BREAKING NEWS..! ಕುಂದಾಪುರ: ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸಿದ ಗುಂಡಿನ ದಾಳಿ ; ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ.

Prakhara News
1 Min Read

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ವೇಳೆ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಐವನ್ ರಿಚರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ.

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಹತ್ಯೆಯ ಹಿಂದಿನ ಕಾರಣ ಏನು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆ ಹಾಗೂ ಹತ್ಯೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article
Leave a Comment