# Prakhara News ## Posts - [ಕುದ್ರೋಳಿ ಕ್ಷೇತ್ರದಲ್ಲಿ ಬಿಸು ಪರ್ಬ ವಿಶೇಷ- ಸ್ಯಾಂಡಲ್ ವುಡ್ ಸೂಪರ್ ಸಿಂಗರ್ಸ್ ಬೆಂಗಳೂರು - ನಮ್ಮ ಕುಡ್ಲದ ಖ್ಯಾತ ಕಲಾವಿದರಿಂದ ಭಕ್ತಿ ರಸಮಂಜರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ](https://prakharanews.com/mlr-93/): ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೌರಮಾನ ಯುಗಾದಿ- ಬಿಸು ಪರ್ಬದ ಪ್ರಯುಕ್ತ ನಿನ್ನೆ ಬೆಳಗ್ಗೆ 11.30ಕ್ಕೆ ದೇವರಿಗೆ ಅಭಿಷೇಕ, ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ ನಡೆಯಿತು. ನಂತರ ಸಂಜೆ ದೇವಸ್ಥಾನದ ಸಂತೋಷಿ ಕಲಾ ಮಂಟಪದಲ್ಲಿ ಶಶಿಪ್ರಭಾ ಅಜಿತ್ ಕುಮಾ‌ರ್ ಬೆಂಗಳೂರು ಹಾಗೂ ಪ್ರತಿಭಾ ಸಾಲಿಯಾನ್ ಮಂಗಳೂರು ನೇತೃತ್ವದಲ್ಲಿ ಭಕ್ತಿ ಪ್ರಧಾನ ಸಂಗೀತ ರಸಮಂಜರಿ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯರಾದ ಡಾ. ಜುಲಿಯನ್ ಸಲ್ದಾನಾ ವಹಿಸಿದರು. ಮುಖ್ಯ ಅತಿಥಿಗಳಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾದ ಶ್ರೀ ಪದ್ಮರಾಜ್ ರಾಮಯ್ಯ,ಮಂಗಳೂರು ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಶ್ರೀ ನಾಗರಾಜ್ ಆರ್. ಬಿ ಹಾಗೂ ಕುದ್ರೋಳಿ ದೇವಳದ ಮುಖ್ಯ ಸಂಘಟಕರಾದ ಶ್ರೀ ಸತೀಶ್. ಕೆ ಉಪಸ್ಥಿತರಿದ್ದರು. ನಂತರ ಸ್ಯಾಂಡಲ್ ವುಡ್ ಸೂಪರ್ ಸಿಂಗರ್ಸ್ ಬೆಂಗಳೂರು ಹಾಗೂ ನಮ್ಮ ಕುಡ್ಲ ಖ್ಯಾತ ಕಲಾವಿದರಿಂದ ಭಕ್ತಿ ರಸಮಂಜರಿ ಹಾಗೂ ನೃತ್ಯ , ಸಾಂಸ್ಕೃತಿಕ […] - [ಮ.ನ.ಪಾ 34 ನೇ ಕದ್ರಿ ಶಿವಭಾಗ್ ವಾರ್ಡಿನ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ](https://prakharanews.com/mla-south-19/): ಮಂಗಳೂರು: ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ಕದ್ರಿ ಶಿವಭಾಗ್ ವಾರ್ಡಿನ ತೋಮನಾಯ್ಗರ ರಸ್ತೆಯ ಬದಿ ತಡೆಗೋಡೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ರಾಜಕಾಲುವೆಯಿಂದ ಮಳೆ ನೀರು ಉಕ್ಕಿ ಇಲ್ಲಿನ ಮನೆಗಳಿಗೆ ನುಗ್ಗುವುದನ್ನು ತಪ್ಪಿಸಲು ತಡೆಗೋಡೆ ನಿರ್ಮಾಣವಾಗಬೇಕೆಂದು ಈ ಭಾಗದ ಜನರು ಬೇಡಿಕೆ ಸಲ್ಲಿಸಿದ್ದರು. ಅದರಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಗತ್ಯ ಅನುದಾನ ಮೀಸಲಿರಿಸಿ ತಡೆಗೋಡೆ ನಿರ್ಮಿಸಲಾಗಿತ್ತು. ಆ ಮೂಲಕ ರಾಜ್ಯದ ಇತಿಹಾಸದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ರಾಜಕಾಲುವೆಗೆ ಅನುದಾನ ನೀಡಿದ್ದ ಹೆಗ್ಗಳಿಕೆ ಬಿಜೆಪಿಯದ್ದು. ಅಷ್ಟರ ಮಟ್ಟಿಗೆ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧತೆ ಹೊಂದಿತ್ತು. ಇದೀಗ ತಡೆಹಿಡಿಯಲಾಗಿದ್ದ ಮುಂದುವರಿದ ಕಾಮಗಾರಿಗೆ ಚಾಲನೆ ದೊರೆತಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಕಾವ್ಯ ನಟರಾಜ್ ಆಳ್ವ, ಶಕ್ತಿಕೇಂದ್ರ ಪ್ರಮುಖ್ ವಿಕ್ರಂ ಚೌಟ, ಬೂತ್ ಅಧ್ಯಕ್ಷರಾದ ಶಿವರಾಮ್ ಭಂಡಾರಿ, […] - [ನಾರಿ ಶಕ್ತಿ ವಂದನ್‌ ಸಮ್ಮೇಳನ; ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ](https://prakharanews.com/mp-dk-9/): ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ವಿವಿಧ ಕ್ಷೇತ್ರಗಳ ಮಹಿಳೆಯರೊಂದಿಗೆ ಮಂಗಳೂರಿನಲ್ಲಿ ನಾರಿ ಶಕ್ತಿ ವಂದನ್‌ ಸಮ್ಮೇಳನ ಆಯೋಜಿಸಿದ್ದು, ಈ ವೇಳೆ ಮಹಿಳೆಯರು ವ್ಯಕ್ತಪಡಿಸಿರುವ ಅಭೂತಪೂರ್ವ ಬೆಂಬಲ, ಸಂತಸ ಹಾಗೂ ಕೃತಜ್ಞತೆ ಮಾತುಗಳನ್ನು ಪ್ರಧಾನಮಂತ್ರಿ ಮೋದಿ ಅವರಿಗೆ ತಲುಪಿಸುವುದಾಗಿ ತಿಳಿಸಿದರು. ದೇಶದಲ್ಲಿ ಮಹಿಳೆಯರಿಗೆ ರಾಜಕೀಯವಾಗಿ ಹೆಚ್ಚಿನ ಅವಕಾಶ-ಪ್ರಾತಿನಿಧ್ಯ ನೀಡುವ ಮೂಲಕ ಅವರ ಬದುಕಿನಲ್ಲಿ ಅಮೂಲಾಗ್ರ ಬದಲಾವಣೆಗೆ ಮುನ್ನುಡಿ ಬರೆಯಲಿರುವ ಈ ನಾರಿ ಶಕ್ತಿ ವಂದನ್‌ ಅಧಿನಿಯಮ ಜಾರಿ ಬಗ್ಗೆ ಮಹಿಳೆಯರಲ್ಲಿರುವ ಭಾವನೆ, ಅವರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವುದು ಈ ಸಮ್ಮೇಳನದ ಪ್ರಮುಖ ಆಶಯವಾಗಿತ್ತು. ಅದರಂತೆ ಕ್ಯಾ. ಚೌಟ ಅವರು ಆಯೋಜಿಸಿದ್ದ ಸಮ್ಮೇಳನದಲ್ಲಿ ವೈದ್ಯರು, ಶಿಕ್ಷಕರು, ಉದ್ಯಮಿಗಳು, ಕ್ರೀಡಾಪಟುಗಳು, ಪತ್ರಕರ್ತೆಯರು ಮೀನುಗಾರಿಕೆ ಮತ್ತು ಕಾರ್ಮಿಕ ಸಮುದಾಯ ಸೇರಿದಂತೆ ವಿವಿಧ ವಲಯಗಳಲ್ಲಿ ಗುರುತಿಸಿಕೊಂಡಿರುವ ಮಹಿಳೆಯರು-ಯುವತಿಯರು ಹಾಗೂ ವಿದ್ಯಾರ್ಥಿನಿಯರು ಉತ್ಸಾಹದಿಂದ […] - [ಕಾರ್ಕಳದ ಬ್ಯಾಂಡ್ಮಿಂಟನ್ ಸ್ಟಾರ್ ಆಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ](https://prakharanews.com/blr-8/): ಬೆಂಗಳೂರು: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ‌ ಮೊದಲ ಭಾರತೀಯ ಕಾರ್ಕಳದ ಆಯುಷ್ ಶೆಟ್ಟಿ ಯವರನ್ನು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಇಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿಜಯಕುಮಾರ್ ಸೊರಕೆ, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶ್ರೀಮತಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋ, ದಲ್ಲಿ ನಡೆದ ಪಂದ್ಯಾಟದಲ್ಲಿ ವಿಶ್ವದ ನಂ. 1 ಆಟಗಾರ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ ಪೈನಲ್ ಪ್ರವೇಶಗೈದು‌ 61 ವರ್ಷದ ಬಳಿಕ ಭಾರತಕ್ಕೆ ಬೆಳ್ಳಿ ಪದಕದ ಸಾಧನೆ ಮಾಡಿದ್ದರು. - [ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!](https://prakharanews.com/belthangady-arrest/): ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಸಂಜೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. - [ಕುಂದಾಪುರ : ಕಾರು‌ ಢಿಕ್ಕಿ -ಮಹಿಳೆ ಮೃತ್ಯು…!!](https://prakharanews.com/kundapura-5/): ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ.ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಾ ಜೀವನ ಸಾಗಿಸುತ್ತಿದ್ದ ಶಶಿಕಲಾ ಮೊಗವೀರ (50) ಮೃತಪಟ್ಟ ದುರ್ದೈವಿ ಎಂದು ತಿಳಿಯಲಾಗಿದೆ. ಮಂಗಳವಾರ ಸಂಜೆ ಸುಮಾರು 7 ಗಂಟೆಯ ಹೊತ್ತಿಗೆ ವಂಡ್ಸೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿರುವ ದಿನಸಿ ಅಂಗಡಿಗೆ ಸಾಮಾನು ಖರೀದಿಸಲು ಶಶಿಕಲಾ ಅವರು ಬಂದಿದ್ದರು.ಖರೀದಿಯ ಬಳಿಕ ರಸ್ತೆಯ ಇನ್ನೊಂದು ಬದಿಯಲ್ಲಿ ತಮ್ಮ ಸಂಬಂಧಿಕರೊಬ್ಬರು ನಿಂತಿರುವುದನ್ನು ಕಂಡ ಅವರು, ಅತ್ತ ತೆರಳಲು ತಕ್ಷಣವೇ ರಸ್ತೆ ದಾಟಲು ಮುಂದಾಗಿದ್ದಾರೆ. ಇದೇ ವೇಳೆ ಚಿತ್ತೂರು ಕಡೆಯಿಂದ ವಂಡ್ಸೆ ಮಾರ್ಗವಾಗಿ ಅತಿ ವೇಗದಲ್ಲಿ ಬಂದ ಕಾರು ಇವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಶಿಕಲಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ಎಸಗಿದ ಕಾರನ್ನು ಮಾರಣಕಟ್ಟೆ ಸಮೀಪದ ನಿವಾಸಿ […] - [ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸಾವು](https://prakharanews.com/mlr-92/): ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ.ಎ.11ರಂದು ಮಹಾಕಾಳಿಪಡ್ಪಿಅಂಡರ್‌ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಾಲಕನ ಮನೆಗೆ ಭೇಟಿ ನೀಡಿದ್ದು, ಹೆತ್ತವರಿಗೆ ಸಾಂತ್ವನ ಹೇಳಿ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. - [ಅಡ್ವೊಕೇಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಾರ್ ಟೈಗರ್ಸ್ ತಂಡಕ್ಕೆ ಚಾಂಪಿಯನ್‌ಶಿಪ್](https://prakharanews.com/mlr-91/): ಮಂಗಳೂರು : ಮಂಗಳೂರು ವಕೀಲರ ಸಂಘದ ವತಿಯಿಂದ ಪಣಂಬೂರಿನ ಎನ್‌ಎಂಪಿಎ ಕ್ರೀಡಾಂಗಣದಲ್ಲಿ ನಡೆದ ಅಡ್ವೊಕೇಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯಾಯವಾದಿ ರಾಘವೇಂದ್ರ ರಾವ್ ಅವರ ಮಾಲೀಕತ್ವದ ಬಾರ್ ಟೈಗರ್ಸ್ ತಂಡ ಅಗ್ರ ಪ್ರಶಸ್ತಿ ಪಡೆಯಿತು. ಒಟ್ಟು ೮ ತಂಡಗಳು ಭಾಗವಹಿಸಿದ್ದ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ರವಿಕುಮಾರ್ ಅವರ ಅವರ ಮಾಲೀಕತ್ವದ ತಂಡ ಬಾರ್ ಪ್ಯಾಂಥರ್ಸ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು. - [ಹನಿ ಮಂಗಳೂರು ಪ್ರಕರಣಕ್ಕೂ ನವಸಹಜ ಸಮುದಾಯ ಸಂಘಟನೆಗೂ ಯಾವುದೇ ಸಂಬಂಧವಿಲ್ಲ : ಸಮಗ್ರ ತನಿಖೆ ನಡೆಯಲಿ – ನಿಖಿಲಾ](https://prakharanews.com/mlr-90/): ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ ‘ನವಸಹಜ ಸಮುದಾಯ ಸಂಘಟನೆ’ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿತು.ನಕಲಿ ಗುರುತಿನ ಚೀಟಿ ಪಡೆದವರ ವಿರುದ್ಧ ಹಾಗೂ ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ. ದ.ಕ ಜಿಲ್ಲಾ ನವಸಹಜ ಸಂಘಟನೆಯ ಅಧ್ಯಕ್ಷೆ ನಿಖಿಲಾ ಮಾತನಾಡಿ, “ರಾಯಚೂರು ಮೂಲದ ಹನಿ ಮಂಗಳೂರು ಕಳೆದ 4-5 ವರ್ಷಗಳಿಂದ ಮಂಗಳೂರಿನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ನಗರಕ್ಕೆ ಕರೆಸಿಕೊಂಡಿದ್ದಾಳೆ. ಸಂಘಟನೆಗೆ ಮಾಹಿತಿ ನೀಡದೆ ಆ ವ್ಯಕ್ತಿಗೆ ಮಂಗಳೂರಿನ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಮಹಿಳಾ ಅಭಿವೃದ್ಧಿ ನಿಗಮಕ್ಕೆ ತಪ್ಪು ಮಾಹಿತಿ ನೀಡಿ ರಾಷ್ಟ್ರೀಯ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿ ಮಾಡಿಸಲಾಗಿದೆ. ಬಳಿಕ ಆ ವ್ಯಕ್ತಿ ಮೈಸೂರಿಗೆ ತೆರಳಿ, ಮಂಗಳೂರಿನ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೂ ಸಂಘಟನೆಗೂ […] - [ಎ.20 ರಂದು : ಮಂಗಳೂರು ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ  ಸುವರ್ಣ ಸಂಭ್ರಮ ಹಾಗೂ ಸಮಾವೇಶ](https://prakharanews.com/mlr-89/): ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಬೆಳಗ್ಗೆ 9 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಳ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ ಸಹಿತ ಮುಂತಾದ ರಾಜಕೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು ಸಮಾವೇಶದಲ್ಲಿ ಸುಮಾರು 2,500 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಲಿದ್ದಾರೆ. ಸಂಘದ ಪದಾಧಿಕಾರಿಗಳಾಗಿದ್ದು ನಿವೃತ್ತರಾದವರಿಗೆ ಸಮ್ಮಾನ ನಡೆಯಲಿದ್ದು, ಸಂಘದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದರು. ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರಿಗೆ ಕನಿಷ್ಠವೇತನ ಜಾರಿಗೆ ಸಂಬಂಧಿಸಿದ ವಿಚಾರ ಈಗಾಗಲೇ ನ್ಯಾಯಾಯದಲ್ಲಿ ವಿಚಾರಣೆ […] - [ನಾಳೆ ಏಪ್ರಿಲ್ 15 ರಂದು ಕುದ್ರೋಳಿ ಕ್ಷೇತ್ರದಲ್ಲಿ ಬಿಸು ಪರ್ಬ ವಿಶೇಷ- ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ](https://prakharanews.com/mlr-88/): ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಏ.15ರಂದು ಸೌರಮಾನ ಯುಗಾದಿ (ಬಿಸು) ಪ್ರಯುಕ್ತ ಬೆಳಗ್ಗೆ 11.30ಕ್ಕೆ ದೇವರಿಗೆ ಅಭಿಷೇಕ, ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ಶಶಿಪ್ರಭಾ ಅಜಿತ್ ಕುಮಾ‌ರ್ ಬೆಂಗಳೂರು, ಪ್ರತಿಭಾ ಸಾಲಿಯಾನ್ ಮಂಗಳೂರು ನೇತೃತ್ವದಲ್ಲಿ ಭಕ್ತಿ ಪ್ರಧಾನ ಸಂಗೀತ ರಸಮಂಜರಿ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. - [ಮ.ನ.ಪಾ 21 ನೇ ಪದವು ಪಶ್ಚಿಮ ವಾರ್ಡಿನ ಅಡ್ಡ ರಸ್ತೆಗಳ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ](https://prakharanews.com/mla-south-18/): ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಸಂಜಯ ನಗರ ಪ್ರೀತಿ ಮುಗ್ರೋಡಿ ಇವರ ಮನೆಯ ಬಳಿ ರೂ. 50 ಲಕ್ಷ ವೆಚ್ಚದಲ್ಲಿ ರಸ್ತೆ ಹಾಗೂ ಅಡ್ಡರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಇಲ್ಲಿನ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರುಗೊಳಿಸಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ಅನುದಾನಕ್ಕೆ ತಡೆ ನೀಡಿದ್ದ ಪರಿಣಾಮ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ರಸ್ತೆ ಮತ್ತು ತಡೆಗೋಡೆಗೆ ಚಾಲನೆ ದೊರೆತಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ವನಿತಾ ಪ್ರಸಾದ್‌, ಪ್ರಸಾದ್ ಟಿ, ಬಾಬಣ್ಣ, ಯತೀಶ್, ಪ್ರೀತಿ ಪೂಜಾರಿ, ಮೋಹನ್, ಶ್ರೀಧರ್, ವಿನೋದ, ರವಿ ಶೆಟ್ಟಿ, ದಯಾನಂದ, ಜಯಂತಿ, ಗೋಪಾಲ, ನಿರ್ಮಲ, ಅಮ್ಮಿ ಸೇರಿದಂತೆ ವಾರ್ಡಿನ ಕಾರ್ಯಕರ್ತರು, […] - [ಮೊಗವೀರ ಸಮುದಾಯದ ಹಿರಿಯ ನಾಯಕ ಶ್ರೀ ರಾಮಚಂದ್ರ ಬೈಕಂಪಾಡಿ ನಿಧನ](https://prakharanews.com/mlr-87/): ಮಂಗಳೂರು: ಮೊಗವೀರ ಸಮುದಾಯದ ಪ್ರಮುಖ ಧ್ವನಿ, ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ, KFDCಯ ಮಾಜಿ ಅಧ್ಯಕ್ಷರು, ರಂಗಕರ್ಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಯುತ ರಾಮಚಂದ್ರ ಬೈಕಂಪಾಡಿ ಅವರು ಇಂದು ನಿಧನ ಹೊಂದಿದ್ದಾರೆ. ಮೀನುಗಾರಿಕಾ ಸಮುದಾಯದ ಕಲ್ಯಾಣ ಮತ್ತು ಅಭಿವೃದ್ಧಿಗೆ ಸತತವಾಗಿ ಶ್ರಮಿಸಿದ ಇವರ ವಿಯೋಗದಿಂದ, ಸಮಾಜವು ಒಬ್ಬ ಸಕ್ರಿಯ ಸೇವಕನನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಹಲವು ಮುಖಂಡರು ಸಂತಾಪ ಸೂಚಿಸಿದ್ದಾರೆ. - [ಸುಳ್ಯ ಮೂಲದ ಯುವ ಇಂಜಿನಿಯರ್ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತ್ಯು](https://prakharanews.com/ap/): ಕರ್ನೂಲ್ : ಸುಳ್ಯ ಮೂಲದ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಯುವತಿ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಕ್ಷಿಪ್ರಾ ಭಟ್ (27 ವರ್ಷ) ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಬಿಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು. ಶನಿವಾರ ರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಚಾಲಕನಿಗೆ ಮಂಪರು ಆವರಿಸಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕ್ಷಿಪ್ರಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಸಹೋದ್ಯೋಗಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆಯನ್ನು ಮೊದಲೇ ಕಳೆದುಕೊಂಡಿದ್ದ ಕ್ಷಿಪ್ರಾ ತಾಯಿ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮನೆಯ […] - [ನಿತ್ಯಶ್ರೀ ಬಿ.ವಿ.ಗೆ ಪಿಎಚ್ ಡಿ ಪದವಿ](https://prakharanews.com/mlr-86/): ಮಂಗಳೂರು : ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ. ಇವರು ಮಂಗಳೂರಿನ ಆಯ್ದ ಶಾಲೆಗಳ ಹದಿಹರೆಯದ ಬಾಲಕಿಯರಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವ ಉದ್ದೇಶದಿಂದ ಅರಿವು, ದೃಢವಾದ ನಡವಳಿಕೆ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುವ ಸಾಮರ್ಥ್ಯ ವರ್ಧನಾ ಕಾರ್ಯಕ್ರಮದ ಪರಿಣಾಮಕಾರಿತ್ವದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಯೆನೆಪೋಯ ಪರಿಗಣಿತ ವಿ.ವಿ. ಪಿಎಚ್ ಡಿ ಪದವಿ ನೀಡಿದೆ. ನಿತ್ಯಶ್ರೀ ರವರು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಪೂರೈಸಿದ್ದರು. ಯೆನೆಪೋಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿಯಾಗಿರುವ ನಿತ್ಯಶ್ರೀ ಬಿ.ವಿ. ಇವರು ಸುಳ್ಯದ ನಿವೃತ್ತ ಸರ್ವೆ ಮೇಲ್ವಿಚಾರಕ ವಿಠಲ ಬಿ.ಕೆ.- ರುಕ್ಮಿಣಿ ಬಿ.ವಿ. ದಂಪತಿ ಪುತ್ರಿ ಹಾಗೂ ಗಣೇಶ್ ಮಾಣಿಬೆಟ್ಟು ಅವರ ಧರ್ಮಪತ್ನಿ. - [70 ವರ್ಷಗಳ ಬೇಡಿಕೆ ಈಡೇರಿದ್ದು ಸಂತಸವಾಗಿದೆ: ಶಾಸಕ ಕಾಮತ್ - ಕೊಟ್ಟಾರ ಕ್ರಾಸ್, ಕೆಎಸ್ಆರ್ ಟಿಸಿ ಕ್ವಾಟ್ರಸ್, ಎ.ಜೆ ಆಸ್ಪತ್ರೆ ಸಂಪರ್ಕ ರಸ್ತೆ ಅಭಿವೃದ್ಧಿ](https://prakharanews.com/mla-south-17/): ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 31ನೇ ಬಿಜೈ ವಾರ್ಡಿನಲ್ಲಿ ಸುಮಾರು 50 ಲಕ್ಷ ರೂ.ವಿಶೇಷ ಅನುದಾನದಲ್ಲಿ ಕೊಟ್ಟಾರ ಕ್ರಾಸ್‌ನಿಂದ ಕೆ.ಎಸ್.ಆರ್.ಟಿ.ಸಿ. ಕ್ವಾಟ್ರಸ್ ಮುಖಾಂತರ ಎ.ಜೆ. ಆಸ್ಪತ್ರೆಗೆ ಸಂಪರ್ಕಿಸುವ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಕೆ.ಎಸ್.ಆರ್.ಟಿ.ಸಿ ಅಧೀನದಲ್ಲಿರುವ ಈ ಸ್ಥಳವನ್ನು ಕಳೆದ 70 ವರ್ಷಗಳಿಂದ ಜನರು ಬಳಸುತ್ತಿದ್ದರೂ ಇಲ್ಲಿ ಸುಸಜ್ಜಿತ ರಸ್ತೆಯೇ ಇರಲಿಲ್ಲ. ರಸ್ತೆ ನಿರ್ಮಾಣವಾದರೆ ಸ್ಥಳೀಯರಿಗೆ ಹೆಚ್ಚಿನ ಉಪಯೋಗವಾಗಲಿದ್ದು ಆ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ನಿವಾಸಿಗಳು, ಅನೇಕ ಬಾರಿ ನನ್ನಲ್ಲಿ ಮನವಿ ಮಾಡಿದ್ದರು. ಅದರಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನವನ್ನು ಮೀಸಲಿಡುವಲ್ಲಿ ಯಶಸ್ವಿಯಾಗಿದ್ದೆವು. ಆದರೆ ಕೆ.ಎಸ್.ಆರ್.ಟಿ.ಸಿ ನಿರಪೇಕ್ಷಣೆಯಿಲ್ಲದೇ ಈ ಕಾರ್ಯ ಮುಂದುವರಿಯಲು ಸಾಧ್ಯವಿರಲಿಲ್ಲ. ಆಗ ಅಧಿಕಾರಿಯಾದ ರಾಜೇಶ್ ಶೆಟ್ಟಿಯವರ ಸಹಿತ ಅನೇಕರು ಸಹಕಾರ ನೀಡಿದ ಪರಿಣಾಮ ಇಂದು ರಸ್ತೆ ನಿರ್ಮಾಣ ಕಾಮಗಾರಿ […] - [ವಿಟ್ಲ: ಹಾಡಹಗಲೇ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನ ಕದ್ದು ಬೈಕ್ ನಲ್ಲಿ ಪರಾರಿಯಾದ ಕಳ್ಳ](https://prakharanews.com/vitla-7/): ವಿಟ್ಲ: ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕಳ್ಳತನ ಮಾಡಿರುವ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ. ಕೋಡಪದವು ಮದಕ ನಿವಾಸಿಯೊಬ್ಬರ ಮಗು ಎಂದಿನಂತೆ ತನ್ನ ಮನೆಯ ಪರಿಸರದಲ್ಲಿ ಆಟವಾಡುತ್ತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದ ಕಳ್ಳ ಕ್ಷಣಾರ್ಧದಲ್ಲಿ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳತನ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಆರೋಪಿಯು ಬೈಕ್‌ನಲ್ಲಿ ವೇಗವಾಗಿ ಬರುವುದು ಮತ್ತು ಕೃತ್ಯ ಎಸಗಿ ಪರಾರಿಯಾಗುವ ದೃಶ್ಯಗಳು ಸೆರೆಯಾಗಿದೆ. - [ಪುತ್ತೂರಿನ ಗಾಯಕಿ ಡಾ. ವಿದೂಷಿ ಪವಿತ್ರ ರೂಪೇಶ್ ರವರ ಹಿಂದಿ ಆಲ್ಬಮ್ ಹಾಡು "ಸುನ್ ಲೇನಾ" ಬಿಡುಗಡೆ](https://prakharanews.com/puttur-album/): ಪುತ್ತೂರು: ಪುತ್ತೂರಿನ ಪ್ರತಿಭಾನ್ವಿತ ಗಾಯಕಿಯಾದ ಡಾ. ವಿದೂಷಿ ಪವಿತ್ರ ರೂಪೇಶ್ ರವರ ಕಂಠಸಿರಿಯಲ್ಲಿ ಮೂಡಿ ಬಂದಿರುವ “ಸುನ್ ಲೇನಾ” ಹೊಸ ಹಿಂದಿ ಆಲ್ಬಮ್ ಹಾಡು ಬಿಡುಗಡೆಗೊಂಡಿದೆ. ಈ ಆಲ್ಬಮ್ ಹಾಡಿಗೆ ಸಾಹಿತ್ಯ ಹಾಗೂ ಸಂಗೀತವನ್ನು ಶ್ರೀ ರಾಮ್ ಕುಮಾರ್, ಬಿಹಾರ್ ನೀಡಿದ್ದಾರೆ. ಹಾಡಿನ ಮುದ್ರಣ, ಮಿಕ್ಸಿಂಗ್ ಹಾಗೂ ಸಂಕಲನವು ಉಪ್ಪಿನಂಗಡಿಯ ಸರ್ ಗಮ್ ಸ್ಟುಡಿಯೋದಲ್ಲಿ ನಡೆದಿದೆ. ವಿದೂಷಿ ಪವಿತ್ರ ರೂಪೇಶ್ ರವರಿಗೆ 2023 ರ ಇಸವಿಯಲ್ಲಿ ದಕ್ಷಿಣದಿ ಸಂಗೀತಕ್ಕೆ “ಕರ್ಣಾಟಕ ಸಂಗೀತ” ಅಧ್ಯಯನಕ್ಕಾಗಿ ಗೌರವ ಡಾಕ್ಟರೇಟ್ ಕೂಡ ಲಭಿಸಿದೆ. - [ಮಂಗಳೂರು: ಕಾರು ಆಲ್ಟ್ರೇಷನ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅನಾಹುತ- ಬೆಲೆಬಾಳುವ ಕಾರುಗಳಿಗೆ ಹಾನಿ](https://prakharanews.com/mlr-85/): ಮಂಗಳೂರು : ನಗರದ ಫಳ್ನೀರ್‌ನಲ್ಲಿರುವ ಕಾರು ಆಲ್ಟ್ರೇಷನ್ ಸೆಂಟರ್ ಒಂದರಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿಗೊಳಗಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 7:30ರ ವೇಳೆಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವ್ಯಾಪಕವಾಗಿ ಹರಡಿತು. ಪರಿಣಾಮವಾಗಿ, ಆಲ್ಟ್ರೇಷನ್‌ಗಾಗಿ ಮಳಿಗೆಯ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ, ಮಳಿಗೆಯಲ್ಲಿದ್ದ ಬೆಲೆಬಾಳುವ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಬಿಡಿಭಾಗಗಳು ಸುಟ್ಟು ಕರಕಲಾಗಿವೆ. ಮಳಿಗೆಯಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಪಕ್ಕದ ಕಟ್ಟಡಗಳಿಗೆ ಹರಡದಂತೆ ತಡೆದು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯ ವೇಳೆ ಮಳಿಗೆಯಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಮಂಗಳೂರು ದಕ್ಷಿಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. - [ಬೆಳ್ತಂಗಡಿ: ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಪಲ್ಟಿಯಾದ ಓಮ್ನಿ ಕಾರು](https://prakharanews.com/belthangady-14/): ಬೆಳ್ತಂಗಡಿ : ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಓರ್ವ ಮಹಿಳೆ ಓಮ್ನಿ ಕಾರಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಆಕೆಯನ್ನು ರಕ್ಷಿಸಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. - [ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಪ್ರೇಯಸಿಯ ಕಿರುಕುಳವೇ ಕಾರಣ…!](https://prakharanews.com/mlr-84/): ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ ವೇಳೆ ಪ್ರೇಮ‌ ಪ್ರಕರಣ ಬೆಳಕಿಗೆ ಬಂದಿದೆ. - [ಸಂಗೀತ ಲೋಕದ ಧ್ರುವತಾರೆ ಆಶಾ ಭೋಸ್ಲೆ ಅಸ್ತಂಗತ..!](https://prakharanews.com/asha-bhosle/): ಮುಂಬೈ : ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಪದ್ಮವಿಭೂಷಣ ಪುರಸ್ಕೃತೆ ಆಶಾ ಭೋಸ್ಲೆ (92) ಅವರು ಶನಿವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಸಂಬಂಧಿ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1933 ರಲ್ಲಿ ಜನಿಸಿದ ಆಶಾ ಅವರು ತಮ್ಮ 9ನೇ ವಯಸ್ಸಿನಲ್ಲೇ ಗಾಯನ ವೃತ್ತಿ ಆರಂಭಿಸಿದ್ದರು. 1943 ರಲ್ಲಿ ಮೊದಲ ಚಲನಚಿತ್ರ ಗೀತೆ ಹಾಡುವ ಮೂಲಕ ಶುರುವಾದ ಇವರ ಪಯಣ ಏಳು ದಶಕಗಳ ಕಾಲ ನಿರಂತರವಾಗಿ ಸಾಗಿತು. ಹಿಂದಿ, ಕನ್ನಡ ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಅವರು, ಅತಿ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿದ ಗಾಯಕಿ ಎಂಬ ಗಿನ್ನೆಸ್ ದಾಖಲೆಗೂ ಪಾತ್ರರಾಗಿದ್ದರು. ಕೇವಲ ಮೆಲೋಡಿ ಮಾತ್ರವಲ್ಲದೆ, ಕ್ಯಾಬರೆ, ಗಜಲ್ ಮತ್ತು ಪಾಪ್ ಸಂಗೀತದಲ್ಲೂ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ಅಕ್ಕ ಲತಾ ಮಂಗೇಶ್ಕರ್ ಅವರೊಂದಿಗೆ ಭಾರತೀಯ ಚಿತ್ರರಂಗದ ಗಾಯನದ ಎರಡು ಕಣ್ಣುಗಳಂತಿದ್ದ ಆಶಾ ಅವರ […] - [ಉಡುಪಿ: ವ್ಯಕ್ತಿಯ ಅಪಹರಣ ಪ್ರಕರಣ- ಆರೋಪಿಗಳ ಬಂಧನ..!!](https://prakharanews.com/udupi-19/): ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್ ಟೀ ಕುಡಿಯುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 12.15 ಗಂಟೆಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಏಳು-ಎಂಟು ಮಂದಿ ಬಂದು ರಾಜೇಶ್ ಅವರನ್ನು ಬಲವಂತವಾಗಿ ಹಿಡಿದು ಕಾರಿನಲ್ಲಿ ಕೂರಿಸಿ ಅಪಹರಿಸಿ ಮಣಿಪಾಲದಿಂದ ಹಿರಿಯಡ್ಕ ರಸ್ತೆಯ ಕಡೆಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ನೀಡಿದ ದೂರಿನ ಮೇರೆಗೆ ಮಲ್ಲಾರೆಡ್ಡಿ, ತುಳಜಾ, ನರಸಿಂಗ, ಹುಸೇನ್, ಶಂಕರ, ನಾಗೇಶ್, ಪರಮೇಶ್ವರ್ ಹಾಗೂ […] - [ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಯಾನೆ ಅಪ್ಪು ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು](https://prakharanews.com/karkala-9/): ಕಾರ್ಕಳ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ನಗರ ಪೊಲೀಸರು ಏ.11 ರಂದು ಸಂಜೆ ಬಂಧಿಸಿದ್ದಾರೆ. ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. - [ಸಾಧನೆಗೆ ಅಡ್ಡಿಯಾಗದ ವಯಸ್ಸು: ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಅಮ್ಮ-ಮಗಳು ಏಕಕಾಲಕ್ಕೆ ಉತ್ತೀರ್ಣ!](https://prakharanews.com/puc-results/): ಬಂಟ್ವಾಳ : ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶವು ಜಿಲ್ಲೆಯಲ್ಲಿ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಬಂಟ್ವಾಳದ ಬಿ.ಸಿ. ರೋಡ್ ನಿವಾಸಿಗಳಾದ ತಾಯಿ ಮತ್ತು ಮಗಳು ಒಂದೇ ಬಾರಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ. ಬಿ.ಸಿ. ರೋಡ್ ಕೈಕಂಬ ನಿವಾಸಿ, ಗೃಹಿಣಿ ನೇತ್ರಾವತಿ ವಿ.ಆರ್ ಮತ್ತು ಅವರ ಪುತ್ರಿ ಹೇಮಶ್ರೀ ಆರ್. ಅವರೇ ಈ ಅಪರೂಪದ ಸಾಧಕರು. ಮಗಳು ಹೇಮಶ್ರೀ ಬಿ. ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 562 ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ‘ಟಾಪರ್’ ಆಗಿ ಹೊರಹೊಮ್ಮಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮಗಳ ಈ ಸಾಧನೆ ಕುಟುಂಬದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ನಂದಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್ ಅವರ ಪತ್ನಿಯಾಗಿರುವ ನೇತ್ರಾವತಿ ಅವರಿಗೆ ಮೊದಲಿನಿಂದಲೂ ಶಿಕ್ಷಣ ಮುಂದುವರಿಸುವ ಹಂಬಲವಿತ್ತು. ಮಗಳು ಕಾಲೇಜಿಗೆ ಸೇರುತ್ತಿದ್ದಂತೆ ತಾನೂ ಪರೀಕ್ಷೆ ಬರೆಯುವ ಮನಸ್ಸು ಮಾಡಿದ ಅವರಿಗೆ ಪತಿ ಮತ್ತು ಕಾಲೇಜಿನ ಉಪನ್ಯಾಸಕರು ಭರ್ಜರಿ ಬೆಂಬಲ ನೀಡಿದರು. […] - [ಕುಂದಾಪುರ: ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ದಾರುಣ ಸಾವು](https://prakharanews.com/kundapura-4/): ಕುಂದಾಪುರ : ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಬೀಜಾಡಿ ಡಿವೈಡರ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಡ್ಡರ್ಸೆ ನೀರುಕೊಡ್ಲು ನಿವಾಸಿ ಶಾರದಾ (55) ಮೃತ ದುರ್ದೈವಿ. ಶಾರದಾ ಅವರು ತಮ್ಮ ಮಗನೊಂದಿಗೆ ಸ್ಕೂಟರ್‌ನಲ್ಲಿ ಕೋಟೇಶ್ವರದ ಅಂಕದಕಟ್ಟೆಯಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದರು. ಬೀಜಾಡಿ ಡಿವೈಡರ್ ಸಮೀಪ ಸಾಗುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನ ಹಿಂಬದಿಯಲ್ಲಿ ಕುಳಿತಿದ್ದ ಶಾರದಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಶಾರದಾ ಅವರ ಮಗ ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯಸ್ತವಾಗಿತ್ತು. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. - [ಬಂಟ್ವಾಳ : ವೇದಿಕೆಯಲ್ಲೇ ಕುಸಿದು ಬಿದ್ದು ಯುವ ನಿರೂಪಕ ಸಾವು](https://prakharanews.com/bantwal-5/): ಬಂಟ್ವಾಳ: ಸಂಭ್ರಮದ ಮದರಂಗಿ ಕಾರ್ಯಕ್ರಮವೊಂದು ಕ್ಷಣಾರ್ಧದಲ್ಲಿ ಶೋಕಸಾಗರವಾಗಿ ಮಾರ್ಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಏಪ್ರಿಲ್ 10ರಂದು ರಾತ್ರಿ ಸಂಭವಿಸಿದೆ. ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ಯುವ ನಿರೂಪಕರೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿತ್ (32) ಮೃತಪಟ್ಟ ದುರ್ದೈವಿ. ಇವರು ಉತ್ತಮ ನಿರೂಪಕರಾಗಿ ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ತನ್ನ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ಅವರಿಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿತ್ತು. ಅದರಂತೆ ಶುಕ್ರವಾರ ರಾತ್ರಿ (ಏಪ್ರಿಲ್ 10) ಅವರು ಅತ್ಯಂತ ಉತ್ಸಾಹದಿಂದ ವೇದಿಕೆ ಏರಿ ಕಾರ್ಯಕ್ರಮದ ಮುನ್ನುಡಿ ಬರೆಯುತ್ತಿದ್ದರು. ಆದರೆ, ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅವರು ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಅಶ್ವಿತ್ ಕುಸಿದು ಬೀಳುತ್ತಿದ್ದಂತೆ ಸ್ಥಳದಲ್ಲಿದ್ದ ಸಂಬಂಧಿಕರು ಹಾಗೂ ಸಾರ್ವಜನಿಕರು ತಕ್ಷಣ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಆದರೆಪರೀಕ್ಷಿಸಿದ ವೈದ್ಯರು, ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಹೃದಯಾಘಾತವೇ ಈ ಸಾವಿಗೆ ಕಾರಣ ಎಂದು […] - [ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಟ್ರೆಕ್ಕಿಂಗ್ ನಲ್ಲಿ ನಾಪತ್ತೆಯಾದ ಬಾಲಕಿಯ ಮೃತದೇಹ ಮೂರು ದಿನಗಳ ಬಳಿಕ ಕಂದಕದಲ್ಲಿ ಪತ್ತೆ.](https://prakharanews.com/ckm-3/): ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಅವರ ಮೃತದೇಹ ಪತ್ತೆಯಾಗುವ ಮೂಲಕ ಈ ಪ್ರಕರಣ ಅತ್ಯಂತ ದುಃಖದಾಯಕವಾಗಿ ಅಂತ್ಯಗೊಂಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿಯಾದ ಈ ಬಾಲಕಿ ಮಂಗಳವಾರ ಸಂಜೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಜನದಟ್ಟಣೆಯ ನಡುವೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಮಗಳು ನಾಪತ್ತೆಯಾದ ತಕ್ಷಣವೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಕಳೆದ ಮೂರು ದಿನಗಳಿಂದ ದಟ್ಟವಾದ ಅರಣ್ಯ ಮತ್ತು ಕಡಿದಾದ ಬೆಟ್ಟಗುಡ್ಡಗಳಲ್ಲಿ ಬಾಲಕಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಸಲಾಗಿತ್ತು. ​ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ ಇಲಾಖೆಯ ತಂಡಗಳು ಜಂಟಿಯಾಗಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ ನಂತರ ಅಂತಿಮವಾಗಿ ಆಳವಾದ ಕಂದಕವೊಂದರಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪ್ರವಾಸಕ್ಕೆಂದು ಬಂದು ತಮ್ಮ ಪ್ರೀತಿಯ ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದ್ದು, ಇಡೀ ಪ್ರವಾಸದ ಸಂಭ್ರಮ ವಿಷಾದವಾಗಿ ಮಾರ್ಪಟ್ಟಿದೆ. ಬಾಲಕಿಯ ಸಾವು ಕಂದಕಕ್ಕೆ ಆಕಸ್ಮಿಕವಾಗಿ ಬಿದ್ದು ಸಂಭವಿಸಿದೆಯೇ ಅಥವಾ ಬೇರೆ ಯಾವುದಾದರೂ […] - [ಮಂಗಳೂರು: ಇಬ್ಬರು ಕ್ರಿಮಿನಲ್‌ಗಳ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ..!!](https://prakharanews.com/mlr-crime/): ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಇಂಟರ್‌ಪೋಲ್ ಮೂಲಕ ಪೊಲೀಸ್ ಇಲಾಖೆ ರೆಡ್‌ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ (38) ಮತ್ತು ಶಂಶುದ್ದೀನ್ (36) ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 2017ರಲ್ಲಿ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ ನಗರದ ಲೇಡಿಹಿಲ್ ಬಳಿ ಉರ್ವ ಠಾಣೆಯಲ್ಲಿ ಆಗ ಎಎಸ್ಸೈ ಆಗಿದ್ದ ಐತಪ್ಪ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. 2013ರಲ್ಲಿ ದೇರಳಕಟ್ಟೆಯಲ್ಲಿ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಕೂಡ ಈತ ಆರೋಪಿಯಾಗಿದ್ದ. ಈತನ ವಿರುದ್ಧ 14 ಪ್ರಕರಣಗಳು ದಾಖಲಾಗಿವೆ. ಈತ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. - [ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯಿಂದ ನಿನಗೆ ಮಗು ಬೇಕಾ ಅಥವಾ ಜಾಗ ಬೇಕಾ? ಎಂದು ಬೆದರಿಕೆ: ಕೇಸು ದಾಖಲು](https://prakharanews.com/sullia-7/): ಸುಳ್ಯ: ಐವರ್ನಾಡು ಗ್ರಾಮದ ಮಡ್ತಿಲದಲ್ಲಿ ಮಡ್ತಿಲ ಕುಟುಂಬದ ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯು ನಿನಗೆ ಮಗು ಬೇಕಾ ಅಥವಾ ಜಾಗ ಬೇಕಾ.? ಎಂದು ಕೇಳಿ ಬೆದರಿಕೆ ಒಡ್ಡಿರುವುದಾಗಿ ಮಮತಾ ಭಾಸ್ಕರ ಮಡ್ತಿಲ ಎಂಬವರು ನೀಡಿರುವ ಪಿರ್ಯಾದಿಯನ್ನು ದಾಖಲಿಸಿಕೊಂಡು ತನಿಖೆ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸುಳ್ಯ ನ್ಯಾಯಾಲಯವು ಆದೇಶ ನೀಡಿದ ಮೇರೆಗೆ ಬೆಳ್ಳಾರೆ ಪೊಲೀಸರು ದೈವಧಾರಿ ಮೋಹನ ಮತ್ತು ದೈವದ ಮೂಲಕ ಆ ರೀತಿ ಬೆದರಿಕೆ ಒಡ್ಡಿಸಿದ ಆರೋಪಕ್ಕೊಳಗಾಗಿರುವ ಸಚಿನ್ ಮಡ್ತಿಲ ಎಂಬವರ ಮೇಲೆ ಏಪ್ರಿಲ್ 7 ರಂದು ಕೇಸು ದಾಖಲಿಸಿಕೊಂಡಿದ್ದಾರೆ. ಕಳೆದ ಫೆಬ್ರವರಿ 24 ರಂದು ಘಟನೆ ನಡೆದಿದ್ದು ಶ್ರೀಮತಿ ಮಮತಾ ಭಾಸ್ಕರ ಮಡ್ತಿಲ ರವರು ಎಸ್ ಪಿ ಗೆ ಮತ್ತು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ಬೆಳ್ಳಾರೆ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದುಕೊಂಡಿದ್ದರು. ಕೇಸು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಮಮತಾರವರು ವಿನಂತಿಸಿದಾಗ ನ್ಯಾಯಾಲಯದ ಮೂಲಕ ಆದೇಶ ಕೊಡಿಸುವಂತೆ ಪೊಲೀಸರು ತಿಳಿಸಿದ್ದರು. ಅದರಂತೆ ಮಮತಾರವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ […] - [ಮಂಗಳೂರು : ಏಪ್ರಿಲ್ 10 ರಂದು “90 ಎಮ್ ಎಲ್” ತುಳು ಚಲನಚಿತ್ರ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ.](https://prakharanews.com/cinema-special-2/): ಮಂಗಳೂರು : ಕರಾವಳಿ ಸಿನಿಪ್ರಿಯರಿಗೆ ಮನರಂಜನೆಯ ಹೊಸ ಕಾಣಿಕೆಯಾಗಿರುವ “90 ಎಮ್ ಎಲ್” ತುಳು ಚಲನಚಿತ್ರವು ಏಪ್ರಿಲ್ 10 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ ಬರುತ್ತಿದೆ ಚಿತ್ರದ ನಟ ವಿನೀತ್ ಕುಮಾರ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಹಾಗೂ ಡೋಲಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ ಈ ಚಿತ್ರವು ಮಂಗಳೂರು, ಉಡುಪಿ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಸುಳ್ಯ, ದೇರಳಕಟ್ಟೆ, ಸುರತ್ಕಲ್, ಪಡುಬಿದ್ರಿ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಚಿತ್ರೀಕರಣ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಡೆದಿದ್ದು, ಸ್ಥಳೀಯ ಸೌಂದರ್ಯವನ್ನು ಪರದೆ ಮೇಲೆ ಹಿಡಿದಿಡಲಾಗಿದೆ. ವಿನೀತ್ ಕುಮಾರ್ ಅಭಿನಯದ ಈ ಚಿತ್ರದಲ್ಲಿ ರುಹಾನಿ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ನಮಿತಾ, ಶೈಲಾಶ್ರೀ ಹಾಗೂ ಧೃತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ರಂಜಿತ್ ಸಿ ಬಜಾಲ್ ಕಥೆ, […] - [ಎಪ್ರಿಲ್ 11 ಮತ್ತು 12 ರಂದು ಮಂಗಳೂರು ಪುರಭವನದಲ್ಲಿ ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ](https://prakharanews.com/mlr-83/): ಮಂಗಳೂರು : ದ.ಕ. ಜಿಲ್ಲಾ ಪಂಜ ಕುಸ್ತಿ ಸಂಘದ ಆಶ್ರಯದಲ್ಲಿ ಎ. 11 ಮತ್ತು 12ರಂದು ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ರೇಮಂಡ್ ಡಿಸೋಜಾ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,ಈಗಾಗಲೇ 180 ಮಂದಿ ಕುಸ್ತಿ ಸ್ಪರ್ಧಿಗಳು ನೋಂದಾಯಿಸಿದ್ದು, 250ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪುರುಷರು, ಮಹಿಳೆಯರು ಮತ್ತು ವಿಕಲ ಚೇತನರಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದರು. ಈ ಸ್ಪರ್ಧೆಯ ವಿಜೇತರನ್ನು ಮುಂದೆ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಕರೆದುಕೊಂಡು ಹೋಗಲಾಗುತ್ತದೆ  ಎ.11ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾ‌ರ್ ರೆಡ್ಡಿ ಉದ್ಘಾಟಿಸುವರು. ಎ. 12ರಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಸಂಘದ ಅಧ್ಯಕ್ಷ ಸುನಿಲ್ ಕ್ಸೇವಿಯರ್ , ಉಪಾಧ್ಯಕ್ಷ ಕೃಷ್ಣ ಶೆಣೈ, ಕೋಶಾಧಿಕಾರಿ ಸುಜಿತ್ ಕುಮಾರ್, ಆನಂದ ಸೋನ್ಸ್ ಉಪಸ್ಥಿತರಿದ್ದರು. - [ಏ.10 ರಿಂದ 12 ರವರೆಗೆ 10ನೇ ವರ್ಷದ ಜಿಪಿಎಲ್ ಉತ್ಸವ](https://prakharanews.com/gpl-2026/): ಮಂಗಳೂರು : ಮೂಲ್ಕಿ-ಹೆಜಮಾಡಿಯ ಶ್ಯಾನುಭೋಗ್ ಕುದ್ರುವಿನಲ್ಲಿ ಏಪ್ರಿಲ್ 10 ರಿಂದ 12ರವರೆಗೆ ಜಿಪಿಎಲ್ ಉತ್ಸವನ್ನು ದಶಮಾನೋತ್ಸವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಪಿಎಲ್ ಉತ್ಸವ ಸಮಿತಿಯ ಸದಸ್ಯರಾದ ಕಿರಣ್ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 2017ರಲ್ಲಿ ಆರಂಭವಾದ ಈ ಉತ್ಸವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜವನ್ನು ಒಗ್ಗೂಡಿಸುವ ಉದ್ದೇಶ ಹೊಂದಿದ್ದು, ಈ ಬಾರಿ ಮೂರು ದಿನಗಳ ಕಾಲ ಕ್ರಿಕೆಟ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು. ಕರ್ನಾಟಕ, ಕೇರಳ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಿಂದ 16 ತಂಡಗಳು ಭಾಗವಹಿಸುವ ಕ್ರಿಕೆಟ್ ಟೂರ್ನಮೆಂಟ್ ಪ್ರಮುಖ ಆಕರ್ಷಣೆಯಾಗಿದ್ದು, ವಿಜೇತರಿಗೆ ನಗದು, ಟ್ರೋಫಿ ಹಾಗೂ ಬಹುಮಾನಗಳು ನೀಡಲಾಗುತ್ತದೆ. ಜೊತೆಗೆ ಫುಡ್ ಕೋರ್ಟ್, ಬೋಟಿಂಗ್, ಕಿಡ್ಸ್ ಝೋನ್, ಶಾಂಭವಿ ಆರತಿ, ಪೆಟ್ ಶೋ, ಕ್ರೀಡಾ ಕಾರ್ನಿವಲ್, ಒಂಟೆ-ಕುದುರೆ ಸವಾರಿ ಹಾಗೂ ಪ್ಲೀ ಮಾರುಕಟ್ಟೆ ವ್ಯವಸ್ಥೆ ಇರಲಿದೆ ಎಂದರು. ಸಾಂಸ್ಕೃತಿಕ ವೇದಿಕೆಯಲ್ಲಿ ನೃತ್ಯ, ಸಂಗೀತ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು […] - [ಪ್ರಜ್ವಲ್ ಯುವಕ ಮಂಡಲ (ರಿ) ಸೂಟರಪೇಟೆ ಇದರ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಹೃದಯಾಘಾತದಿಂದ ನಿಧನ](https://prakharanews.com/mlr-82/): ಮಂಗಳೂರು: ಪ್ರಜ್ವಲ್ ಯುವಕ ಮಂಡಲ (ರಿ) ಸೂಟರಪೇಟೆ ಇದರ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು (ವ.46) ಮಂಗಳವಾರದಂದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕಿಶೋರ್ ಕುಮಾರ್ ರವರು ಕನ್ಸ್ಟ್ರಕ್ಷನ್ ಸೈಟ್ ಸೂಪರ್ ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ಮಂಗಳವಾರ ಪಾಣೆಮಂಗಳೂರಿನ ಸೈಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅಂದು ಮಧ್ಯಾಹ್ನ ದ ಹೊತ್ತಿಗೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಸಹ ಉದ್ಯೋಗಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಿಶೋರ್ ರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಜ್ವಲ್ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದು ಉತ್ತಮ ಸಂಘಟಕರಾಗಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಕಿಶೋರ್ ಅವರ ಶ್ರೀಮತಿಯ ಸೀಮಂತ ಕಾರ್ಯಕ್ರಮವನ್ನು ಕೂಡ ಇತ್ತೀಚೆಗೆ ನಡೆಸಿದ್ದರು.ಅವರ ಅಕಾಲಿಕ ಮರಣದಿಂದ ಮನೆಯವರು, ಸ್ನೇಹಿತರು ದಿಗ್ಭ್ರಮೆಗೊಂಡಿದ್ದು ಹಲವಾರು ಗಣ್ಯರು ಹಾಗೂ ಪ್ರಜ್ವಲ್ ಯುವಕ ಮಂಡಲದ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ. - [ಪುತ್ತೂರು: ಬಡ ಕುಟುಂಬಕ್ಕೆ ಬೇಕಿದೆ ವೈದ್ಯಕೀಯ ಚಿಕಿತ್ಸೆಗೆ ನೆರವು](https://prakharanews.com/puttur-16/): ಪುತ್ತೂರು: ಒಂದೆಡೆ ಅಪಘಾತದಲ್ಲಿ ಕಾಲು ಕಳೆದುಕೊಂಡ ತಂಗಿ, ಇನ್ನೊಂದೆಡೆ ವಯಸ್ಸಾದ ತಂದೆ ಇದರ ಮಧ್ಯೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದ ತಾಯಿ, ಇಡೀ ಕುಟುಂಬದ ಜವಾಬ್ದಾರಿ ಒಬ್ಬ ಮಗನ ಮೇಲಿದೆ. ತಾನು ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿ ಯಾಗಿದ್ದು ಇಂತ ಪರಿಸ್ಥಿತಿಯಲ್ಲಿ ಕೆಲಸ, ಮನೆ ಬಿಟ್ಟು ತಾಯಿಯ ಆರೈಕೆಗಾಗಿ ಆಸ್ಪತ್ರೆಯಲ್ಲಿರುವ ಪರಿಸ್ಥಿತಿ. ವೈದ್ಯಕೀಯ ವಿವರ: ನನ್ನ ಹೆಸರು ಹರಿನಾರಾಯಣ ಭಟ್ ಕಾನ ಮೂಲೆ ಬೆಟ್ಟಂಪಾಡಿ ನನ್ನ ಹೆಂಡತಿಗೆ ಗಂಭೀರವಾದ ಕಿಡ್ನಿ ಸಮಸ್ಯೆ ಮತ್ತು ಹೃದಯದ ಸಮಸ್ಯೆ (Heart Attack) ಉಂಟಾಗಿದ್ದು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ತಕ್ಷಣ ಚಿಕಿತ್ಸೆ (Dialysis) ಮಾಡಿಸಬೇಕೆಂದು ತಿಳಿಸಿದ್ದಾರೆ. ಈಗಾಗಲೇ 2 ಲಕ್ಷ ಮುಗಿದಿದ್ದು ಇನ್ನೂ ಸುಮಾರು 3 ರಿಂದ 4 ಲಕ್ಷ ಬೇಕಾಗಾಬಹುದು ಎಂದು ತಿಳಿಸಿದ್ದಾರೆ, ನಮ್ಮ ಕುಟುಂಬದ ಆರ್ಥಿಕ ಸ್ಥಿತಿ ದುರ್ಬಲವಾಗಿದೆ. ಆದ್ದರಿಂದ, ದಯವಿಟ್ಟು ಮಾನವೀಯ ದೃಷ್ಟಿಯಿಂದ ಸಾಧ್ಯವಾದಷ್ಟು ಹಣಕಾಸಿನ ಸಹಾಯವನ್ನು ನೀಡುವಂತೆ ವಿನಂತಿಸುತ್ತೇನೆ. ನಿಮ್ಮ ಸಹಾಯದಿಂದ ನನ್ನ ಹೆಂಡತಿಯ ಜೀವ ಉಳಿಯಲು […] - [ಲೋಕಾಯುಕ್ತ ಬಲೆಗೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ – 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ](https://prakharanews.com/lokayuktha-rade/): ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 3,37,04,000 ರೂಪಾಯಿ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ. ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಅವರು ನೀಡಿದ ಸೋರ್ಸ್ ವರದಿ ಆಧರಿಸಿ ಏಪ್ರಿಲ್ 6ರಂದು ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಲೋಕಾಯುಕ್ತ ಎಸ್‌ಪಿ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ಮುಂಜಾನೆ 6 ತಂಡಗಳು ಬಾಬು ಅವರ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿರುವ ವಾಸದ ಮನೆ, ವಾಣಿಜ್ಯ ಮಳಿಗೆಗಳು, ಬೆಂಗಳೂರಿನಲ್ಲಿರುವ ಫ್ಲಾಟ್ ಹಾಗೂ ಮಂಗಳೂರಿನ ವಾಸದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿವೆ. ಬೆಂಗಳೂರಿನ ನಿವಾಸದಲ್ಲಿ 23.64 ಲಕ್ಷ ರೂಪಾಯಿ ನಗದು ಸೇರಿದಂತೆ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ […] - [ಚಿಕ್ಕಮಗಳೂರು :ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳದ ಯುವತಿ ನಿಗೂಢವಾಗಿ ನಾಪತ್ತೆ..!](https://prakharanews.com/ckm-2/): ಚಿಕ್ಕಮಗಳೂರು : ಮಡಿಕೇರಿಯ ತಡಿಯಂಡಮೋಳ್ ಪರ್ವತ ಚಾರಣದ ವೇಳೆ ಕೇರಳದ ಯುವತಿ ಶರಣ್ಯ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು ಸುರಕ್ಷಿತವಾಗಿ ಕುಟುಂಬದ ಜೊತೆ ಸೇರಿಕೊಂಡಿದ್ದಾಳೆ. ಇದೀಗ ಚಿಕ್ಕಮಗಳೂರಿನಲ್ಲಿ ಕೇರಳ ಮೂಲದ ಯುವತಿ ಕುಟುಂಬದ ಜೊತೆ ಪ್ರವಾಸಕ್ಕೆ ಬಂದ ಸಂಧರ್ಭದಲ್ಲಿ ನಾಪತ್ತೆಯಾಗಿದ್ದು, ಹುಡುಕಾಟ ತೀವ್ರಗೊಂಡಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕುಟುಂಬದ ಜೊತೆ ಪ್ರವಾಸಕ್ಕೆ ಬಂದಿದ್ದ ಕೇರಳದ ಪಾಲಕ್ಕಾಡ್ ಮೂಲದ ನಂದನಾ( 22) ಎಂಬ ಯುವತಿ ಚಾರಣದ ವೇಳೆ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಕುಟುಂಬದ 40 ಸದಸ್ಯರ ತಂಡದಲ್ಲಿ ಭಾಗವಹಿಸಿದ್ದ ನಂದನಾ, ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಾ ತೆರಳುವಾಗ ತಂಡದಿಂದ ಬೇರ್ಪಟ್ಟು ಹೋಗಿದ್ದಾಳೆ. ಕುಟುಂಬದ ಸದಸ್ಯರು ಮೇಲಕ್ಕೆ ತಲುಪಿದ ನಂತರವೇ ನಂದನಾ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪ್ರಸ್ತುತ ಅರಣ್ಯ ಇಲಾಖೆ ಸಿಬ್ಬಂದಿ, ಚಿಕ್ಕಮಗಳೂರು ಗ್ರಾಮಾಂತರ ಕಾರ್ಯಾಚರಣೆ ಸ್ಥಳೀಯರು ಮತ್ತು ತೀವ್ರ ಶೋಧ ನಡೆಸುತ್ತಿದ್ದಾರೆ. ಚಂದ್ರದ್ರೋಣ ಪರ್ವತವು ದಟ್ಟ ಅರಣ್ಯ ಮತ್ತು ಕಡಿದಾದ ಬೆಟ್ಟಗುಡ್ಡಗಳಿಂದ ಕೂಡಿದ್ದು, ಮಂಜು ಮತ್ತು ಕತ್ತಲು ಶೋಧ […] - [BREAKING NEWS: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಆರು ಮಂದಿ ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ…!](https://prakharanews.com/mlr-ccb/): ಮಂಗಳೂರು : ತೊಕ್ಕೊಟ್ಟಿ‌ನಲ್ಲಿ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ. ಬಂಧಿತ ಆರೋಪಿಗಳು ಉಳ್ಳಾಲದ ರಫತ್ ಆಲಿ, ಮೂಡುಶೆಡ್ಡೆಯ ರಿಜ್ವಾನ್, ಫೈಸಲ್ ನಗರದ ಜುಟ್ಟು ಅಶ್ಫಕ್, ಕಲ್ಲಡ್ಕದ ಖಲೀಲ್, ಬಜಾಲ್ ನ ಶಾಕೀರ್ ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್  ಎಂದು ತಿಳಿದುಬಂದಿದೆ.. ಆರೋಪಿಗಳನ್ನು ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ವಿಟ್ಲದ ಬುಡೋಳಿ ಎಂಬಲ್ಲಿ ವಶಕ್ಕೆ ಪಡೆದಿದ್ದು ಆರೋಪಿಗಳು ಮೈಸೂರು, ಬೆಂಗಳೂರು ಕಡೆಗೆ ಪರಾರಿಯಾಗಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ. - [ಸುಳ್ಯ : ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಬಂಧನ](https://prakharanews.com/sullia-6/): ಸುಳ್ಯ : ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಎಂದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಏಪ್ರಿಲ್‌ 06 ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿತನಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ಸ್ವಾದೀನಪಡಿಸಿಕೊಂಡು , ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. - [ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ; ದೇರಳಕಟ್ಟೆಯಲ್ಲಿ 22ನೇ, ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ!](https://prakharanews.com/mcc-bank-4/): ಮಂಗಳೂರು: ಎಂಸಿಸಿ ಬ್ಯಾಂಕ್ 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ. ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ದಾಖಲಿಸಿದೆ. ನಿವ್ವಳ ಎನ್‌ಪಿಎ (Net NPA) ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ. 2018ನೇ ವರ್ಷದಲ್ಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯಲ್ಲಿ ರೂ.500 ಕೋಟಿ ಇದ್ದ ಬ್ಯಾಂಕಿನ ಒಟ್ಟು ವ್ಯವಹಾರವು ಕಳೆದ ಏಳೂವರೆ ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ. ಇದು 114 ವರ್ಷದ ಇತಿಹಾಸವಿರುವ ಬ್ಯಾಂಕಿನ ಚರಿತ್ರೆಯಲ್ಲಿಯೇ ದಾಖಲೆಯಾಗಿದೆ. ಬ್ಯಾಂಕಿನ ನೆಟ್‌ವರ್ತ್ ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಠೇವಣಿಗಳು ಹಾಗೂ ಸಾಲಗಳ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಿದೆ. ಆರ್ಥಿಕ […] - [ಮಂಗಳೂರು: ಜಪ್ಪಿನಮೊಗರು ವಾರ್ಡಿನ ನವೀಕೃತ "ವೈದ್ಯನಾಥ ಆಟೋ ಪಾರ್ಕ್" ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್](https://prakharanews.com/mla-south-16/): ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್‌ ಗೆ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಅಳವಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಆಟೋ ಚಾಲಕರು ಶ್ರಮಿಕ ವರ್ಗವಾಗಿದ್ದು, ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುವವರು. ಸದ್ಯ ಎಲ್ಲೆಡೆ ವಿಪರೀತ ಬಿಸಿಲಿನ ವಾತಾವರಣವಿದ್ದು ತಮ್ಮ ಆಟೋಗಳು ಬಿಡುವಿನ ವೇಳೆ ನೆರಳಲ್ಲಿ ಇರಬೇಕು ಎಂದು ಬಯಸುತ್ತಾರೆ. ಅವರ ಬೇಡಿಕೆಗೆ ಅನುಗುಣವಾಗಿ ಇಲ್ಲಿಗೆ ಸುಸಜ್ಜಿತ ಮೇಲ್ಛಾವಣಿ ಹಾಗೂ ಇಂಟರ್ ಲಾಕ್ ಅಳವಡಿಸಲಾಗಿದ್ದು ಎಲ್ಲಾ ರಿಕ್ಷಾ ಚಾಲಕ ಬಂಧುಗಳಿಗೆ ಉಪಯೋಗವಾದರೆ ಅದೇ ಸಂತೋಷವೆಂದರು. ಈ ವೇಳೆ ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ನಿಕಟ ಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ವೀಣಾ ಮಂಗಳಾ, ದಕ್ಷಿಣ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ರಾಮ್ ಪ್ರಸಾದ್, ಜಪ್ಪಿನಮೊಗರು ಶಕ್ತಿ ಕೇಂದ್ರ ಪ್ರಮುಖ್ ಕೀರ್ತೇಶ್ ಅಮೀನ್, ಆರಕ್ಷಕರಾದ ಗಂಗಾಧರ್, ಪ್ರಮುಖರಾದ ಸುರೇಂದ್ರ ಜೆ, ಪುಷ್ಪರಾಜ್ […] - [ಲಾಕ್‌ಡೌನ್ ಸಮಯದಲ್ಲಿ ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ.!](https://prakharanews.com/lockup-death-case/): ಚೆನ್ನೈ: ತಮಿಳುನಾಡಿನಲ್ಲಿ 2020ರಲ್ಲಿ ನಡೆದ ಸಾತಂಕುಲಂ ಪೋಲೀಸ್ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ.‌ ದೇಶಾದ್ಯಂತ ಸಂಚಲನ ಮೂಡಿಸಿದ್ದ ತಮಿಳುನಾಡಿನ ಸಾತಂಕುಲಂ ಪೋಲಿಸ್ ಕಸ್ಟಡಿ ಸಾವಿನ ಪ್ರಕರಣದಲ್ಲಿ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಕೊರೊನಾ ಲಾಕ್‌ಡೌನ್ ಸಮಯದಲ್ಲಿ ತಂದೆ ಮತ್ತು ಮಗನನ್ನು ಅನ್ಯಾಯವಾಗಿ ಕೊಂದ 9 ಮಂದಿ ಪೊಲೀಸರಿಗೆ ಮಧುರೈನ ವಿಶೇಷ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಖಾಕಿಗಳ ವರ್ತನೆಗೆ ನ್ಯಾಯಾಲಯವು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ಇದನ್ನು ಅತ್ಯಂತ ಅಪರೂಪದ ಅಪರಾಧ ಎಂದು ಕರೆದಿರುವ ನ್ಯಾಯಾಲಯ ಇದು ಅತ್ಯಂತ ಕ್ರೂರತೆ ಮತ್ತು ಅಧಿಕಾರ ದುರುಪಯೋಗವನ್ನು ಸಾಬೀತುಪಡಿಸುತ್ತದೆ.  ಮಾನವೀಯತೆಯ ಜ್ವಾಲೆಗಳನ್ನು ಹೊತ್ತಿಸಿದೆ ಎಂದಿದೆ. ಜೂನ್ 19, 2020 ರಂದು, ತೂತುಕುಡಿ ಜಿಲ್ಲೆಯ ಸಾತಂಕುಲಂ ನಿವಾಸಿ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಕರೋನ ಲಾಕ್‌ಡೌನ್ ಸಮಯದಲ್ಲಿ ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ತಮ್ಮ ಮೊಬೈಲ್ ಅಂಗಡಿಯನ್ನು […] - [ಸೌದಿಯ ಅಲ್ ಜುಬೈಲ್ ಕೈಗಾರಿಕಾ ನಗರಿ ಮೇಲೆ ಇರಾನ್ ಕ್ಷಿಪಣಿ ದಾಳಿ: ಪೆಟ್ರೋಕೆಮಿಕಲ್ ಘಟಕಗಳು ಭಸ್ಮ](https://prakharanews.com/saudi-war/): ರಿಯಾದ್/ದುಬೈ : ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿರುವ ವಿಶ್ವದ ಪ್ರಮುಖ ಕೈಗಾರಿಕಾ ಕೇಂದ್ರ ‘ಅಲ್ ಜುಬೈಲ್’ ಮೇಲೆ ಇರಾನ್ ಸೋಮವಾರ ಭೀಕರ ಡ್ರೋನ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಪೆಟ್ರೋಕೆಮಿಕಲ್ ಘಟಕಗಳಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮುಗಿಲೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಇರಾನ್ ಏಕಕಾಲದಲ್ಲಿ ಹಲವು ಆತ್ಮಹತ್ಯಾ ಡ್ರೋನ್ ಹಾಗೂ ಕ್ಷಿಪಣಿಗಳನ್ನು ಬಳಸಿ ಈ ದಾಳಿ ನಡೆಸಿದೆ. ಸೌದಿಯ ವಾಯು ರಕ್ಷಣಾ ವ್ಯವಸ್ಥೆಯು ಬಹುತೇಕ ಕ್ಷಿಪಣಿಗಳನ್ನು ಹೊಡೆದುರುಳಿಸಿದೆಯಾದರೂ, ಕೆಲವು ಕ್ಷಿಪಣಿಗಳ ಅವಶೇಷಗಳು ನೇರವಾಗಿ ತೈಲ ಸಂಸ್ಕರಣಾ ಮತ್ತು ಪೆಟ್ರೋಕೆಮಿಕಲ್ ಘಟಕಗಳ ಮೇಲೆ ಬಿದ್ದಿವೆ. ಪರಿಣಾಮವಾಗಿ ಇಡೀ ಕೈಗಾರಿಕಾ ವಲಯ ದಟ್ಟ ಕಪ್ಪು ಹೊಗೆಯಿಂದ ಆವೃತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಜಾಗತಿಕ ತೈಲ ಮಾರುಕಟ್ಟೆಗೆ ಹೊಡೆತ: ಅಲ್ ಜುಬೈಲ್ ವಿಶ್ವದ ಅತಿದೊಡ್ಡ ಕೈಗಾರಿಕಾ ನಗರಗಳಲ್ಲಿ ಒಂದಾಗಿದ್ದು, ಇಲ್ಲಿನ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾದರೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ. […] - [ರೆಡಿಮೆಡ್ ದೋಸೆ ಹಿಟ್ಟಿನಿಂದ ಮಾಡಿದ ದೋಸೆ ತಿಂದು ಇಬ್ಬರು ಪುಟಾಣಿಗಳ ಸಾವು; ಪೋಷಕರ ಸ್ಥಿತಿ ಗಂಭೀರ](https://prakharanews.com/food-poison/): ಅಹಮದಾಬಾದ್ : ಅಹಮದಾಬಾದ್‌ನ ಸ್ಥಳೀಯ ಅಂಗಡಿಯಿಂದ ಖರೀದಿಸಿದ ಹಿಟ್ಟಿನಿಂದ ತಯಾರಿಸಿದ ದೋಸೆಯನ್ನು ಕುಟುಂಬವು ಸೇವಿಸಿದ ನಂತರ, ಅವರ ಮೂರು ತಿಂಗಳ ಮಗು ಮತ್ತು ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಂದಖೇಡ ಪ್ರದೇಶದಲ್ಲಿ ಶಂಕಿತ ಆಹಾರ ವಿಷಾಹಾರಕ್ಕೆ (Food Poisoning) ಇಬ್ಬರು ಹೆಣ್ಣುಮಕ್ಕಳು ಬಲಿಯಾಗಿದ್ದಾರೆ. ಮಾರುಕಟ್ಟೆಯಿಂದ ತಂದಿದ್ದ ರೆಡಿಮೇಡ್ ದೋಸೆ ಹಿಟ್ಟಿನಿಂದ ತಯಾರಿಸಿದ ಆಹಾರ ಸೇವಿಸಿದ ನಂತರ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ವಿಮಲ್ ಪ್ರಜಾಪತಿ ಎಂಬುವವರು ಏಪ್ರಿಲ್ 1ರಂದು ಸ್ಥಳೀಯ ‘ಘನಶ್ಯಾಮ್ ಡೈರಿ’ಯಿಂದ ದೋಸೆ ಹಿಟ್ಟು ಖರೀದಿಸಿದ್ದರು. ಅದನ್ನು ಸೇವಿಸಿದ ನಂತರ ವಿಮಲ್ ಅವರಿಗೆ ವಾಂತಿ ಆರಂಭವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯದ ಅವರ ಪತ್ನಿ ಭಾವನಾ ಅದೇ ಹಿಟ್ಟಿನಿಂದ ದೋಸೆ ತಯಾರಿಸಿ ತಾನು ಸೇವಿಸಿ, 4 ವರ್ಷದ ಮಗಳು ಮಿಶ್ರಿಗೂ ನೀಡಿದ್ದರು. . ಆದರೆ, ಅವರ ಮೂರು ತಿಂಗಳ ಮಗಳು ರಾಹಾ, ತಾಯಿಯ ಎದೆಹಾಲು ಕುಡಿದ ತಕ್ಷಣ ಆರೋಗ್ಯ ಹದಗೆಟ್ಟಿತು. ಏಪ್ರಿಲ್ 4ರಂದು ಎರಡೂವರೆ […] - [ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಇರುವಾಗಲೇ ನೇಣಿಗೆ ಶರಣಾದ ತಮಿಳು ನಟಿ ಸುಭಾಷಿಣಿ...!](https://prakharanews.com/chennai/): ಚೆನ್ನೈ,: ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ, ಅಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಸಿನಿಮಾ ಚಿತ್ರೀಕರಣದ ಹಿನ್ನೆಲೆ ಚೆನ್ನೈನ ಪೋರೂರು ಬಳಿಯ ಅಯ್ಯಪ್ಪಂತಂಗಲ್‌ನಲ್ಲಿರುವ ಅಪಾರ್ಟ್ಮೆಂಟ್‌ವೊಂನ್ನು ಬಾಡಿಗೆ ಪಡೆದಿದ್ದರು. ಮಾ.3ಕ್ಕೆ ಆ ಮನೆಗೆ ಬಂದಿದ್ದರು. ಪೊಲೀಸರ ಮಾಹಿತಿ ಪ್ರಕಾರ, ಏ.5ರ ರಾತ್ರಿ ತಮ್ಮ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತಮ್ಮ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದು, ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಇರುವಾಗಲೇ ನೇಣಿಗೆ ಶರಣಾಗಿದ್ದಾರೆ. ಕೂಡಲೇ ಅವರ ಪತಿ ಅಪಾರ್ಟ್ಮೆಂಟ್‌ನ ಸಿಬ್ಬಂದಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿಬ್ಬಂದಿ ಪೋರೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಶವವನ್ನು ಕೆಳಗಿಳಿಸಿ, ಸರ್ಕಾರಿ ಆಸ್ಪತ್ರೆಗೆ ರವಾನಿಸಿದರೂ ಕೂಡ […] - [ಬಂಟ್ವಾಳ:ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ](https://prakharanews.com/theft-arrest-5/): ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 21, 2026 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಲಾಗಿತ್ತು. ಬಿಎನ್ಎಸ್, 2023 ರ ಸೆಕ್ಷನ್ 303(2) ರ ಅಡಿಯಲ್ಲಿ ಅಪರಾಧ ಸಂಖ್ಯೆ 37/2026 ಎಂದು ಪ್ರಕರಣ ದಾಖಲಿಸಲಾಗಿದ್ದು, ಬಂಟ್ವಾಳ ಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿ ಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಸ್ಕೂಟರ್ ಸುಮಾರು 50,000 ರೂ. ಮೌಲ್ಯದ್ದಾಗಿದ್ದು, ಆರೋಪಿಗಳಿಂದ ಅದನ್ನು ವಶಪಡಿಸಿಕೊಳ್ಳಲಾಗಿದೆ. - [ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಹೊಸ ಇತಿಹಾಸ : 2025-26ನೇ ಆರ್ಥಿಕ ವರ್ಷದಲ್ಲಿ ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ.](https://prakharanews.com/scdcc-bank/): ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2025-26ನೇ ಸಾಲಿನಲ್ಲಿ ದಾಖಲೆಯ ಸಾಧನೆ ಮಾಡಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿರುವ ಈ ಬ್ಯಾಂಕ್, ರೂ. 20,226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ರೂ.17,366.68 ಕೋಟಿ ವ್ಯವಹಾರಕ್ಕೆ ಹೋಲಿಸಿದರೆ ಈ ಬಾರಿ ಶೇ.16.47ರಷ್ಟು ಏರಿಕೆ ಕಂಡು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಮುಂದಿನ 2026-27ನೇ ಸಾಲಿಗೆ ರೂ.22,500 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ. ದಾಖಲೆ ಲಾಭಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ರೂ. 131.14 ಕೋಟಿ ಲಾಭ ಗಳಿಸಿದ್ದು, ಇದು ಕಳೆದ ವರ್ಷದ ರೂ.110.41 ಕೋಟಿಗೆ ಹೋಲಿಸಿದರೆ ಶೇ.18.78ರಷ್ಟು ಹೆಚ್ಚಾಗಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಇದು ಸಾರ್ವಕಾಲಿಕ ದಾಖಲೆ ಲಾಭವಾಗಿದೆ. ಅನುತ್ಪಾದಕ ಆಸ್ತಿ (NPA) ಪ್ರಮಾಣವು ಶೇ.2.42ರಿಂದ ಶೇ.2.21ಕ್ಕೆ ಇಳಿಕೆಯಾಗಿರುವುದು ಬ್ಯಾಂಕಿನ ಆರ್ಥಿಕ ಶಕ್ತಿಯನ್ನು ಸೂಚಿಸುತ್ತದೆ. ಠೇವಣಿ ಮತ್ತು […] - [ಪೊಳಲಿ ದೇವಸ್ಥಾನಕ್ಕೆ ವಿಹೆಚ್‌ಪಿ–ಬಜರಂಗದಳ ಪಾದಯಾತ್ರೆ : ವಸ್ತ್ರಸಂಹಿತೆ ಜಾರಿಗೆ ಆಗ್ರಹ.](https://prakharanews.com/vhp-dk/): ಬಂಟ್ವಾಳ : ಬಂಟ್ವಾಳ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಹಾಗೂ ಬಜರಂಗದಳ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ 7ನೇ ವರ್ಷದ ಪಾದಯಾತ್ರೆ ಭಾನುವಾರ ಭಕ್ತಿಭಾವದಿಂದ ನಡೆಯಿತು. ಬೆಳಿಗ್ಗೆ 5 ಗಂಟೆಗೆ ಕೈಕಂಬ–ಪೊಳಲಿ ದ್ವಾರದಿಂದ ಪ್ರಾರಂಭವಾದ ಪಾದಯಾತ್ರೆ ಸುಮಾರು 8:30ಕ್ಕೆ ದೇವಸ್ಥಾನ ತಲುಪಿತು. ಈ ಪಾದಯಾತ್ರೆಯಲ್ಲಿ ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದು, ಧಾರ್ಮಿಕ ಉತ್ಸಾಹದ ವಾತಾವರಣ ನಿರ್ಮಾಣವಾಯಿತು. ಪೊಳಲಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ, ಗೋಶಾಲೆ ನಿರ್ಮಾಣ ಹಾಗೂ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಅನುಮೋದನೆ ದೊರಕಿದ್ದರೂ, ಅದು ಇನ್ನೂ ಸಂಪೂರ್ಣವಾಗಿ ಜಾರಿಯಾಗಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಇದೇ ರೀತಿ, ವಸ್ತ್ರಸಂಹಿತೆ ಜಾರಿಗೆ ಕಳೆದ ಏಳು ವರ್ಷಗಳಿಂದ ಪಾದಯಾತ್ರೆಯ ಮೂಲಕ ಮನವಿ ಸಲ್ಲಿಸಲಾಗುತ್ತಿದೆಯಾದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯಾದರೂ ಪೊಳಲಿ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ವಸ್ತ್ರಸಂಹಿತೆ […] - [ರಕ್ತದಾನದಿಂದ ಮಾನವೀಯ ಸೇವೆಗೆ ಪ್ರೇರಣೆ: ರೆಡ್‌ಕ್ರಾಸ್ ನಿರ್ದೇಶಕ ಪುಷ್ಪರಾಜ್ ಜೈನ್](https://prakharanews.com/red-cross-dk-5/): ಮಂಗಳೂರು : ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಲಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪುಷ್ಪರಾಜ್ ಜೈನ್ ಹೇಳಿದರು. ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಡಾ.ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದ.ಕ.ಜಿಲ್ಲಾರೆಡ್‌ಕ್ರಾಸ್ ಸೊಸೈಟಿ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಶನಿವಾರ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್ ಭಂಡಾರಿ ಮಾತನಾಡಿ ” ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ೨ನೇ ಬಾರಿ ರಕ್ತದಾನ ಶಿಬಿರ ಆಯೋಜಿಸಿದ್ದು, ವಿದ್ಯಾರ್ಥಿಗಳುಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ’ ಎಂದರು. ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿ ನಿರ್ದೇಶಕ ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾದ ದೇವಿಪ್ರಸಾದ್, ಜ್ಯೋತಿ ಪ್ರಿಯಾ, […] - [ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೂರು ಟೋಲ್ ಗೇಟ್ ಸ್ಥಾಪಿಸಲು ಸರ್ಕಾರ ನಿರ್ಧಾರ: ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತ](https://prakharanews.com/dk-toll-issues/): ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್‌ಗೇಟ್‌ಗಳ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ 3 ಟೋಲ್‌ಗೇಟ್‌ಗಳು ಕಾರ್ಯನಿರ್ವಹಿಸುತ್ತಿರುವುದರ ನಡುವೆಯೇ, ಇನ್ನೂ 3 ಟೋಲ್‌ಗೇಟ್‌ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದ ಪ್ರಕಾರ, ಒಂದು ಟೋಲ್‌ಗೇಟ್‌ನಿಂದ ಮತ್ತೊಂದು ಟೋಲ್‌ಗೇಟ್‌ಗೆ ಕನಿಷ್ಠ 60 ಕಿ.ಮೀ ಅಂತರ ಇರಬೇಕು. ಆದರೆ ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಿಂದ ಸುಮಾರು 30 ಕಿ.ಮೀ ಅಂತರದಲ್ಲಿ ತಲಪಾಡಿ ಟೋಲ್‌ಗೇಟ್ ಮತ್ತು 42 ಕಿ.ಮೀ ಅಂತರದಲ್ಲಿ ಹೆಜಮಾಡಿ ಟೋಲ್‌ಗೇಟ್ ಇರುವುದರಿಂದ ನಿಯಮ ಉಲ್ಲಂಘನೆ ಆಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರ ನಡುವೆಯೇ ವಳಾಲು, ಪಣಕಜೆ ಮತ್ತು ಗಂಜಿಮಠ ಪ್ರದೇಶಗಳಲ್ಲಿ ಹೊಸ ಟೋಲ್‌ಗೇಟ್‌ಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಜಾರಿಗೆ ಬಂದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಒಟ್ಟು 6 ಟೋಲ್‌ಗೇಟ್‌ಗಳು ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಕಳೆದ 23 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್‌ಗೇಟ್ ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದು, […] - [ಕಾರ್ಕಳದ ರೌಡಿ ಆಸಾಮಿ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಅರೆಸ್ಟ್!!](https://prakharanews.com/karkala-arrest-3/): ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಗಣೇಶ್ ಪೂಜಾರಿ ಅವರು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಸದ್ಗುಣ ನಿವಾಸದವರು. ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ 1ರಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. ಬಂಧಿತನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ. - [ಕಡಬ:ಅಕ್ರಮ ಜಾನುವಾರು ಸಾಗಾಟ ಪತ್ತೆ: 19 ಜಾನುವಾರುಗಳು ವಶ, ಓರ್ವ ಬಂಧನ](https://prakharanews.com/kadaba-news/): ಕಡಬ, ಏ. 3: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ, ಅಮಾನುಷವಾಗಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆಯನ್ನು ಸಬ್‌ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ ನಡೆಸಲಾಗಿದ್ದು, ಹೊಸೂರು ಮೂಲದ ಅಕ್ರಮ್ ಪಾಷಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಅವನಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. - [ಮಂಗಳೂರು : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ.](https://prakharanews.com/dk-jp-order/): ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು. ಗ್ರಾಮ ಪಂಚಾಯತ್‍ಗಳÀ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚಿಸಿದರು. ಈ ಬಗ್ಗೆ ಕೂಡಲೇ ಪ್ರತೀ ತಾಲೂಕಿನಿಂದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ವರದಿ ನೀಡುವಂತೆ ಸೂಚಿಸಿದರು. ಪ್ರತೀ ತಿಂಗಳು 1 ನೇ ಮತ್ತು 3ನೇ ಶನಿವಾರದಂದು ಆಯೋಜಿಸುವ ʼಸ್ವಚ್ಛ ಶನಿವಾರʼ ಸ್ವಚ್ಛತಾ ಕಾರ್ಯದಂದು ಗ್ರಾಮ ಪಂಚಾಯತ್‍ಗಳು ತಮ್ಮ ವ್ಯಾಪ್ತಿಯ ಎಲ್ಲಾ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು. ಸ್ವಚ್ಛ ಸಂಕೀರ್ಣ ಹೊಂದಿರದ 63 ಗ್ರಾಮ ಪಂಚಾಯತ್‍ಗಳಲ್ಲಿ ಘಟಕ ನಿರ್ಮಾಣದ ಬಗ್ಗೆ ತಾಲೂಕು ಪಂಚಾಯತ್ ಅನಿಬರ್ಂಧಿತ ನಿಧಿ ಮತ್ತು […] - [ಮಂಗಳೂರು : ಏ.19 ರಿಂದ 23 ರ ವರೆಗೆ ಅತ್ತಾವರ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ.](https://prakharanews.com/mlr-81/): ಮಂಗಳೂರು : ಮಂಗಳೂರಿನ ಅತ್ತಾವರದಲ್ಲಿರುವ ಐತಿಹಾಸಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಭವ್ಯ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಉತ್ಸವದ ಅಂಗವಾಗಿ ಏಪ್ರಿಲ್ 19ರಂದು ಮಂಗಳದೇವಿ ದೇವಸ್ಥಾನದಿಂದ ಹೊರಕಾಣಿಕೆ ಮೆರವಣಿಗೆ ನಡೆಯಲಿದ್ದು, ಅದು ಅತ್ತಾವರದ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ತಲುಪಲಿದೆ. ಐದು ದಿನಗಳ ಕಾಲ ಭಕ್ತಿ ಮತ್ತು ಶ್ರದ್ಧೆಯಿಂದ ವಿವಿಧ ಪೂಜಾ ವಿಧಿಗಳು, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆಗಳು ನಡೆಯಲಿವೆ. ಏಪ್ರಿಲ್ 23ರಂದು ಬೆಳಿಗ್ಗೆ 7:30ಕ್ಕೆ ನೂತನ ಗರ್ಭಗೃಹದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಈ ಮಹತ್ವದ ಧಾರ್ಮಿಕ ವಿಧಿಯನ್ನು ಪಂದಳ ರಾಜವಂಶಸ್ಥರಾದ ಶ್ರೀ ನಾರಾಯಣ ವರ್ಮ ತಂಬೂರನ್ ಅವರ ಉಪಸ್ಥಿತಿಯಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ನೆರವೇರಿಸಲಾಗುತ್ತದೆ. ಉತ್ಸವದ ಅವಧಿಯಲ್ಲಿ ಪ್ರತಿದಿನ ಸಂಜೆ ಧಾರ್ಮಿಕ ಸಭೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಮಕೃಷ್ಣ ಮಠ, ಒಡಿಯೂರು ಗುರುದೇವ ದತ್ತ ಸಂಸ್ಥಾನ ಸೇರಿದಂತೆ ಹಲವು […] - [ನನ್ನ ಮಗನನ್ನು ಕೊಂದೇ ಬಿಟ್ಟಳು..! : ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಹಳೆಯ ಪ್ರಿಯಕರನಿಂದ ಕೂಡ ಸೌಮ್ಯ ಶೆಟ್ಟಿಯ ಮೇಲೆ ಕಿರುಕುಳ ಆರೋಪ](https://prakharanews.com/mlr-80/): ಮಂಗಳೂರು ಮಾರ್ಚ್ 31: ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಪುತ್ತೂರು ತಾಲ್ಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ (31) ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಪತ್ನಿ ಸೌಮ್ಯಾಳ ಸರಣಿ ವಿವಾಹ ಹಾಗೂ ಆಕೆ ನೀಡುತ್ತಿದ್ದ ಎನ್ನಲಾದ ಮಾನಸಿಕ ಕಿರುಕುಳವೇ ಸುದೀಪ್ ಸಾವಿಗೆ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸೌಮ್ಯಾಳ ಪರಿಚಯ ಸುದೀಪ್‌ಗೆ ಸಾಮಾಜಿಕ ಜಾಲತಾಣದ ಮೂಲಕವಾಗಿತ್ತು. ಪೋಷಕರ ವಿರೋಧದ ನಡುವೆಯೂ ಸುದೀಪ್ ಆತುರ ಬಿದ್ದು ಕಳೆದ ಫೆಬ್ರವರಿ 16 ರಂದು ದೇವಸ್ಥಾನದಲ್ಲಿ ಮದುವೆಯಾಗಿ, ಮರುದಿನವೇ ನೋಂದಾಯಿತ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿಯ ಅಸಲಿ ಮುಖವಾಡ ಕಳಚಿತ್ತು ಎಂದು ಕುಟುಂಬಸ್ಥರು ದೂರಿದ್ದಾರೆ. ಮದುವೆಯಾದ ಒಂದು ತಿಂಗಳ ಬಳಿಕ ಪತ್ನಿಯ ಕಿರುಕುಳ ತಾಳಲಾರದೆ ಸುದೀಪ್ ನೆಲ್ಯಾಡಿಯ ಪೋಷಕರ ಮನೆಗೆ ಬಂದಿದ್ದರು. ಈ ವಿಷಯ ತಿಳಿದ ಸೌಮ್ಯಾ, ಸ್ಕೂಟರ್‌ನಲ್ಲೇ 100 ಕಿ.ಮೀ ಪ್ರಯಾಣ ಬೆಳೆಸಿ ನೆಲ್ಯಾಡಿಗೆ ಬಂದು ರಸ್ತೆಯಲ್ಲೇ ಗಲಾಟೆ ಮಾಡಿದ್ದಳು. ಕಾರಿನಲ್ಲಿ ತಾಯಿಯೊಂದಿಗೆ […] - [ಹಣಕಾಸು ವರ್ಷದ ಮೊದಲ ದಿನವೇ ಶಾಕ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ](https://prakharanews.com/lpg-hike/): ನವದೆಹಲಿ : ಈಗಾಗಲೇ ಗ್ಯಾಸ್ಏ ದುಬಾರಿಯಾಗಿದ್ದು , ಗ್ಯಾಸ್ ಕೊಡ ಸಮರ್ಪಕವಾಗಿ ಸಿಗುತ್ತಿಲ್ಲ ಇದರ ಬೆನ್ನಲ್ಲಿಯೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್‌ ಕೊಟ್ಟಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಹೆಚ್ಚಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನ 195.50 ರೂಪಾಯಿ ಏರಿಕೆ ಮಾಡಿವೆ. ಈ ಮೂಲಕ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು, ಮಾರ್ಚ್ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನ 114.5 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಇದು ಕಳೆದ ಒಂದು ತಿಂಗಳಲ್ಲಿ 2ನೇ ಬಾರಿಗೆ ಮಾಡಿದ ಬೆಲೆ ಏರಿಕೆಯಾಗಿದೆ. ಸದ್ಯ ಗೃಹಬಳಕೆ ಸಿಲಿಂಡರ್‌ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 14.2 ಕೆಜಿ ಸಿಲಿಂಡರ್‌ ಬೆಲೆ ಮಾ.7 ರಂದು ಕೊನೆಯದ್ದಾಗಿ 60 ರೂ.ಗಳಿಗೆ ಹೆಚ್ಚಿಸಲಾಗಿತ್ತು. ದೆಹಲಿಯಲ್ಲಿ ಗೃಹಬಳಕೆ ಎಲ್‌ಪಿಜಿ […] - [ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್](https://prakharanews.com/mla-south-15/): ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 46ನೇ ಕಂಟೋನ್ಮೆಂಟ್ ವಾರ್ಡಿನ ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ವಿಶೇಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದ ಜನರು ನೆರೆ ಸಮಸ್ಯೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆಯೇ ಕೆಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣವಾಗಿದ್ದರೂ ಅನಿವಾರ್ಯ ಕಾರಣಗಳಿಂದ ಒಂದಷ್ಟು ಬಾಕಿ ಇದ್ದು, ಇದೀಗ ಆ ಕಾಮಗಾರಿಯನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ. ಮುಂಬರುವ ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾಳಜಿಯಿಂದ ಹಿರಿಯ ಅಧಿಕಾರಿಗಳು ನೀಡಿರುವ ಸಮಗ್ರ ವರದಿಗೆ ಅನುಗುಣವಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಅನುದಾನವನ್ನು ಒದಗಿಸಿಕೊಡಲಾಗಿದೆ ಎಂದರು. ಈ ಭಾಗದ ಜನರ ಸಮಸ್ಯೆ ಬಗೆಹರಿಯಬೇಕೆಂಬುದೇ ನಮ್ಮೆಲ್ಲರ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ ರವರ ವಿಶೇಷ ಪ್ರಯತ್ನವಿದೆ ಎಂದರು. ಬಿಜೆಪಿ ಪ್ರಮುಖರಾದ […] - [ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್](https://prakharanews.com/court-order-5/): ದೆಹಲಿ: ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ತಮ್ಮ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಹಳೆಯ ಚಿತ್ರದ ಹಾಡುಗಳನ್ನು ಬಳಸಿಕೊಂಡಿದ್ದಕ್ಕಾಗಿ, ಹಕ್ಕುಸ್ವಾಮ್ಯ (Copyright) ಉಲ್ಲಂಘನೆ ಪ್ರಕರಣದಡಿ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ರಕ್ಷಿತ್ ಶೆಟ್ಟಿ ಅವರ ಮಾಲೀಕತ್ವದ ‘‘ಪರಂವಾ ಸ್ಟುಡಿಯೋಸ್’  ನಿರ್ಮಿಸಿದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ, ಹಳೆಯ ಹಿಟ್ ಚಿತ್ರಗಳಾದ ‘ನ್ಯಾಯಕ್ಕಾಗಿ ಸವಾಲ್’ ಮತ್ತು ‘ಗಾಳಿಮಾತು’ ಚಿತ್ರದ ಹಾಡುಗಳ ಸಣ್ಣ ತುಣುಕನ್ನು ಬಳಸಲಾಗಿತ್ತು. ಈ ಹಾಡುಗಳ ಅಧಿಕೃತ ಹಕ್ಕುಗಳನ್ನು ಹೊಂದಿದ್ದ ‘ಎಮ್‌ಆರ್‌ಟಿ ಮ್ಯೂಸಿಕ್’ (MRT Music) ಸಂಸ್ಥೆಯ ನವೀನ್ ಕುಮಾರ್ ಅವರು, ತಮ್ಮ ಅನುಮತಿ ಪಡೆಯದೆ ಹಾಡುಗಳನ್ನು ಬಳಸಿದ್ದಕ್ಕಾಗಿ ಕಾನೂನು ಕ್ರಮ ಕೈಗೊಂಡಿದ್ದರು. ಆರಂಭದಲ್ಲಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು, ತದನಂತರ ಪ್ರಕರಣವು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿಶ್ ದಯಾಳ್ ಅವರ […] - [ಬಜಪೆ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ಹಣ ಕಳವು : ಅಂತಾರಾಜ್ಯದ ಕಳ್ಳನ ಬಂಧನ.](https://prakharanews.com/bajpe-theft/): ಮಂಗಳೂರು : ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಜಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಮಾರ್ಚ್ 3, 2026 ರಂದು ನಡೆದ ಕಳವು ಪ್ರಕರಣವು ಇದೀಗ ಬೆಳಕಿಗೆ ಬಂದಿದೆ. ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಮೂರು ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು ₹25,000 ನಗದು ಹಣವನ್ನು ಕಳವು ಮಾಡಿದ್ದರು. ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೊಂಡ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿದರು. ಖಚಿತ ಮಾಹಿತಿ ಆಧರಿಸಿ, ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ 25 ವರ್ಷದ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ ಅವರನ್ನು ಮಾರ್ಚ್ 31, 2026 ರಂದು ಬಂಧಿಸಲಾಯಿತು. ಪೊಲೀಸರ ವಿಚಾರಣೆಯಲ್ಲಿ ಆರೋಪಿತನು ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಕಳುವಾಗಿದ್ದ ಕಾಣಿಕೆ ಹುಂಡಿಯನ್ನು ಪೊಲೀಸರು ವಶಕ್ಕೆ […] - [ಕ್ರಿಕೆಟ್ ಆಟದ ವಿವಾದ: ಯುವಕನ ಮೇಲೆ ಕತ್ತಿಯಿಂದ ಹಲ್ಲೆ..!](https://prakharanews.com/belthangady-stab/): ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆಸಿಫ್ (36) ಗಾಯಗೊಂಡವರಾಗಿದ್ದು ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ವಿದೇಶದಲ್ಲಿ ಉದ್ಯೋಗದಲ್ಲಿರುವ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆರೀಫ್ (25) ಎಂಬಾತ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ. ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಮಾ.30 ರಂದು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಹಕೀಂ ಎಂಬವರಿಗೆ ಸೇರಿದ ಜಾಗದಲ್ಲಿ ಸ್ಥಳೀಯ ಯುವಕರು ಕ್ರಿಕೆಟ್ ಆಡುತ್ತಿದ್ದರು ಈ ವೇಳೆ ಆರೋಪಿ ಆರೀಫ್ ಕೂಡ ಇವರೊಂದಿಗಿದ್ದು ಮಾ.27ರಂದು ಕ್ರಿಕೆಟ್ ಆಡುವ ವೇಳೆ ಸ್ಥಳೀಯ ನಿವಾಸಿ ರಿಯಾಜ್ ಯಾನೆ ಅಶ್ರಫ್ ಎಂಬಾತನೊಂದಿಗೆ ಆರಿಫ್ ಜಗಳ ಮಾಡಿದ್ದರು. ಈ ವೇಳೆ ಆಸಿಫ್ ಜಗಳ ಬಿಡಿಸಿದ್ದ. ಇದೇ ವಿಚಾರವಾಗಿ ರಾತ್ರಿ ಆರಿಫ್ […] - [ಬೊಕ್ಕ ಪಟ್ಟಣ ಸರಕಾರಿ ಶಾಲೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ‘ಹರಿದ್ವರ್ಣ’ ಕಿರುಚಿತ್ರದ 29ನೇ ಪ್ರದರ್ಶನ](https://prakharanews.com/go-green/): ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಬೊಕ್ಕಪಟ್ಟನ ಇದರ ಸಹಭಾಗಿತ್ವದಲ್ಲಿ ನ್ಯಾಷನಲ್ ಅವಾರ್ಡ್ ವಿಜೇತ ಕನ್ನಡ ಕಿರುಚಿತ್ರ ಹರಿದ್ವರ್ಣ (ರಕ್ಷತಿ ರಕ್ಷಿತಃ) ಇದರ 29ನೇ ಪ್ರದರ್ಶನ 28.03.2026ನೇ ಬೆಳಿಗ್ಗೆ ಬೊಕ್ಕಪಟ್ಟನ ಸರಕಾರಿ ಶಾಲೆಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ Rtn.ಭಾಸ್ಕರ್ ರೈ ಕಟ್ಟ ಅವರು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೊಕ್ಕಪಟ್ಟಣದ ಶಾಲಾ ಆವರಣವನ್ನು ಕಂಡು ಕೊಂಡಾಡಿದರು. ಕಸ್ವಿ ಯ ಮೊದಲ ಹುಟ್ಟುಹಬ್ಬಕ್ಕೆ ಆರಂಭವಾದ ಸಂಸ್ಥೆ ಹಾಗೂ ಪ್ರಕೃತಿಯ ಉಳಿವಿನತ್ತ ಮಾಡುತ್ತಿರುವ ಕೆಲಸ ಕಾರ್ಯಗಳಿಗೆ ಪುಟಾಣಿ ಕಸ್ವಿ ಯನ್ನು ಸನ್ಮಾನಿಸಿದರು, ಇದು ಪ್ರತಿಯೊಂದು ಮಕ್ಕಳಿಗೂ ಪ್ರೇರಣೆ ಯಾಗಿರಲಿ ಎಂದರು. ಶ್ರೀಯುತ ಕೆ ವಸಂತ್ ರಾವ್ ಮಾತನಾಡಿ 2013ರಲ್ಲಿ ತಾನು ಮುತ್ತೂಟ್ ಫಿನ್ಕಾರ್ಪ್ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಆಗಿನ ರೊಟ್ರಾಕ್ಟ್ ಕ್ಲಬ್ ಮಂಗಳೂರು ಸಿಟಿ ಇದರ ಅಧ್ಯಕ್ಷರಾದ ಕೇಶವ ರಾಮಕುಂಜ ರವರು ಬಿಇಎಂ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಿ ನೆಟ್ಟ ಮಾವಿನ ಗಿಡಗಳು ಇಂದು ಹಣ್ಣುಗಳನ್ನು ನೀಡುತ್ತಿದೆ […] - [ಮಹಿಳಾ ಸಬಲೀಕರಣದಿಂದ ಸುಸ್ಥಿರ ಸಮಾಜ_ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ](https://prakharanews.com/redcross-dk/): ಮಂಗಳೂರು : ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿ ವತಿಯಿಂದ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಳೆಯ ಮಕ್ಕಳ ಶಿಕ್ಷಣದ ಜತೆ ಮಾನವೀಯ ಸೇವೆಯಲ್ಲಿ ತೊಡಗಿರುವ ಅಂಗನವಾಡಿ ಶಿಕ್ಷಕಿಯರಿಗೆ ಆರೋಗ್ಯ ಶಿಬಿರ ಸಹಿತ ವಿವಿಧ ಸೌಲಭ್ಯ ಒದಗಿಸಲು ಜಿಲ್ಲಾ ರೆಡ್‌ಕ್ರಾಸ್ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಅವರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ.ಎನ್. ಮುಖ್ಯ ಅತಿಥಿಯಾಗಿದ್ದರು. ನಗರದ ೫೦ ಅಂಗನವಾಡಿಗಳಿಗೆ ರೆಡ್‌ಕ್ರಾಸ್ ವತಿಯಿಂದ ಸಲಕರಣೆಗಳನ್ನು ವಿತರಿಸಲಾಯಿತು. ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಖಜಾಂಜಿ ಗುರುದತ್ ನಾಯಕ್ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಜಿಲ್ಲಾ […] - [ವಿಕಸಿತ ಭಾರತದ ನಿರ್ಮಾಣಕ್ಕೆ ಅಂಗನವಾಡಿಗಳ ಬಲವರ್ಧನೆ ಮೂಲಕ ಎಳೆಯ ಮಕ್ಕಳ ಮಾನಸಿಕ ಆರೋಗ್ಯ ರಕ್ಷಣೆ ಅತ್ಯಗತ್ಯ: ಸಂಸದ ಕ್ಯಾ. ಚೌಟ](https://prakharanews.com/mp-dk-8/): ನವದೆಹಲಿ: ಎಳೆಯ ವಯಸ್ಸಿನ ಮಕ್ಕಳಲ್ಲಿನ ಮಾನಸಿಕ ಆರೋಗ್ಯ ಮತ್ತು ಕಲಿಕಾ ಸವಾಲುಗಳನ್ನು ಪರಿಹರಿಸಲು ಅಂಗನವಾಡಿ ಹಾಗೂ ಆರಂಭಿಕ ಕಲಿಕಾ ಕೇಂದ್ರಗಳ ಸಬಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಪ್ರಸ್ತಾಪಿಸಿರುವ ಕ್ಯಾ.ಚೌಟ ಅವರು, ಭಾರತದಲ್ಲಿ 0-6 ವರ್ಷ ವಯಸ್ಸಿನ 16.5 ಕೋಟಿಗೂ ಹೆಚ್ಚು ಮಕ್ಕಳಿದ್ದು, ಇವರಲ್ಲಿ ಹೆಚ್ಚಿನವರು ಅಂಗನವಾಡಿ ಸೇರಿದಂತೆ ಪೂರ್ವ ಪ್ರಾಥಮಿಕ ಕಲಿಕಾ ಸಂಸ್ಥೆಗಳಿಗೆ ತೆರಳುತ್ತಿದ್ದಾರೆ. ಆದರೆ, ಈ ಹಂತದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ ADHD ಮತ್ತು ಡಿಸ್ಲೆಕ್ಸಿಯಾದಂತಹ ಮಾನಸಿಕ ಸಮಸ್ಯೆ ಹಾಗೂ ಕಲಿಕಾ ನ್ಯೂನತೆಗಳನ್ನು ಗುರುತಿಸುವ ಅಥವಾ ಆ ಬಗ್ಗೆ ಸರಿಯಾದ ಜಾಗೃತಿ ಮೂಡಿಸುವ ಜತೆಗೆ ಅದಕ್ಕೆ ಸೂಕ್ತ ಪರಿಹಾರದ ಹಾಗೂ ಬೆಂಬಲದ ಕೊರತೆ ಇರುವುದು ಕಳವಳಕಾರಿ ಎಂದು ಹೇಳಿದ್ದಾರೆ. ಎಳೆಯ ಮಕ್ಕಳಲ್ಲಿ ಕಾಡುವ ಈ ಮಾನಸಿಕ ಸಮಸ್ಯೆಗಳ ಬಗ್ಗೆ ಅಂಕಿ-ಅಂಶಗಳನ್ನು ಉಲ್ಲೇಖಿಸಿದ ಸಂಸದರು, ಪ್ರತಿ 7 ಮಕ್ಕಳ ಪೈಕಿ ಒಬ್ಬರು ಮಾನಸಿಕ […] - [ಒಂದು ಡಾಲರ್ ಗೆ 95 ರೂಪಾಯಿ – ಇತರ ದೇಶಗಳಿಗಿಂತ ನಮ್ಮ ಸ್ಥಿತಿ ಉತ್ತಮ: ನಿರ್ಮಲಾ ಸೀತಾರಾಮನ್](https://prakharanews.com/indian-economy/): ನವದೆಹಲಿ : ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿಯುತ್ತಿದ್ದರೂ, ಇತರ ಉದಯೋನ್ಮುಖ ಮಾರುಕಟ್ಟೆಗಳಿಗೆ ಹೋಲಿಸಿದರೆ ರೂಪಾಯಿ “ಸಂಪೂರ್ಣವಾಗಿ ಉತ್ತಮವಾಗಿದೆ” ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ರೂಪಾಯಿ ಅಪಮೌಲ್ಯೀಕರಣದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಭಾರತದ ಆರ್ಥಿಕ ಮೂಲಭೂತ ಅಂಶಗಳು ಮತ್ತು ವಿದೇಶೀ ವಿನಿಮಯ ಮೀಸಲು ಬಲಿಷ್ಠವಾಗಿವೆ. ನಮ್ಮ ಹಣಕಾಸು ಕೊರತೆ ನಿರ್ವಹಣೆಯನ್ನು ಇಡೀ ಜಗತ್ತು ಶ್ಲಾಘಿಸುತ್ತಿದೆ” ಎಂದರು. ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಏಷ್ಯಾದ ಬಹುತೇಕ ಕರೆನ್ಸಿಗಳು ಕುಸಿದಿದ್ದು, ಇದು ಕೇವಲ ರೂಪಾಯಿಗೆ ಸೀಮಿತವಾದ ಸಮಸ್ಯೆಯಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಕ್ಷಿಣ ಕೊರಿಯಾದ ವೊನ್ (ಶೇ 4.6), ಥಾಯ್ ಬಹ್ತ್ (ಶೇ 5.5) ಮತ್ತು ಫಿಲಿಪೈನ್ ಪೆಸೊ (ಶೇ 4.8) ರೂಪಾಯಿಗಿಂತಲೂ ಹೆಚ್ಚು ಕುಸಿತ ಕಂಡಿವೆ ಎಂದು ಸಚಿವರು ಮಾಹಿತಿ ನೀಡಿದರು. ಇದೇ ವೇಳೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಾತನಾಡಿ, 2020-21ರಲ್ಲಿ ಶೇ 6.2ರಷ್ಟಿದ್ದ ಚಿಲ್ಲರೆ ಹಣದುಬ್ಬರವು […] - [ಕಾಂಗ್ರೆಸ್ ಸರ್ಕಾರದ ನಿರ್ಧಾರ “ಆತುರಗಾರನಿಗೆ ಬುದ್ದಿ ಮಟ್ಟ ಎನ್ನುವಂತಿದೆ,ರಾಜಕೀಯ ತೆವಲಿಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿರುವುದು ಖಂಡನೀಯ– ಶಾಸಕ ಕಾಮತ್](https://prakharanews.com/mla-south-14/): ಮಂಗಳೂರು : ರಾಜ್ಯದಲ್ಲಿ ಏಕಾಏಕಿ ತೃತೀಯ ಭಾಷೆಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು ಗ್ರೇಡ್ ನೀಡುವುದನ್ನು ಆರಂಭಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ “ಆತುರಗಾರನಿಗೆ ಬುದ್ದಿ ಮಟ್ಟ” ಎನ್ನುವಂತಿದ್ದು, ರಾಜಕೀಯ ತೆವಲಿಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಶಿಕ್ಷಣ ಸಚಿವರು ಇಂತಹ ನಿರ್ಧಾರ ಕೈಗೊಂಡು ಮಕ್ಕಳ ಮೇಲೆ ಎಂತಹ ಪರಿಣಾಮ ಬೀರಿದ್ದಾರೆ ಎಂಬುದು ಅರಿವಿದೆಯೇ? ಸರಕಾರದ ಈ ನಡೆಯಿಂದ ವಿದ್ಯಾರ್ಥಿಗಳು, ಶಿಕ್ಷಕರು, ಹೆತ್ತವರು ಕಂಗಾಲಾಗಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳು ನಮ್ಮ ಸ್ಕೋರಿಂಗ್ ಸಬ್ಜೆಕ್ಟ್ ಕಥೆಯೇನು ಎಂದು ಆತಂಕಕ್ಕೊಳಗಾಗಿದ್ದಾರೆ. ಕೆಲವರು ಈಗಾಗಲೇ ಕೋರ್ಟ್ ಮೊರೆ ಹೋಗಲೂ ತಯಾರಿ ನಡೆಸಿದ್ದು, ತೃತೀಯ ಭಾಷೆ ಬೋಧಿಸುತ್ತಿರುವ ಸುಮಾರು 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಎಸೆಸೆಲ್ಸಿ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಇದಕ್ಕೆಲ್ಲಾ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವೇ ನೇರ ಕಾರಣ ಎಂದು ಆರೋಪಿಸಿದರು. ಈ ನಿರ್ಧಾರದಿಂದ ಹಿಂದಿ ಜೊತೆಗೆ ಸಂಸ್ಕೃತ, ಕೊಂಕಣಿ, ತುಳು ಭಾಷೆಗೂ […] - [ಕೊಕ್ಕಡದಲ್ಲಿ ಕಾಡಾನೆಗಳ ಹಾವಳಿ : ವಾಹನಗಳು ಜಖಂ](https://prakharanews.com/belthangady-13/): ಬೆಳ್ತಂಗಡಿ:  ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗ್ರಾಮಸ್ಥರು ತೀವ್ರ ಭೀತಿಯಲ್ಲಿ ದಿನದೂಡುವಂತಾಗಿದೆ. ಕೃಷಿ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದ ಆನೆಗಳು, ಇದೀಗ ಜನವಸತಿ ಪ್ರದೇಶದ ವಾಹನಗಳ ಮೇಲೆಯೂ ದಾಳಿ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಾರ್ಚ್  28ರಂದು ರಾತ್ರಿ ತೆಂಕುಬೈಲು ಪ್ರದೇಶದಲ್ಲಿ ಸಂಚರಿಸಿದ ಕಾಡಾನೆ, ಯಶವಂತ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಸೇರಿದ ಮಾರುತಿ ಕಾರಿನ ಮೇಲೆ ದಾಳಿ ನಡೆಸಿ ಜಖಂಗೊಳಿಸಿದೆ. ಅದರ ಬೆನ್ನಲ್ಲೇ ಮಾರ್ಚ್  29ರಂದು ಮುಂಡೂರುಪಳಿಕೆ ಸಮೀಪದ ಸಂಕುಬೈಲಿನಲ್ಲಿ ಸೇಸಪ್ಪ ಗೌಡ ಅವರಿಗೆ ಸೇರಿದ ದ್ವಿಚಕ್ರ ವಾಹನವನ್ನು ಜಜ್ಜಿದ ಘಟನೆ ವರದಿಯಾಗಿದೆ. ಕೇವಲ ವಾಹನಗಳಷ್ಟೇ ಅಲ್ಲದೆ, ಅಡಿಕೆ, ತೆಂಗು, ಬಾಳೆ ಹಾಗೂ ಭತ್ತದ ಬೆಳೆಗಳಿಗೆ ಆನೆಗಳು ನುಗ್ಗಿ ನಾಶಪಡಿಸುತ್ತಿವೆ. ರೈತರು ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಬೆಳೆಗಳು ಒಂದೇ ರಾತ್ರಿಯಲ್ಲಿ ಮಣ್ಣುಪಾಲಾಗುತ್ತಿದ್ದು, ಕೃಷಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […] - [ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ](https://prakharanews.com/puttur-kabaka/): ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1ರಲ್ಲಿ 2.91ಕೋಟಿ ರೂ. ವೆಚ್ಚದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಪ್ರಸ್ತುತ ಈ ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಕೇವಲ 531 ಚ. ಮೀಟರ್ ಉದ್ದದ ಶೆಲ್ಟರ್ ಇದೆ. ಇದೀಗ ಈ ಯೋಜನೆಯಡಿ 3392 ಚ.ಮೀಟರ್ ವಿಸ್ತೀರ್ಣದ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ ಅನುದಾನ ದೊರಕಿದೆ. ಅದರಂತೆಯೇ ಶೆಲ್ಟರ್ ನಿರ್ಮಾಣಕ್ಕೆ ಸ್ಥಳ ಗುರುತು ಮಾಡುವ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಈ ಕಾಮಗಾರಿ ಪೂರ್ಣಗೊಂಡರೆ ಕಬಕ- ಪುತ್ತೂರು ರೈಲ್ವೇ ಸ್ಟೇಶನ್ ನಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ. ಇದರೊಂದಿಗೆ ನಿಲ್ದಾಣದಲ್ಲಿ ಪ್ರಯಾಣಿಕರು ಸುಲಭವಾಗಿ ಓಡಾಡಲು ಅನುಕೂಲವಾಗುವಂತೆ ನಿಲ್ದಾಣದಲ್ಲಿ ಸದ್ಯ […] - [BREAKING NEWS...! ಮಂಗಳೂರು: 12 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮ ಹತ್ಯೆ!](https://prakharanews.com/mlr-79/): ಮಂಗಳೂರು : 12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ನಡೆದಿದೆ. ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ಇರುವ ಗೆಳೆಯನನ್ನು ನೋಡಲು ಬಂದ ಕೆ.ಎಂಸಿ ವಿದ್ಯಾರ್ಥಿ ಸೆಕ್ಯೂರಿಟಿ ಬಳಿ ಸಹಿ ಮಾಡಿಸಿ 12 ನೇ ಮಹಡಿಗೆ ಹೋಗಿದ್ದಾನೆ. ಅಲ್ಲಿಂದ ಮೊಬೈಲ್‌ ಕೆಳಗೆ ಇಟ್ಟು ಕೆಳಗೆ ಹಾರಿ ಆತ್ಮಹತ್ಯೆ ಮಾಡಿದ್ದಾನೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಆತ್ಮ ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. - [BREAKING NEWS...! ಮದುವೆಯಾದ ಒಂದೇ ತಿಂಗಳಲ್ಲಿ ಉದ್ಯಮಿ ಸಾವು: ಆತ್ಮಹತ್ಯೆಗೆ ಪ್ರಚೋದಿಸಿರುವುದಾಗಿ ಪತ್ನಿಯ ವಿರುದ್ಧ ದೂರು ದಾಖಲು](https://prakharanews.com/karkala-8/): ಕಾರ್ಕಳ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುದೀಪ್‌ನ ತಂದೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಸುದೀಪ್‌ನ ಪತ್ನಿ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆ ಪ್ರಚೋದಿಸಿರುವುದಾಗಿ ದೂರು ದಾಖಲಿಸಿದ್ದಾರೆ. ಪ್ರಕರಣ:ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಫೆ. 17ರಂದು ಪುತ್ತೂರು ಉಪನೊಂದಣಾಧಿಕಾರಿಗಳ ಕಛೇರಿಯಲ್ಲಿ ಮದುವೆಯಾಗಿದ್ದು, ಆ ಬಳಿಕ ಸುದೀಪ್ ಮತ್ತು ಸೌಮ್ಯಳು ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆಯಲ್ಲಿ ವಾಸವಾಗಿದ್ದರು. ಮಾ. 17ರಂದು ಸುದೀಪ್ ತಂದೆ -ತಾಯಿ ಮನೆಯಾದ ಪುತ್ತೂರು ತಾಲೂಕಿನ ನೆಲ್ಯಾಡಿಗೆ ಹೋಗಿದ್ದು ಈ ವೇಳೆ ಅವರ ತಾಯಿಯೊಂದಿಗೆ ಪೂಜಾ ಕಾರ್ಯಕ್ಕಾಗಿ ಕಾರಿನಲ್ಲಿ ಹೋಗುತ್ತಿದ್ದಾಗ ಆಪಾದಿತೆ ಸೌಮ್ಯ ಶೆಟ್ಟಿ ಸ್ಕೂಟಿಯಲ್ಲಿ ಬಂದು ಕಾರಿಗೆ […] - [ಆರಿಫ್ ಕೊಲೆ ಪ್ರಕರಣ: ಆರು ಆರೋಪಿಗಳ ಗುರುತು ಪತ್ತೆ](https://prakharanews.com/mlr-78/): ಮಂಗಳೂರು :ಆರಿಫ್‌ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಆರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರು ನಿರಂತರವಾಗಿ ಸ್ಥಳಾಂತರವಾಗುತ್ತಿರುವುದರಿಂದ ತಕ್ಷಣ ಬಂಧಿಸುವಲ್ಲಿ ಪೊಲೀಸ್ ತಂಡಗಳಿಗೆ ಸವಾಲು ಎದುರಾಗಿದೆ. ತನಿಖೆಯ ಸಂದರ್ಭದಲ್ಲಿ, ಸಂಚು ಹಾಗೂ ಘಟನೆಗಳ ಸಂಪೂರ್ಣ ಕ್ರಮವನ್ನು ಪುನರ್‌ನಿರ್ಮಿಸುವ ವೇಳೆ ಇನ್ನಷ್ಟು ವ್ಯಕ್ತಿಗಳ ಭಾಗವಹಿಸುವಿಕೆ ಪತ್ತೆಯಾಗಿದೆ. ಆರೋಪಿಗಳಿಗೆ ಸಹಾಯ ಮಾಡಿದರೆಂಬ ಅನುಮಾನ ಇರುವ ಕೆಲವು ವ್ಯಕ್ತಿಗಳನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಅವರ ಪಾತ್ರ ಸಾಬೀತಾದಲ್ಲಿ, ಅವರನ್ನು ಕೂಡ ಬಂಧಿಸಲಾಗುತ್ತದೆ. ಆರೋಪಿಗಳಿಗೆ ಸಹಾಯ ಮಾಡುವ ಅಥವಾ ಆಶ್ರಯ ನೀಡುವ ಯಾವುದೇ ವ್ಯಕ್ತಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 249(ಎ) ಅಡಿಯಲ್ಲಿ ಶಿಕ್ಷೆಗೆ ಒಳಪಡುವರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ನಿಯಮವನ್ನು ಹಿಂದಿನಂತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಲಾಗಿದೆ. - [ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ](https://prakharanews.com/karkala-arrest-2/): ಕಾರ್ಕಳ : ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು. ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿ ಪರಾರಿಯಾಗಿದ್ದರು. ಇದೇ ವಾಹನ ವನ್ನು ಶಿರ್ವ ಗ್ರಾಮದ ಪದವು ಬಳಿ ತಡೆದ ಪಿಎಸ್‌ಐ ಮಂಜುನಾಥ ಮರಬಾಡ ಅವರ ಮೇಲೂ ಚಾಲಕ ಕಾರು ಹತ್ತಿಸಲು ಯತ್ನಿಸಿದ್ದಾನೆ. ಅಂತಿಮವಾಗಿ ಶಿರ್ವ ಪಟ್ಟಣದಲ್ಲಿ ಪೊಲೀಸರು ಹರಸಾಹಸ ಪಟ್ಟು ವಾಹನವನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ವಿಚಾರಣೆ ನಡೆಸಿದಾಗ ಇವರು ದೊಡ್ಡ ಮಟ್ಟದ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿರುವುದು […] - [ಕುವೈಟ್‌ನ ನೀರು ಶುದ್ಧೀಕರಣ ಘಟಕದ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು](https://prakharanews.com/iran-war/): ಕುವೈತ್‌ನಲ್ಲಿ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾನೆ. ಸೇವಾ ಕಟ್ಟಡದ ಮೇಲೆ ದಾಳಿ ನಡೆಸಲಾಗಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೊಂದು ದಾಳಿ ನಡೆಸಿದೆ. ಕುವೈತ್‌ನಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾನೆ. ಮೃತರ ಗುರುತು ಲಭ್ಯವಿಲ್ಲ.ಪಶ್ಚಿಮ ಏಷ್ಯಾ ಯುದ್ಧದಲ್ಲಿ ಸಾವನ್ನಪ್ಪಿದ ಭಾರತೀಯ ಪ್ರಜೆಗಳ ಸಂಖ್ಯೆ ಕನಿಷ್ಠ ಎಂಟಕ್ಕೆ ಏರಿದೆ. ವಿದ್ಯುತ್ ಸ್ಥಾವರಗಳು ಮತ್ತು ಸಮುದ್ರ ನೀರಿನ ಉಪ್ಪುನೀರಿನ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಿಂದ ಸಾವು ಸಂಭವಿಸಿದೆ. ಈ ದಾಳಿಯು ವಿದ್ಯುತ್ ಸ್ಥಾವರಗಳು ಮತ್ತು ನೀರು ಶುದ್ಧೀಕರಣ ಘಟಕಕ್ಕೆ ತುಂಬಾ ಹಾನಿ ಮಾಡಿದೆ. ಇದನ್ನು ಗಲ್ಫ್ ರಾಜ್ಯದ ವಿರುದ್ಧ “ಇರಾನ್‌ನ ಪಾಪಪೂರಿತ ಆಕ್ರಮಣ” ಎಂದು ಖಂಡಿಸಿದೆ. - [ಮಂಗಳೂರಿನ ಉದ್ಯಮಿ - ಸಮಾಜ ಸೇವಕರಾದ ಲಯನ್ ಅನಿಲ್ ದಾಸ್ ಗೆ ಪ್ರತಿಷ್ಠಿತ "ಸುವರ್ಣ ಕನ್ನಡಿಗ - 2026" ಪ್ರಶಸ್ತಿ ](https://prakharanews.com/suvarna-kannadiga-award/): ಬೆಂಗಳೂರು: ನಾಡಿನ ಪ್ರತಿಷ್ಠಿತ ಕನ್ನಡಪ್ರಭ ದಿನಪತ್ರಿಕೆ ಹಾಗೂ ಏಷ್ಯಾನೆಟ್ ಸುವರ್ಣನ್ಯೂಸ್ ಸುದ್ದಿವಾಹಿನಿ ಸಂಸ್ಥೆಯು ನೇರ ದಿಟ್ಟ ನಿರಂತರ ಸುದ್ದಿಗಳೊಂದಿಗೆ ಸಾಮಾಜಿಕ ಕಳಕಳಿಯುಳ್ಳ ಅಭಿಯಾನಗಳ ಮೂಲಕ ಜನರ ಮೆಚ್ಚುಗೆಯನ್ನು ಪಡೆದಿದೆ. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪುರಸ್ಕರಿಸಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿವಿಧ ಪ್ರಶಸ್ತಿ ಕಾರ್ಯಕ್ರಮಗಳನ್ನು ಆಯೋಚಿಸುವ ಮೂಲಕ ಜನಮನ್ನಣೆ ಗಳಿಸಿದೆ. ಶಿಕ್ಷಣ, ಆರೋಗ್ಯ, ಉದ್ಯಮ, ಸಾಮಾಜಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭೂತಪೂರ್ವ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣನ್ಯೂಸ್ ವತಿಯಿಂದ “ಸುವರ್ಣ ಕನ್ನಡಿಗ-2026” ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.  ಈ ಬಾರಿ ಈ ಪ್ರತಿಷ್ಠಿತ “ಸುವರ್ಣ ಕನ್ನಡಿಗ-2026” ಪ್ರಶಸ್ತಿಯನ್ನು ಮಂಗಳೂರಿನ ಖ್ಯಾತ ಉದ್ಯಮಿ, ಸಮಾಜ ಸೇವಕರು, ಸಂಘಟಕರು  ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್  ಹೆಲ್ತ್ ಕೇರ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಲಯನ್ ಅನಿಲ್ ದಾಸ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಕರ್ನಾಟಕ ವಿಧಾನ […] - [ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ತಪ್ಪು ಒಪ್ಪಿಕೊಂಡ ಉಗ್ರ ಶಾರೀಕ್](https://prakharanews.com/bomb-blast-2/): ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಮೊಹಮ್ಮದ್ ಶಾರೀಕ್ ತಪ್ಪು ಒಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಶಿವಮೊಗ್ಗದ ಶಾರೀಕ್ (27) 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಕಂಕನಾಡಿ ಸಮೀಪ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಸ್ಫೋಟದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಉಗ್ರನನ್ನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಿದ ಬಳಿಕ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. 2024ರ ಏಪ್ರಿಲ್ 20ರಂದು ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ನ್ಯಾಯಾಲಯ ಪ್ರಶ್ನಿಸಿದಾಗ ಶಾರೀಕ್ ತಾನು ನಿರಪರಾಧಿ ಎಂದು ಹೇಳಿದ್ದ. ಆದರೆ 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 229 ಅಡಿಯಲ್ಲಿ ತಪ್ರೊಪ್ಪಿಗೆ ಅರ್ಜಿ ಸಲ್ಲಿಸಿ ತನ್ನ ನಿಲುವು ಬದಲಿಸಿದ್ದ. ಈ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ. ತನ್ನ ಅರ್ಜಿಯಲ್ಲಿ ಶಾರೀಕ್ ಕುಕ್ಕರ್‌ನಲ್ಲಿ ಐಇಡಿ ಇಟ್ಟು […] - [ಬೆಳ್ತಂಗಡಿ: ಬೈಕ್ ಅಫಘಾತ ಸಹ ಸವಾರ ಸಾವು…!](https://prakharanews.com/belthangady-12/): ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗದ ಡಿವೈಡರ್ ಗೆ ಮಾ.28 ರಂದು ರಾತ್ರಿ ಸುಮಾರು 12:30 ಗಂಟೆಗೆ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತಿದ್ದಾಗ ಕೆ.ಟಿ.ಎಮ್ ಕಂಪನಿಯ ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ಪುತ್ತೂರು ಇಡ್ತಿದು ನಿವಾಸಿ ಲಿಖಿತ್(20) ನಿವಾಸಿ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರು ಕೂಡ ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಾಗಿದ್ದಾರೆ. ಉಜಿರೆ ಕಾಲೇಜ್ ರಸ್ತೆಯಲ್ಲಿ ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […] - [ಬೆಂಗ್ರೆ ಶ್ರೀ ಆದಿ ನಾಗದೇವರ ಬನ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ](https://prakharanews.com/mla-south-13/): ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್‌ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹು ದಿನಗಳ ಬೇಡಿಕೆಯಂತೆ ಈ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು ಎಂದರು. ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ, ಸ್ಥಳೀಯ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು. - [ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿ ಅರೆಸ್ಟ್.. !](https://prakharanews.com/arrest-11/): ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಕಾಮೆಂಟ್ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆ 2026ರ ಜನವರಿ ತಿಂಗಳಲ್ಲಿ ನಡೆದಿದ್ದು, ಮಂಗಳೂರು ನಗರದ ಇಂಡಿಯಾನಾ ಕನ್ವೆನ್ನನ್ ಸೆಂಟರ್‌ನಲ್ಲಿ ನಡೆದ ಕಿರಾತ್ (ಕುರಾನ್ ಪಠಣ) ಸ್ಪರ್ಧೆಯ ವಿಡಿಯೋ ಉದಯವಾಣಿ ಫೇಸ್‌ಬುಕ್‌ ಪುಟದಲ್ಲಿ ಪ್ರಸಾರವಾಗುತ್ತಿದ್ದ ವೇಳೆ, ಗಣೇಶ್ ಪ್ರಸಾದ್‌ ಎಂಬಾತ ತನ್ನ ಫೇಸ್‌ಬುಕ್ ಖಾತೆಯಿಂದ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026ರಂತೆ ಬಿ.ಎನ್.ಎಸ್ ಕಲಂ 196 ಮತ್ತು ಐಟಿ ಕಾಯ್ದೆಯ 66ನೇ ವಿಧಿಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆಯ ವೇಳೆ, ಕೋಮು ಪ್ರಚೋದಕ ಕಾಮೆಂಟ್ ಹಾಕಿದ ವ್ಯಕ್ತಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿಯಾದ ಗಣೇಶ್ ಪ್ರಸಾದ್ (41) ಎಂದು ಪತ್ತೆಯಾಗಿದೆ. ಆರೋಪಿಯನ್ನು ಮಾರ್ಚ್ 27, 2026ರಂದು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಲುವಾಗಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಪ್ರಕರಣದ […] - [ಹೊಸ ಬಾವಿ ತೋಡುವಾಗ ದುರಂತ; 30 ಅಡಿ ಎತ್ತರದಿಂದ ತಲೆ ಮೇಲೆ ಬಿದ್ದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ , ಕಾರ್ಮಿಕ ಸಾವು](https://prakharanews.com/ullal-death/): ಮಂಗಳೂರು : ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ಕೊರೆಯುತ್ತಿದ್ದ ವೇಳೆ ಕ್ರೇನ್‌ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಕಳಚಿ ಬಿದ್ದ ಪರಿಣಾಮ ಶಿವಮೊಗ್ಗ ಮೂಲದ ವಲಸೆ ಕಾರ್ಮಿಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಲ್ಲಾಪುರ ನಿವಾಸಿ ಶಿವಕುಮಾರ್ ಜಿ.