ಲಾರಿ-ಕಾರು ನಡುವೆ ಭೀಕರ ಅಪಘಾತ- ನಾಲ್ವರು ಸಾವು..!!

Prakhara News
1 Min Read

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿರುವ ಘಟನೆ ಸಂಪಾಜೆಯ ಕೊಯನಾಡಿನಲ್ಲಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ.

ಈ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿದ್ದು ಎನ್ನಲಾಗಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

Share This Article
Leave a Comment