ಮಂಗಳೂರು: ಬೆಂಗ್ರೆ ಶಿವಾಜಿ ಆಟೋ ಪಾರ್ಕ್ ಮೇಲ್ಛಾವಣಿ ಉದ್ಘಾಟನೆ

Prakhara News
1 Min Read

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ಗೆ ವಿಶೇಷ ಅನುದಾನದಲ್ಲಿ ಮೇಲ್ಛಾವಣಿ ಅಳವಡಿಸಲಾಗುತ್ತಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು.

ಈ ವೇಳೆ ಮಾತನಾಡಿದ ಶಾಸಕರು, ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರ ಈ ಹಿಂದಿನ ಮನವಿ ಮೇರೆಗೆ ಇಲ್ಲಿಗೆ ಸುಸಜ್ಜಿತ ಮೇಲ್ಛಾವಣಿ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ, ಸ್ಥಳೀಯ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
Leave a Comment