ಕೆ. (30) ಮೃತಪಟ್ಟವರು. ಸಲಾತ್ ನಗರದ ಖಾಲಿ ಸೈಟೊಂದರಲ್ಲಿ ಆರು ಮಂದಿ ಕಾರ್ಮಿಕರು ಹೊಸ ಬಾವಿ ಅಗೆಯುವ ಕೆಲಸ ಮಾಡುತ್ತಿದ್ದರು. ಸಂಜೆ 4.30ರ ಸುಮಾರಿಗೆ ಶಿವಕುಮಾರ್ ಸೇರಿದಂತೆ ಮೂವರು ಕಾರ್ಮಿಕರು 30 ಅಡಿ ಆಳದ ಬಾವಿಯೊಳಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಕ್ರೇನ್ ಮೂಲಕ ಮಣ್ಣು ತುಂಬಿದ ಕಬ್ಬಿಣದ ಬಕೆಟ್‌ ಅನ್ನು ಮೇಲಕ್ಕೆ ಎತ್ತುವ ಸಂದರ್ಭದಲ್ಲಿ, ಅದು ಅಚಾನಕ್ ಆಗಿ ಕೊಕ್ಕೆಯಿಂದ ಬೇರ್ಪಟ್ಟು ನೇರವಾಗಿ ಶಿವಕುಮಾರ್ ಅವರ ತಲೆಯ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಕೂಡಲೇ ಮೇಲಕ್ಕೆತ್ತಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ದಾರಿ […] - [ಉದ್ಯಾವರ: ಮಗಳಿಗೆ ಕ್ರಿಕೆಟ್ ಬ್ಯಾಟ್ ಕೊಡಿಸಲು ರಸ್ತೆ ದಾಟುತ್ತಿದ್ದ ತಾಯಿ ಕ್ರೇನ್ ಢಿಕ್ಕಿಯಾಗಿ ಸಾವು](https://prakharanews.com/udupi-18/): ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರವಾರ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾರವಾರದ ದಿವ್ಯಾ (45) ಮೃತ ದುರ್ದೈವಿ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದ ಪುತ್ರಿಯನ್ನು ದಿವ್ಯಾ ಅವರು ಕಾರಿನಲ್ಲಿ ಕಾರವಾರಕ್ಕೆ ಕರೆದೊಯ್ಯುತ್ತಿದ್ದರು. ಸಂಜೆ ವೇಳೆ ಉಪಾಹಾರಕ್ಕಾಗಿ ಉದ್ಯಾವರ ಬಲಾಯಿಪಾದೆ ಬಳಿ ಯು-ಟರ್ನ್ ಪಡೆದು ಗುಡ್ಡೆಯಂಗಡಿಯ ಹೋಟೆಲ್‌ವೊಂದಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಪುತ್ರಿ ತನಗೆ ಕ್ರಿಕೆಟ್ ಬ್ಯಾಟ್ ಬೇಕೆಂದು ಹಠ ಹಿಡಿದಿದ್ದಾಳೆ ಎನ್ನಲಾಗಿದೆ. ಮಗಳ ಆಸೆಯಂತೆ ಬ್ಯಾಟ್ ಕೊಡಿಸಲು ರಸ್ತೆಯ ಮತ್ತೊಂದು ಬದಿಗೆ ತೆರಳಲು ದಿವ್ಯಾ ಅವರು ಹೆದ್ದಾರಿ ದಾಟುತ್ತಿದ್ದಾಗ ವೇಗವಾಗಿ ಬಂದ ಕ್ರೇನ್ ಅಕಸ್ಮಾತ್ ಢಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಖಾಸಗಿ ವಾಹನದಲ್ಲಿ ದಿವ್ಯಾ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. - [ಬೆಳ್ತಂಗಡಿ:ಜಪ್ತಿ ಮಾಡಿದ 4,175 ಲೀಟರ್ ಅಕ್ರಮ ಡೀಸೆಲ್ ಹರಾಜು – ₹2.35 ಲಕ್ಷಕ್ಕೆ ಮಾರಾಟ](https://prakharanews.com/belthangady-11/): ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಪ್ರದೇಶದ ಮನೆಯ ಮನೆಯ ಶೆಡ್‌ನಲ್ಲಿ ಯಾವುದೇ ಅನುಮತಿ ಪಡೆಯದೆ  ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಡೀಸೆಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿಯಮಾನುಸಾರ ಕಂದಾಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಹರಾಜು ಪ್ರಕ್ರಿಯೆ ನಡೆಸಲಾಗಿದೆ. ಅಂಗಳದಲ್ಲಿ ಪತ್ತೆಯಾದ ಒಟ್ಟು 4,175 ಲೀಟರ್ ಡೀಸೆಲ್ ಅನ್ನು ಮಾರ್ಚ್ 27ರಂದು ಹರಾಜಿಗೆ ಇಡಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಏಳು ಮಂದಿ ಭಾಗವಹಿಸಿದ್ದರು. ಹರಾಜಿನಲ್ಲಿ ಪುತ್ತೂರು ತಾಲೂಕಿನ ಹಿರೆಬಂಡಾಡಿ ನಿವಾಸಿ ನಾರಾಯಣ ಗೌಡ ಅವರು ಪ್ರತಿ ಲೀಟರ್‌ಗೆ ₹60 ದರ ನೀಡುವ ಮೂಲಕ ಒಟ್ಟು ₹2,35,800 ನೀಡಿ ಡೀಸೆಲ್ ಖರೀದಿಸಿದ್ದಾರೆ. ಮಾರ್ಚ್ 9ರ ಮಧ್ಯರಾತ್ರಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ ಅವರ ನೇತೃತ್ವದಲ್ಲಿ ನಡೆದ ದಾಳಿಯ ವೇಳೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಖಚಿತ ಮಾಹಿತಿಯ ಮೇರೆಗೆ ಕಣಿಯೂರು ಗ್ರಾಮದ ಬನಶಂಕರಿ ನಿಲಯದ ಜಗದೀಶ್ (35) ಅವರ ಮನೆಯ ಹಿಂಭಾಗದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಡೀಸೆಲ್ ಅನ್ನು ವಶಪಡಿಸಿಕೊಂಡಿದ್ದರು. ದಾಳಿಯ […] - [ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ರಂಗ ಸಾಧಕರಿಗೆ ಮಲಬಾರ್ ಪ್ರಶಸ್ತಿ.](https://prakharanews.com/malabar-awards/): ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ರಂಗ ಸಾಧಕರನ್ನು ಗೌರವಿಸಿ “ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಪುರಸ್ಕೃತರಾದವರು:ವಿದ್ಯುಷಿ ಸುಮಂಗಲ ರತ್ನಾಕರ್ (ಭರತನಾಟ್ಯ ಗುರು)ರೊ. ಶ್ರೀ ಸತೀಶ್ ಬೋಳಾರ್ (ಕಲಾ ಪೋಷಕರು)ಶ್ರೀ ಕರುಣಾಕರ ಶೆಟ್ಟಿ (ಕಲಾ ಸಂಘಟಕರು) ಕಾರ್ಯಕ್ರಮಕ್ಕೆ ಅಗರಿ ಎಂಟರ್ಪ್ರೈಸಸ್ ಮಾಲಕರಾದ ಶ್ರೀ ಅಗರಿ ರಾಘವೇಂದ್ರ ರಾವ್, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಶ್ರೀ ಗೋಪಾಲಕೃಷ್ಣ ಶೆಟ್ಟಿ ಹಾಗೂ ಎಕ್ಸ್ಪರ್ಟ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕರುಣಾಕರ ಬಲ್ಕೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ರಂಗ ಸಂಗಾತಿ ಮಂಗಳೂರು ಸಂಸ್ಥೆಯ ಸಂಚಾಲಕರಾದ ಶಶಿರಾಜ್ ರಾವ್ ಕಾವೂರು ನಿರೂಪಿಸಿದರು. ಇದೇ ವೇಳೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಶಾಖೆಯ ಸ್ಟೋರ್ ಹೆಡ್ ಹಫೀಜ್ ರಹ್ಮಾನ್, ಅಸಿಸ್ಟೆಂಟ್ ಸ್ಟೋರ್ ಹೆಡ್ ನಜರ್ ಅಹಮ್ಮದ್, […] - [ಮಂಗಳೂರು: ಆರೀಫ್ ನ ಬರ್ಬರ ಹತ್ಯೆ- ಬುಡೋಳಿಯಲ್ಲಿ ಪತ್ತೆಯಾಯ್ತು ಹಂತಕರು ಬಳಸಿದ್ದ ಕಾರು!](https://prakharanews.com/mlr-77/): ಮಂಗಳೂರು: ಫ್ಲೈಓವರ್ ಮೇಲೆ ಇಂದು ಮಾರ್ಚ್ 27ರಂದು ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಿಫ್‌ನನ್ನು ಬೈಕ್‌ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಈ ನಡುವೆ ಬಂಟ್ವಾಳದ ಬುಡೋಳಿಯಲ್ಲಿ ಸಂಶಯಾಸ್ಪದ ಕಾರು ಇರುವ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಕಾರ್ಯಪ್ರವೃತ್ತರಾದ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ಹೋಗಿ, ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪತ್ತೆಯಾದ ಕಾರಿನ ಆಧಾರದ ಮೇಲೆ ಹಂತಕರ ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಟ್ಲ ಪೊಲೀಸರು ವಶಪಡಿಸಿಕೊಂಡ ಕಾರನ್ನು ಮುಂದಿನ ತನಿಖೆಗಾಗಿ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. - [ಬಂಟ್ವಾಳದಲ್ಲಿ ಕೆಲಸಕ್ಕೆ ಹೋದ ಯುವತಿ ಮನೆಗೆ ಮರಳದೇ ನಾಪತ್ತೆ!](https://prakharanews.com/bantwal-missing/): ಬಂಟ್ವಾಳ : ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ. ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿಯಾಗಿದ್ದಾರೆ. ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿ, ಕಂಪ್ಯೂಟರ್ ತರಬೇತಿ ಪಡೆದಿದ್ದ ಫಾತಿಮತ್ ಇಪ್ರಾ, ಬಿ.ಸಿ.ರೋಡ್‌ನ ಸೈಬರ್ ಸೆಂಟರ್‌ನಲ್ಲಿ ಉದ್ಯೋಗದಲ್ಲಿದ್ದರು.  ಮಾರ್ಚ್ 24ರಂದು ಕೆಲಸಕ್ಕೆ ತೆರಳಿದ ಅವರು, ಬಳಿಕ ಮನೆಗೆ ಮರಳದೇ ಕಾಣೆಯಾಗಿದ್ದಾರೆ. ಯುವತಿ ಕೆಲಸ ಮಾಡುತ್ತಿದ್ದ ಸ್ಥಳದ ಮಾಲೀಕರಾದ ಮನ್ನೂರು ಅವರಲ್ಲಿ ವಿಚಾರಿಸಿದಾಗ, ಆ ದಿನ ಫಾತಿಮತ್ ಇಪ್ರಾ ಕೆಲಸಕ್ಕೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಯುವತಿಯ ತಾಯಿ ರಝೀಯಾ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - ["ರಂಗಮಂಟಪ "ದಲ್ಲಿ ಕಲೆಯ ವಿಸ್ಮಯ ಜಗತ್ತುಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ](https://prakharanews.com/mlr-76/): ಮಂಗಳೂರು : ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ `ಲಲಿತ ಮಂಟಪ’ ಕೃತಿ ಬಿಡುಗಡೆ ಸಮಾರಂಭ ನಗರದ ಸಪ್ನ ಬುಕ್ ಹೌಸ್‌ನಲ್ಲಿ ಬುಧವಾರ ನಡೆಯಿತು. ಕೃತಿ ಬಿಡುಗಡೆಗೊಳಿಸಿದ ಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಮಾತನಾಡಿ ” ದೇಶದ ಪ್ರಮುಖ ನೃತ್ಯ ಕಲಾವಿದರ ಸಂದರ್ಶನ ಲೇಖನಗಳು ಲಲಿತ ಮಂಟಪದಲ್ಲಿ ಸುಂದರವಾಗಿ ಮೂಡಿ ಬಂದಿದೆ. ಪ್ರತಿಯೊಬ್ಬರ ಕಲಾವಿದರ ಬದುಕು ಕೂಡಾ ಅದ್ಭುತ. ಅವರ ಬದುಕು ಮತ್ತು ಕಲಾ ಪ್ರಕಾರವನ್ನು ರಾಜಲಕ್ಷ್ಮಿ ಅವರು ಮನೋಜ್ಞವಾಗಿ ತೆರೆದಿಟ್ಟಿದ್ದಾರೆ. ಕಲೆಯ ವಿಸ್ಮಯ ಜಗತ್ತು ತೆರೆದುಕೊಂಡಿದೆ. ಲಲಿತ ಮಂಟಪದಲ್ಲಿ ನಾಟ್ಯ ಪರಂಪರೆ, ಕಲಾವಿದರ ತ್ಯಾಗ, ಸವಾಲುಗಳ ಸಮಗ್ರ ಮಾಹಿತಿ ಇದೆ ಎಂದರು.ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿದ್ದರು. ಕೃತಿಕರ್ತೆ ರಾಜಲಕ್ಷ್ಮಿ ಕೋಡಿಬೆಟ್ಟು ಸ್ವಾಗತಿಸಿದರು. ಲೇಖಕಿ ದೇವಿಕಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು. ವಿನೂತನ ರಂಗ ಪ್ರಯೋಗರಂಗ ಮಂಟಪ ಕೃತಿ ಆಧರಿಸಿದ ವಿನೂತನ ರಂಗ ಪ್ರಯೋಗ ಗೆಜ್ಜೆ ಬರೆದ […] - [ವಂದೇ ಭಾರತ್ ರೈಲಿನ ಊಟದಲ್ಲಿ ಹುಳುಗಳು ಪತ್ತೆ; ಅಡುಗೆ ಕಂಪನಿಗೆ 50 ಲಕ್ಷ ರೂಪಾಯಿ ದಂಡ..!](https://prakharanews.com/vande-bharath/): ನವದೆಹಲಿ: ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ಬಡಿಸಿದ ಊಟದ ಜೊತೆ ನೀಡಲಾದ ಮೊಸರಿನಲ್ಲಿ ಹುಳುಗಳು ಕಂಡು ಬಂದ ಕಾರಣ ರೈಲ್ವೆ ಇಲಾಖೆ ಅಡುಗೆ ಬದಗಿಸುವ ಕ್ಯಾಟರಿಂಗ್ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿ, ಕಂಪನಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ವಿಷಯವನ್ನು ಸರಿಯಾಗಿ ನಿರ್ವಹಿಸದ ಕಾರಣ ರೈಲ್ವೆ ಸಚಿವಾಲಯವು ತನ್ನದೇ ಆದ ಕಂಪನಿಯಾದ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಾರ್ಚ್ 15 ರಂದು, ವಂದೇ ಭಾರತ್ ರೈಲಿನಲ್ಲಿದ್ದ ಏಳು ಪ್ರಯಾಣಿಕರ ಗುಂಪಿಗೆ ಭೋಜನದ ಜೊತೆಗೆ ಪ್ರಸಿದ್ಧ ಬ್ರಾಂಡ್‌ನ ಪ್ಯಾಕ್ ಮಾಡಿದ ಮೊಸರನ್ನು ನೀಡಲಾಯಿತು. ಮೊಸರಿನ ಪ್ಯಾಕೆಟನ್ನು ತೆರೆದಾಗ, ಒಳಗೆ ಜೀವಂತ ಹುಳುಗಳು ಜೀವಂತವಾಗಿ ಹರಿದಾಡುವುದು ಕಂಡುಬಂದವು. ಈ ವಿಡಿಯೋ ವೈರಲ್ ಆಗಿ ರೈಲ್ವೆ ಇಲಾಖೆ ನೀಡುವ ಆಹಾರದ ಗುಣಮಟ್ಟದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು ಪ್ರಯಾಣಿಕ ರಿತೇಶ್ ಸಿಂಗ್ ತಕ್ಷಣವೇ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಸಮಸ್ಯೆಯನ್ನು ಫ್ಲ್ಯಾಗ್ […] - [ಎಪ್ರಿಲ್ 4 ರಂದು ಗುರುಪುರ ಮಾಣಿಬೆಟ್ಟುವಿನಲ್ಲಿ 3ನೇ ವರ್ಷದ ಜೋಡುಕರೆ ಕಂಬಳ: ಇನಾಯತ್ ಅಲಿ](https://prakharanews.com/kambula-4/): ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಪೂರ್ವಸಿದ್ಧತೆಗಳು ಭರದಿಂದ ನಡೆಯುತ್ತಿದೆ ಎಂದರು. ಏ. 4ರಂದು ಬೆಳಿಗ್ಗೆ 8.30ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಮಾಜಿ ಸಂಸದ,‌ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಸಚಿವ ದಿನೇಶ್ […] - [ಮಂಗಳೂರು : ನೀರುಮಾರ್ಗದಲ್ಲಿ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ.](https://prakharanews.com/cheetha-2/): ಮಂಗಳೂರು : ನೀರುಮಾರ್ಗ ಹಾಗೂ ಕುಡುಪು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾಜಗಾಂಭೀರ್ಯದಿಂದ ಓಡಾಡಿ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ನಿನ್ನೆ ಮುಂಜಾನೆ ನೀರುಮಾರ್ಗದ ಕೆಲಾರೈ ಸಮೀಪ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಚಿರತೆಯ ಸಂಚಾರದಿಂದ ಆತಂಕಗೊಂಡಿದ್ದ ಸ್ಥಳೀಯರು ಕಳೆದ ಕೆಲವು ದಿನಗಳಿಂದ ಭಯಭೀತರಾಗಿ ಜೀವನ ಸಾಗಿಸುತ್ತಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಜೊತೆಗೆ ಊರಿನ ಜನರು ಸಮನ್ವಯದಿಂದ ಕಾರ್ಯಾಚರಣೆ ನಡೆಸಿದ ಪರಿಣಾಮ ಈ ಯಶಸ್ಸು ಸಾಧ್ಯವಾಗಿದೆ. ಚಿರತೆಯನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ. - [BREAKING NEWS..!-ಮಂಗಳೂರು: ಉಳ್ಳಾಲದಲ್ಲಿ ಬೆಳ್ಳಂಬೆಳಗೆ ರೌಡಿಶೀಟರ್ ನ ಭೀಕರ ಹತ್ಯೆ..!](https://prakharanews.com/ullala-2/): ಮಂಗಳೂರು : ಕೆಲ ಸಮಯದಿಂದ ಸ್ತಬ್ದವಾಗಿದ್ದ ಮಂಗಳೂರು ಮತ್ತೊಮ್ಮೆ ಸುದ್ದಿಯಾಗಿದೆ. ಉಳ್ಳಾಲದ ಓವರ್ ಬ್ರಿಜ್ ಬಳಿ ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ. ಕೊಲೆಯಾದ ರೌಡಿಶೀಟರ್ ನನ್ನು ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ ಯಾನೆ ಟಾಬ್ಲೆಟ್ ಆರಿಫ್ (46) ಎಂದು ತಿಳಿದುಬಂದಿದೆ. ಈತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆರಿಫ್ ಆಗಿದ್ದು ತೊಕ್ಕೊಟ್ಟು ಫೈಓವರ್ ಬ್ರಿಜ್ ಮೇಲೆ ಇಂದು ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಈತನ ಕೊಲೆ ನಡೆದಿದೆ. ಬೈಕ್ ನಲ್ಲಿ ತೆರಳುತಿದ್ದ ವೇಳೆ ದುಷ್ಕರ್ಮಿಗಳ ತಂಡ ಆರಿಫ್ ಗೆ ಹಿಂಬದಿಂದ ಕಾರ್ ಡಿಕ್ಕಿ ಹೊಡೆದಿದೆ.  ರಸ್ತೆಗೆ ಬಿದ್ದ ಆರಿಫ್ ಮೇಲೆ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ. ಕೃತ್ಯ ಎಸಗಿದ ಬಳಿಕ ಕಾರ್ ನಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದು ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. - [ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಉಡುಪಿ ಮೂಲದ ಯುವಕ ಅರೆಸ್ಟ್](https://prakharanews.com/arrest-10/): ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ (22) ಎಂಬಾತನನ್ನು ಮಂಗಳೂರಿನ ಕಂಕನಾಡಿ ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. 2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರದ ದಿನಗಳಲ್ಲಿ, ‘TN- MADDY’ ಎಂಬ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಕೋಮು ಪ್ರಚೋದನೆ ನೀಡುವಂತಹ ವಿಷಯಗಳನ್ನು ಹಂಚಿಕೊಳ್ಳಲಾಗಿತ್ತು. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ (BNS) ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು, ಈ ಖಾತೆಯನ್ನು ನಿರ್ವಹಿಸುತ್ತಿದ್ದವರು ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ ಎಂದು ಪತ್ತೆಹಚ್ಚಿದ್ದಾರೆ. ಬಂಧಿತ ಆರೋಪಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಆರೋಪಿ ಪವನ್ ವಿರುದ್ಧ ಈಗಾಗಲೇ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲೂ ಇಂತಹುದೇ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. - [ಬೆಳಾಲು ಸೊಸೈಟಿ ವಂಚನೆ ಕೇಸ್‌: ಪರಾರಿಯಾಗಿದ್ದ ಎರಡನೇ ಆರೋಪಿ ಬಂಧನ](https://prakharanews.com/belal-society/): ಬೆಳ್ತಂಗಡಿ : ಬೆಳಾಲು ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನಡೆದ ಸುಮಾರು 2 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿಯನ್ನು ಧರ್ಮಸ್ಥಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳಾಲು ನಿವಾಸಿ ಪ್ರಶಾಂತ್ ಬಿ. ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸದಾಶಿವ ಯಾನೆ ಸುಜಿತ್ ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನೊಬ್ಬ ಆರೋಪಿಯಾಗಿದ್ದ ಪ್ರಶಾಂತ್ ಕಳೆದ ಕೆಲವು ದಿನಗಳಿಂದ ಪರಾರಿಯಾಗಿದ್ದನು. ಪೊಲೀಸರ ಮಾಹಿತಿ ಪ್ರಕಾರ, ಸಹಕಾರಿ ಸಂಘದ ಸಿಬ್ಬಂದಿಗಳಾದ ಸದಾಶಿವ ಯಾನೆ ಸುಜಿತ್ ಹಾಗೂ ಪ್ರಶಾಂತ್ ಬಿ. ಅವರು 2022ರ ಫೆಬ್ರವರಿ 18ರಿಂದ 2025ರ ಮಾರ್ಚ್ 25ರವರೆಗೆ ಒಟ್ಟು 2,12,08,328.15 ರೂ.ಗಳನ್ನು ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ. ಸಂಘದ ಠೇವಣಿ ರಶೀದಿಗಳನ್ನು ಕಳವು ಮಾಡಿ, ನಿಧಿಯನ್ನು ದುರ್ಬಳಕೆ ಮಾಡಿರುವುದಾಗಿ ಸಂಘದ ಅಧ್ಯಕ್ಷ ಪದ್ಮಗೌಡ ಅವರು ದೂರು ದಾಖಲಿಸಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಇಬ್ಬರು ಆರೋಪಿಗಳನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. - [ಕೇರಳ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮದ್ಯ ನಿಷೇಧ - ಜಿಲ್ಲಾಧಿಕಾರಿ ಆದೇಶ](https://prakharanews.com/kerala-elections/): ಮಂಗಳೂರು : ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ರ ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಹಾಗೂ ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ”(ಆಡಿಥಿ ಆಚಿಥಿ) ಎಂದು ಘೋಷಿಸಲಾಗಿದೆ. ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿ/ಬಾರ್ ಸನ್ನದುಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಹಾಗೂ ಈ ದಿನಗಳಂದು ನಿಷೇಧಿಶಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಶಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ. - [ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ನಡೂರು ನಿಧನ..](https://prakharanews.com/udupi-17/): ಬ್ರಹ್ಮಾವರ: ಕರಾವಳಿಯ ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ. ಸಾವನ್ನಪ್ಪಿದ್ದಾರೆ. ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದ ಪ್ರಕಾಶ್ ಕುಲಾಲ್ ನಡೂರು ನಿನ್ನೆ ಸಂಜೆ ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ನಂತರ ಬೆಳಿಗ್ಗೆ ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹೆಂಚು ತೆಗೆದು ಒಳಗೆ ಹೋಗಿ ನೋಡಿದಾಗ ಹೃದಯಾಘಾತದಿಂದ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ. ಅತಿದೊಡ್ಡ ಭಜನಾ ಕಾರ್ಯಕ್ರಮಗಳಲ್ಲಿ ಒಂದಾದ ಸಂಕೀರ್ತನ ಮಂದಾರ್ತಿ ಸೇರಿ ಹತ್ತು ಹಲವು ಕಡೆಗಳಲ್ಲಿ ತಮ್ಮನ್ನು ಭಜನೆಗಾಗಿ ಸಮರ್ಪಿಸಿಕೊಂಡ ಯುವಕ ಪ್ರಕಾಶ್ ಕುಲಾಲ್. ಯಾವುದೇ ಹಣ ಅಥವಾ ಇತರ ಫಲಾಪೇಕ್ಷೆಗಳಿಲ್ಲದೆ ಭಜನಾ ತರಬೇತಿ ನೀಡುತ್ತಿದ್ದ, ತನ್ನ ಹೆಚ್ಚಿನ ಸಮಯವನ್ನು ಭಜನೆಗಾಗಿ ಮೀಸಲಿಡುತ್ತಿದ್ದ ಯುವಕ ಪ್ರಕಾಶ್ ಕುಲಾಲ್.ಕರಾವಳಿಯ ಭಜನಾ ಕ್ಷೇತ್ರದಲ್ಲಿ ಅತ್ಯಂತ ಲವಲವಿಕೆಯಿಂದ ಗುರುತಿಸಿಕೊಂಡು, ಸದಾ ಹಸನ್ಮುಖಿಯಾಗಿದ್ದ ಯುವಕ […] - [ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!](https://prakharanews.com/puttur-15/): ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4ನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್‌ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸರಿತಾ ಡಿ. ಅವರು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದಾರೆ ಷರತ್ತುಗಳು : ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್‌ ಸಲ್ಲಿಸುವುದು.ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಾಕ್ಷ್ಯನಾಶಕ್ಕೆ ಯತ್ನಿಸಬಾರದು.ವಿಚಾರಣಾ ಸಮಯದಲ್ಲಿ ತಪ್ಪದೇ ನ್ಯಾಯಾಲಯಕ್ಕೆ ಹಾಜರಾಗಬೇಕು. - [ಮಾರ್ಚ್ 26 ರಿಂದ 29 ರವರೆಗೆ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಆಚರಣೆ.](https://prakharanews.com/vhp-ramotsava/): ಮಂಗಳೂರು : ವಿಶ್ವ ಹಿಂದು ಪರಿಷತ್‌ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು. ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ ಸ್ಥಾನವಾದ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಆಗಬೇಕು ಅನ್ನುವ ಸಂಕಲ್ಪದಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರಾರಂಭಿಸಿದ ಶ್ರೀ ರಾಮೋತ್ಸವ ಸಮಿತಿಯು ಇಂದು ತನ್ನ 25ನೇ ವರ್ಷದ ರಜತ ಮಹೋತ್ಸವನ್ನು ಆಚರಿಸುತ್ತಿದ್ದು ರಾಮನ ಆದರ್ಶವನ್ನು ಗುಣಗಾನ ಮಾಡುತ್ತಾ ಬಂದಿದೆ ಎಂದರು . ಮಾರ್ಚ್ 26 ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಿಂದ – ಕದ್ರಿ ಮೈದಾನಕ್ಕೆ ಶ್ರೀ ರಾಮ, ಸೀತಾ, ಲಕ್ಷ್ಮಣ, ಹನುಮಂತ ದೇವರ […] - [ಪರ್ಮಿಟ್ ಪಡೆದುಕೊಂಡು ಮಂಗಳೂರಿನ ಹಲವು ಭಾಗಗಳಲ್ಲಿ ಸಂಚರಿಸದೆ ಸಾರ್ವಜನಿಕರಿಗೆ ತೊಂದರೆಗೆ ಕಾರಣವಾಗಿರುವ ಸಿಟಿ ಬಸ್ ಗಳಿಗೆ ಖಡಿವಾಣ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಆಗ್ರಹ](https://prakharanews.com/mla-south-12/): ಮಂಗಳೂರು : ಮಂಗಳೂರುನಗರ ವ್ಯಾಪ್ತಿಯಲ್ಲಿ ಅನೇಕ ಸಿಟಿ ಬಸ್ ಗಳು ನಿಗದಿತ ಸ್ಥಳಕ್ಕೆ ಹೋಗದಿರುವುದರಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದು ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ನಗರದ ಕೆಲವು ಸಿಟಿ ಬಸ್ ಗಳು ಆರ್ಥಿಕ ಕಾರಣ ನೀಡಿ ಒಂದಷ್ಟು ಪ್ರದೇಶಗಳಿಗೆ ಸೇವೆಯನ್ನು ಸೀಮಿತಗೊಳಿಸುವುದು, ಟ್ರಿಪ್ ಕಡಿತಗೊಳಿಸುವುದು ಮೊದಲಾದ ಕಾರಣಗಳಿಗೆ ಅಲ್ಲಿ ಸರ್ಕಾರಿ ಬಸ್ ಗಳನ್ನು ಹಾಕಲಾಗಿತ್ತು. ಆದರೆ ನಂತರ ಅವುಗಳನ್ನೂ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಕ್ತಿನಗರ, ಬಜಾಲ್-ಪಡ್ಪು-ಕೊಟ್ಟಾರ, ಪಡೀಲ್-ಕಣ್ಣಗುಡ್ಡೆ, ಬೋಳೂರು ಮಾತಾ ಅಮೃತಾನಂದಮಯಿ ನಿಂದ ರೈಲ್ವೆ ಸ್ಟೇಷನ್, ಜಲ್ಲಿಗುಡ್ಡೆ, ಸರಿಪಲ್ಲ ಮೊದಲಾದ ಭಾಗದ ಜನರು ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೇ ಪರಿತಪಿಸುವಂತಾಗಿದೆ ಎಂದರು. ಈ ಬಗ್ಗೆ ದ.ಕ ಬಸ್ ಮಾಲಕರ ಸಂಘ, ಆರ್.ಟಿ.ಒ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿ, ಕೊನೆಗೆ ಉಸ್ತುವಾರಿ ಸಚಿವರಿದ್ದ ಕೆಡಿಪಿ ಸಭೆ ಹೀಗೆ ಎಲ್ಲರ ಗಮನಕ್ಕೂ ತಂದಾಗ ಒಂದೆರಡು ದಿನ ಸಮಸ್ಯೆ ಬಗೆಹರಿದಂತೆ ಕಂಡರೂ ಅಂತಿಮ ಫಲಿತಾಂಶ ಮಾತ್ರ ಶೂನ್ಯ. ಹೀಗಾಗಿ ಅಧಿವೇಶನದಲ್ಲಿಯೇ […] - [ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ](https://prakharanews.com/red-cross-dk-4/): ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್,ಡಾ.ಸುಮನ.ಬಿ., ಪಿ.ಬಿ.ಹರೀಶ್ ರೈ ,ಸಚೇತ್ ಸುವರ್ಣ ಮತ್ತು ರಾಘವೇಂದ್ರ ರಾವ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಚೇರ್ಮನ್ ಹಾಗೂ ವಿವಿಧ ಉಪಸಮಿತಿಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.ಸಿಎ ಶಾಂತಾರಾಮ ಶೆಟ್ಟಿ ಅವರು ಸತತ ೪ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಆಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ ದೆಹಲಿಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ. - [ಫುಡಾರ್ ಪ್ರತಿಷ್ಠಾನ್ ಹಾಗೂ ಎಮ್.ಸಿ.ಸಿ ಬ್ಯಾಂಕ್ ವತಿಯಿಂದ 65 ವಿಶೇಷ ಸಾಧಕರಿಗೆ ಸನ್ಮಾನ](https://prakharanews.com/mcc-bank-3/): ಮಂಗಳೂರು: ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ 3,000 ಕ್ಕೂ ಹೆಚ್ಚು ಶೈಕ್ಷಣಿಕ ಸಾಧಕರನ್ನು ಹಾಗೂ ಕಳೆದ 2 ವರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳ ಸನ್ಮಾನ ಕಾರ‍್ಯಕ್ರಮ ನೆರವೇರಿಸಿದೆ. ಈ ಬಾರಿ ಮಂಗಳೂರಿನ ಎಮ್.ಸಿ.ಸಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ, ಮತ್ತೊಂದು ಹೊಸ ಮೈಲುಗಲ್ಲಾಗಿ ಕ್ರೀಡೆ, ಕಲೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ 65 ವಿಶೇಷ ಸಾಧಕರನ್ನು ಗುರುತಿಸಿ ಪ್ರತ್ಯೇಕವಾಗಿ ಅಭಿನಂದನಾ ಕಾರ‍್ಯಕ್ರಮವನ್ನು ಮಾರ್ಚ್ 21 ರಂದು ಮಂಗಳೂರಿನ ಎಮ್.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಯಿತು. ಎಮ್.ಸಿ.ಸಿ ಬ್ಯಾಂಕಿನ ಅಧ್ಯಕ್ಶರಾಗಿರುವ ಸಹಕಾರ ರತ್ನ ಅನಿಲ್ ಲೋಬೊರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಫುಡಾರ್ ಪ್ರತಿಷ್ಠಾನ್ ಸಂಸ್ಥೆಯ ಅಧ್ಯಕ್ಷರಾಗಿರುವ ನೈಜಿಲ್ ಪಿರೇರಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾಸರ್ಕಾರಿ ಪ್ಲೀಡರ್ ಆಗಿರುವ ನ್ಯಾಯವಾದಿ ಎಮ್.ಪಿ ನೊರೊನ್ಹಾ ರವರು ಮುಖ್ಯ ಅತಿಥಿಗಳಾಗಿದ್ದರು. ಕಥೋಲಿಕ್ ಸಭಾ […] - [ಮಧ್ಯಪ್ರಾಚ್ಯ ಯುದ್ಧದ ಬಿಸಿ: ಮೊಟ್ಟೆ ದರ ದಿಢೀರ್‌ ಕುಸಿತ...!](https://prakharanews.com/egg-price/): ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ಮೊಟ್ಟೆ ದರ ಗಣನೀಯವಾಗಿ ಕುಸಿತ ಕಂಡಿದೆ. ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದ್ದರೆ, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ಒಂದು ಕಡೆ ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದ ಕಾರ್ಮೋಡ ಹಾಗೂ ರಮ್ಜಾನ್‌ ಉಪವಾಸದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಇವೆರಡೂ ಅಂಶಗಳು ಭಾರತದ ಮೊಟ್ಟೆ ಮಾರುಕಟ್ಟೆಯ ಮೇಲೆ ಅನಿರೀಕ್ಷಿತ ಪರಿಣಾಮ ಬೀರಿವೆ. ರಫ್ತು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ ಕಂಡಿದ್ದು, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ರಫ್ತು ಸ್ಥಗಿತ: ಭಾರತದಲ್ಲಿಉತ್ಪಾದನೆಯಾಗುವ ಒಟ್ಟು ಮೊಟ್ಟೆಗಳಲ್ಲಿಸುಮಾರು ಶೇ.80ರಷ್ಟು ಮೊಟ್ಟೆಗಳು ಕೊಲ್ಲಿರಾಷ್ಟ್ರಗಳಿಗೆ ರಫ್ತಾಗುತ್ತಿದ್ದವು. ಆದರೆ, ಪ್ರಸ್ತುತ ಮಧ್ಯಪ್ರಾಚ್ಯದಲ್ಲಿನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಸಾರಿಗೆ ವ್ಯವಸ್ಥೆ ಏರುಪೇರಾಗಿದ್ದು, ರಫ್ತು ಸಂಪೂರ್ಣವಾಗಿ ಸ್ಥಗಿತವಾಗಿದೆ. ರಮ್ಜಾನ್‌ ಉಪವಾಸದ ಅವಧಿಯಲ್ಲಿಮಾರುಕಟ್ಟೆಯ ಬೇಡಿಕೆಯಲ್ಲಾದ ಬದಲಾವಣೆಗಳು ಸಹ ಬೆಲೆ ಇಳಿಕೆಗೆ ಪೂರಕವಾಗಿವೆ. ಹೊರದೇಶಗಳಿಗೆ ಹೋಗಬೇಕಿದ್ದ ಮೊಟ್ಟೆಗಳ ದಾಸ್ತಾನು ಈಗ ದೇಶೀಯ ಮಾರುಕಟ್ಟೆಯನ್ನೇ ಅವಲಂಬಿಸಿದೆ. ಇದರಿಂದಾಗಿ ಸಗಟು […] - [ಹಿಂದೂ, ಸಿಖ್, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು](https://prakharanews.com/court-order-4/): ನವದೆಹಲಿ : ಸುಪ್ರೀಂ ಕೋರ್ಟ್ ಧರ್ಮಾಂತರ ಮತ್ತು ಪರಿಶಿಷ್ಟ ಜಾತಿ (SC) ಸ್ಥಾನಮಾನ ಕುರಿತಂತೆ ಮಹತ್ವದ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮವನ್ನು ಅಂಗೀಕರಿಸಿದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಮಾನ್ಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ P. K. Mishra ಮತ್ತು N. V. Anjaria ಅವರ ಪೀಠ, ಬೇರೆ ಧರ್ಮಕ್ಕೆ ಮತಾಂತರವಾದ ವ್ಯಕ್ತಿಗಳು SC ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ ಎಂದು ತೀರ್ಮಾನಿಸಿದೆ.ತೀರ್ಪಿನಲ್ಲಿ ವಿಶೇಷವಾಗಿ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅದನ್ನು ಸಕ್ರಿಯವಾಗಿ ಅನುಸರಿಸುವವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಮುಂದುವರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಇದೇ ವೇಳೆ, ಸುಪ್ರೀಂ ಕೋರ್ಟ್ Andhra Pradesh High Court ನೀಡಿದ್ದ ಹಿಂದಿನ ತೀರ್ಪನ್ನು ಸಹ ಸಮರ್ಥಿಸಿದೆ. ಆ ತೀರ್ಪಿನಲ್ಲಿಯೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರು SC ಹಕ್ಕುಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿತ್ತು.ಈ ತೀರ್ಪು ಧರ್ಮಾಂತರ ಮತ್ತು ಮೀಸಲಾತಿ ವಿಚಾರದಲ್ಲಿ ಮಹತ್ವದ ಮಾರ್ಗಸೂಚಿಯಾಗಿದ್ದು, ದೇಶದಾದ್ಯಂತ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. - [ಮಂಗಳೂರು : ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ : ಚಾಲಕರಿಂದ ಗಂಭೀರ ಆರೋಪ, ದರ ವ್ಯತ್ಯಾಸದ ವಿರುದ್ಧ ಆಕ್ರೋಶ.](https://prakharanews.com/taxi-mlr/): ಮಂಗಳೂರು : ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ಆದೇಶದಿಂದ ತಮ್ಮ ಮೇಲೆ ಅನ್ಯಾಯವಾಗಿದ್ದು, ಇದು ಉದ್ಯೋಗಕ್ಕೆ ಹೊಡೆತ ನೀಡಿದಂತಾಗಿದೆ ಎಂದು ದ.ಕ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಆಧ್ಯಕ್ಷರಾದ ಆನಂದ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ರಾಜ್ಯ ಸರ್ಕಾರ ತುರ್ತಾಗಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯಗೊಳಿಸಿತ್ತು. ಈಗಾಗಲೇ ಹಲವು ನಿಯಮಗಳನ್ನು ಪಾಲಿಸಿಕೊಂಡು ಬಂದಿರುವ ಚಾಲಕರಿಗೆ ಈ ಹೊಸ ನಿಯಮ ಹೆಚ್ಚುವರಿ ಆರ್ಥಿಕ ಹೊರೆ ತಂದಿದೆ ಎಂದು ಅವರು ಹೇಳಿದ್ದಾರೆ. ಚಾಲಕರ ಮಾಹಿತಿಯಂತೆ, ಪ್ಯಾನಿಕ್ ಬಟನ್ ಸಾಧನದ ಮೂಲ ಬೆಲೆ ₹3,000 ರಿಂದ ₹4,000ರೊಳಗೆ ಇದ್ದು, ಪಕ್ಕದ ಕೇರಳ ರಾಜ್ಯದಲ್ಲಿ ಇದೇ ದರಕ್ಕೆ ಲಭ್ಯವಿದೆ. ಆದರೆ ರಾಜ್ಯದ ಸಾರಿಗೆ ಇಲಾಖೆ ಉಚ್ಚ ನ್ಯಾಯಾಲಯಕ್ಕೆ ₹8,250ರವರೆಗೆ ಮಾರಾಟ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದು, ಈ ಯೋಜನೆಗಾಗಿ 12 ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. […] ## Pages - [Privacy Policy](https://prakharanews.com/privacy-policy/): At Prakharanews.com, we respect your privacy and are committed to protecting any personal information you share with us. What We Collect: How We Use It: Google AdSense & Cookies We use Google AdSense to show personalized ads. Google may use cookies or tracking technologies to serve ads based on your prior visits. You can opt out of personalized ads anytime by visiting Google Ads Settings. We do not sell or share your personal information with third parties. Updates to This Policy We may occasionally update this policy. Please check this page regularly. If you have any questions, contact us at […] - [Contact](https://prakharanews.com/contact/): Get In Touch Contact US Contact Us – Prakharanews.com body { font-family: Arial, sans-serif; line-height: 1.6; padding: 20px; background-color: #f9f9f9; } .contact-container { background: #fff; padding: 30px; max-width: 600px; margin: 0 auto; box-shadow: 0 0 10px rg [contact-form-7 id="1214" title="contact us"] Find Us on Social - [Prakhara News Home Page](https://prakharanews.com/): Hot News ಅನುಶ್ರೀ-ರೋಷನ್ ಪರಿಚಯ ಆಗಿದ್ದೇ ನಟ ಪುನೀತ್ ಅವರಿಂದ ಅಂತೆ…! 7 ವರ್ಷ ತುಂಬಿದ ಮಕ್ಕಳಿಗೆ `ಆಧಾರ್ ಬಯೋಮೆಟ್ರಿಕ್ ನವೀಕರಣ’ ಕಡ್ಡಾಯ ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲ.! ಗೂಗಲ್ ಟ್ರಾನ್ಸಲೇಷನ್ ಎಡವಟ್ಟಿಗೆ ಸಿಎಂ ಸಿದ್ಧರಾಮಯ್ಯ ಗರಂ – ಮೆಟಾಗೆ ಪತ್ರ ಆಗಸ್ಟ್ 28ಕ್ಕೆ ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್..!! Quick Links Technology Business Science Covid-19 Statistics edit ರಾಜ್ಯ ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ ದಿವಂಗತ ಸಾಹಸಸಿಂಹ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ ಸಲ್ಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣು ಅಳಿಯ ಅನಿರುದ್ಧ್‌ ಮನವಿ ಮಾಡಿದ್ದಾರೆ.ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಅವರ 75ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ, ಇದು […] [comment]: # (Generated by Hostinger Tools Plugin)