ಕಡಬ: ಫ್ರಿಡ್ಜ್ ಸ್ಪೋಟಗೊಂಡು ಮನೆಗೆ ಹಾನಿ – ಮಹಿಳೆ ಅಪಾಯದಿಂದ ಪಾರು..!

Prakhara News
1 Min Read

ಕಡಬ : ಮನೆಯಲ್ಲಿದ್ದ ಫ್ರಿಡ್ಜ್ (Refrigerator) ದಿಢೀರನೆ ಸ್ಪೋಟಗೊಂಡು ಮನೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಆತೂರು ನಿವಾಸಿ, ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್ ಎಂಬುವರ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ಸಂಜೆಯ ವೇಳೆ ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಸ್ಪೋಟಗೊಂಡಿದೆ ಎನ್ನಲಾಗಿದೆ.

ಸ್ಪೋಟ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಸಿದ್ದೀಕ್ ಅವರ ಪತ್ನಿ ಆರೀಫಾ ಮಾತ್ರ ಇದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಅಪಾಯದಿಂದ ಪಾರಾಗಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಯ ಪೀಠೋಪಕರಣಗಳು ಹಾಗೂ ಗೋಡೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಸಂಜೆ ವೇಳೆಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment