ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ಆಡಳಿತ ಮಂಡಳಿ ನಿರ್ಣಯ

Prakhara News
1 Min Read

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.

ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.

‘10ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು ಎಂದು ಸೋಮವಾರ ನಡೆದ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಂಡಳಿಯು ತನ್ನ ಈ ನಿಲುವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಲಿದೆ’ ಎಂದು ಹೇಳಿದ್ದಾರೆ.

ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್‌ 2018ರ ಸೆಪ್ಟೆಂಬರ್‌ನಲ್ಲಿ ತೀರ್ಪು ನೀಡಿತ್ತು.

Share This Article
Leave a Comment