ಕುಕ್ಕೆ ಸುಬ್ರಹ್ಮಣ್ಯಕ್ಕೂ ಗ್ಯಾಸ್ ಪೂರೈಕೆ ವ್ಯತ್ಯಯ ಬಿಸಿ ತಟ್ಟಿದ್ದು ಉಪಹಾರದಲ್ಲಿ ಬದಲಾವಣೆ!

Prakhara News
1 Min Read

ಸುಳ್ಯ : ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೂರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ ಎನ್ನಲಾಗಿದ್ದು, ಈಗಾಗಲೇ ಗ್ಯಾಸ್ ಪೂರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೂರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.

Share This Article
Leave a Comment