ಡಾ. ರಮೇಶ್ ಒತ್ತಾಯಿಸಿದ್ದಾರೆ.

ಪ್ರಸ್ತುತದ ಪ್ರಕರಣ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ. ತನಿಖೆಯನ್ನು ಭಕ್ತರು ವಿರೋಧಿಸುವುದಿಲ್ಲ. ಆದರೆ, ಸುಳ್ಳು ದೂರುಗಳನ್ನು ದಾಖಲಿಸಿದವರನ್ನು ಶಿಕ್ಷಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ತಪ್ಪಿತಸ್ಥರು ಶಿಕ್ಷೆ ಎದುರಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಕುರಿತು ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಮಧ್ಯೆ ಆ.24ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ನಡೆಸಲು ಚಿಂತನೆ ನಡೆದಿದೆ. ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ರಾಜ್ಯದ ಪ್ರಮುಖ ಹಿಂದೂ ನಾಯಕರು, ಧಾರ್ಮಿಕ ಮುಖಂಡರು ಸೇರಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ನಡೆಸಲು ಯೋಜಿಸಲಾಗುತ್ತಿದೆ. ಆ ಮೂಲಕ ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಯ ವಿರುದ್ದ ಒಗ್ಗಟ್ಟು ಪ್ರದರ್ಶಿಸಲು ಚಿಂತನೆ ನಡೆದಿದೆ.

Share This Article
Leave a Comment