ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಡಿಕ್ಕಿಯಾಗಿ ಪಲ್ಟಿ; ಇಬ್ಬರು ಸಾವು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!

Prakhara News
1 Min Read

ಮಂಡ್ಯ: ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಡಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹಾಗೂ ಲಾಂಕೋ ಟೋಲ್ ಗೇಟ್ ಸಮೀಪ ಸಂಭವಿಸಿದೆ.

ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಭಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅತಿಯಾದ ವೇಗವೇ ಈ ಭೀಕರ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದ್ದು, ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ.”

ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಗಾಯಾಳು ಪ್ರಯಾಣಿಕರನ್ನು ತಕ್ಷಣವೇ ಬೆಳ್ಳೂರಿನ ಬಿಜಿಎಸ್ (BGS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share This Article
Leave a Comment