ಕೊಲ್ಕತ್ತಾದ ದುರ್ಗಾ ಪೆಂಡಾಲ್ ನಲ್ಲಿ  ಕಾಲ್ತುಳಿತ: 17 ಭಕ್ತರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ..!

Prakhara News
1 Min Read

ಕೊಲ್ಕತ್ತಾ: ಕೊಲ್ಕತ್ತಾದ ಚೋರ್‌ಬಾಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 17 ಜನ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ವಿಪರೀತ ಜನದಟ್ಟಣೆಯಿಂದ ಅದು ಕುಸಿದಿದ್ದು, ಭಕ್ತರಲ್ಲಿ ಆತಂಕ ಉಂಟಾಗಿ, ನೂಕುನುಗ್ಗಲು ಸಂಭವಿಸಿದ ಪರಿಣಾಮವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಸ್ಥಿತಿ ವಿಚಾರಿಸಿದರು.

ಈ ದುರ್ಘಟನೆಯ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತೀವ್ರ ಆಘಾತ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. “ಚೋರ್‌ಬಾಗನ್ ಪೂಜಾ ಪೆಂಡಾಲ್‌ನಲ್ಲಿ ನಡೆದ ಕಾಲ್ತುಳಿತದ ಘಟನೆಯು ನನಗೆ ತೀವ್ರ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ” ಎಂದು ಅವರು ತಿಳಿಸಿದ್ದಾರೆ.

ಸಂತಾಪ ಸೂಚಿಸಿದ ಪ್ರಧಾನಿ:

ಈ ಘಟನೆಗೆ ಸಂತಾಪ ಸೂಚಿಸಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ಹಾಗೂ ಅಸ್ವಸ್ಥಗೊಂಡ ಎಲ್ಲರನ್ನೂ ತಕ್ಷಣವೇ ರಕ್ಷಿಸಿ, ಕೊಲ್ಕತ್ತಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅನಿರೀಕ್ಷಿತ ಘಟನೆಯು ಪೂಜಾ ಆಯೋಜಕರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿಷಯ ತಿಳಿದ ತಕ್ಷಣವೇ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ನಡೆದ ಸಂಜೆಯ ವೇಳೆ ಕೊಲ್ಕತ್ತಾದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯೂ ಸುರಿದಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಹರಸಾಹಸ ಪಡಬೇಕಾಯಿತು.

Share This Article
Leave a Comment