ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ರಂಗ ಸಾಧಕರಿಗೆ ಮಲಬಾರ್ ಪ್ರಶಸ್ತಿ.

Prakhara News
1 Min Read

ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ರಂಗ ಸಾಧಕರನ್ನು ಗೌರವಿಸಿ “ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ” ಪ್ರದಾನ ಮಾಡಲಾಯಿತು.

ಪುರಸ್ಕೃತರಾದವರು:
ವಿದ್ಯುಷಿ ಸುಮಂಗಲ ರತ್ನಾಕರ್ (ಭರತನಾಟ್ಯ ಗುರು)
ರೊ. ಶ್ರೀ ಸತೀಶ್ ಬೋಳಾರ್ (ಕಲಾ ಪೋಷಕರು)
ಶ್ರೀ ಕರುಣಾಕರ ಶೆಟ್ಟಿ (ಕಲಾ ಸಂಘಟಕರು)

ಕಾರ್ಯಕ್ರಮಕ್ಕೆ ಅಗರಿ ಎಂಟರ್ಪ್ರೈಸಸ್ ಮಾಲಕರಾದ ಶ್ರೀ ಅಗರಿ ರಾಘವೇಂದ್ರ ರಾವ್, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಶ್ರೀ ಗೋಪಾಲಕೃಷ್ಣ ಶೆಟ್ಟಿ ಹಾಗೂ ಎಕ್ಸ್ಪರ್ಟ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕರುಣಾಕರ ಬಲ್ಕೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ರಂಗ ಸಂಗಾತಿ ಮಂಗಳೂರು ಸಂಸ್ಥೆಯ ಸಂಚಾಲಕರಾದ ಶಶಿರಾಜ್ ರಾವ್ ಕಾವೂರು ನಿರೂಪಿಸಿದರು.

ಇದೇ ವೇಳೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಶಾಖೆಯ ಸ್ಟೋರ್ ಹೆಡ್ ಹಫೀಜ್ ರಹ್ಮಾನ್, ಅಸಿಸ್ಟೆಂಟ್ ಸ್ಟೋರ್ ಹೆಡ್ ನಜರ್ ಅಹಮ್ಮದ್, ಬ್ರಾಂಚ್ ಮ್ಯಾನೇಜರ್ ರಘುರಾಮ್ ಸಿಎಸ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫರ್ಹಾನ್, ಸೇಲ್ಸ್ ಮ್ಯಾನೇಜರ್ ಗಿರೀಶ್ ಶೆಟ್ಟಿ, ಡೆಪ್ಯೂಟಿ ಸೇಲ್ಸ್ ಮ್ಯಾನೇಜರ್ ಸಮೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಈ ಕಾರ್ಯಕ್ರಮವು ರಂಗಭೂಮಿ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಮಹತ್ವದ ವೇದಿಕೆಯಾಗಿ ಗಮನಸೆಳೆಯಿತು.

Share This Article
Leave a Comment