ಪುತ್ತೂರಿನಲ್ಲಿ ಎಂಡಿಎಂಎ ಮಾರಾಟ ಜಾಲ ಪತ್ತೆ: ನಾಲ್ವರು ಬಂಧನ-ಕಾರುಗಳು ಸೇರಿ ₹6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

Prakhara News
1 Min Read

ಪುತ್ತೂರು, ಜ.24: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮತ್ತು ಸೇವನೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಟ್ಟಂಪಾಡಿ, ಇರ್ದೆ, ರೆಂಜ ಮತ್ತು ಆರ್ಲಪದವು ಪರಿಸರದಲ್ಲಿ ಮಾದಕ ವಸ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ಆರೋಪಿ ಪುತ್ತೂರು ನಿವಾಸಿಗಳಾದ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಹಾಗೂ ಬಂಟ್ವಾಳ ನಿವಾಸಿ ಮುಸ್ತಾಫ (46) ಅವರನ್ನು ಬಂಧಿಸಲಾಗಿದೆ. ಮುಸ್ತಾಫ ಮಾದಕ ವಸ್ತು ಪೂರೈಕೆದಾರನಾಗಿರುವುದು ತಿಳಿದುಬಂದಿದೆ.

ಆರೋಪಿಗಳಿಂದ ಸುಮಾರು 6.39 ಗ್ರಾಂ (ಅಂದಾಜು ಮೌಲ್ಯ ₹50,000), 0.87 ಗ್ರಾಂ ಗಾಂಜಾ, ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ₹6 ಲಕ್ಷ ಮೌಲ್ಯದ ಎರಡು ಕಾರುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ₹6.5 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರ. 13/2026 ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ 8(c), 21(b) ಮತ್ತು ಆಮ್ಸ್ ಕಾಯ್ದೆ 25(1B)(B) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಸುಷ್ಮಾ ಭಂಡಾರಿ ಹಾಗೂ ಸಿಬ್ಬಂದಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್‌, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್, ಪ್ರಶಾಂತ ಎಂ, ಪ್ರವೀಣ್ ರೈ ಪ್ರಶಾಂತ್ ರೈ ಹರ್ಷಿತ್, ಸಂಪತ್ ರವರು ಹಾಗೂ ಸೋಕೋ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment