ಮಂಗಳೂರು: ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ..!

Prakhara News
1 Min Read

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪಾದಚಾರಿ ರಸ್ತೆಗಳಲ್ಲಿ ಮತ್ತು ಇನ್ನಿತರೆ ಪ್ರದೇಶದಲ್ಲಿ ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಹಿತರಕ್ಷಣೆಗೆ ಹಾಗೂ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮತ್ತು ಸಂಘಟನೆಗಳಿಂದ ದೂರುಗಳು ಬರುತ್ತಿದೆ

ಪಾಲಿಕೆಯಿಂದ ಈಗಾಗಲೇ ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರ ಪಡೆದುಕೊಂಡಿರುವ ಬೀದಿಬದಿ ವ್ಯಾಪಾರಿಗಳನ್ನು ಹೊರತು ಪಡಿಸಿ ಇತರರು ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿದ್ದಲ್ಲಿ ವ್ಯಾಪಾರವನ್ನು ಸ್ವಯಂ ಆಗಿ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಬೀದಿಬದಿ ವ್ಯಾಪಾರಿಗಳ ಕಾಯ್ದೆ ಪ್ರಕಾರ ಅನಧಿಕೃತ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article
Leave a Comment