ಕಾಂತಾರ ಚಾಪ್ಟರ್ 1 ಸಿನಿಮಾಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

Prakhara News
1 Min Read

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’  ಸಿನಿಮಾ ಬಿಡುಗಡೆ ಆಗಿದೆ. ಪ್ರಪಂಚದಾದ್ಯ0ತ ಬೆಳಗ್ಗೆಯಿಂದಲೇ ಶೋಗಳು ಆರಂಭವಾಗಿದ್ದು, ಬಹುತೇಕ ಶೋಗಳು ಹೌಸ್‌ಫುಲ್ ಆಗಿವೆ.

ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ.   ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ದೈವದ ವಿಚಾರವೇ ಹೈಲೈಟ್. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ.   ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ಹಲವೆಡೆ ಪ್ರೀಮಿಯರ್ ಶೋ ಇಡಲಾಗಿದ್ದು, ಅದರಿಂದಲೇ ಕೋಟಿ ರೂಪಾಯಿ ಬಾಚಲಾಗಿದೆ. ‘ಕಾಂತಾರ: ಚಾಪ್ಟರ್ ’ ಸಿನಿಮಾಗೆ ರಿಷಬ್ ಶೆಟ್ಟಿ ನಾಯಕ. ನಿರ್ದೇಶನ ಕೂಡ ಅವರದ್ದೇ. ನಾಯಕಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್, ಇತರ ಪ್ರಮುಖ ಪಾತ್ರವರ್ಗದಲ್ಲಿ ಜಯರಾಂ, ಕುಲ್ಶನ್ ದೇವಯ್ಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. 

Share This Article
Leave a Comment